ಹಾಡು ನಿಲ್ಲಿಸಿದ ಗಾನಕೋಗಿಲೆ…!
Team Udayavani, Feb 6, 2022, 7:29 PM IST
1. ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಸಂಸದರ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ
ಕೇಂದ್ರ ಬಜೆಟ್ ಆಗಿದ್ದು, ಮುಂದಿನ ತಿಂಗಳು ರಾಜ್ಯ ಬಜೆಟ್ ಇರುವ ಹಿನ್ನೆಲೆಯಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲು ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ: ಬಿ.ಸಿ.ನಾಗೇಶ್
ಶಾಲೆಗೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶವಿಲ್ಲ. ಸಮವಸ್ತ್ರ ಆದೇಶವನ್ನು ಎಲ್ಲಾ ಶಾಲೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದಿದ್ದರೆ ಸರ್ಕಾರಿ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
3. ಹಾಡು ನಿಲ್ಲಿಸಿದ ಗಾನಕೋಗಿಲೆ
ಕೆಲವು ದಿನಗಳಿಂದ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಚಿಕಿತ್ಸೆ ಫಲಕಾರಿಯಾಗಿದೆ ಇಂದು ನಿಧನ ಹೊಂದಿದ್ದಾರೆ. ಇಡೀ ದೇಶವೇ ದುಖಃದಲ್ಲಿ ಮುಳುಗಿದೆ. ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಮುಂಬಯಿಯ ಶಿವಾಜಿ ಪಾರ್ಕ್ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯಾತಿಗಣ್ಯರು ಖ್ಯಾತ ಗಾಯಕಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.
4. ಮಣಿಪುರ: ಬಿಜೆಪಿ ವಿರುದ್ಧ ಒಂದಾದ ಕಾಂಗ್ರೆಸ್ ಸೇರಿ 6 ಪಕ್ಷಗಳು
ಮಣಿಪುರದಲ್ಲಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಐಎಂ, ಫಾರ್ವರ್ಡ್ ಬ್ಲಾಕ್, ಆರ್ಎಸ್ಪಿ ಮತ್ತು ಜೆಡಿ ಸೇರಿ ಆರು ಪಕ್ಷಗಳು ಪ್ರಗತಿಶೀಲ ಜಾತ್ಯತೀತ ಒಕ್ಕೂಟ ರಚಿಸಿ ಬಿಜೆಪಿ ವಿರುದ್ಧ ಸಮರ ಸಾರಿವೆ.
5. ನಾಗಪುರ ನಿಲ್ದಾಣದಲ್ಲಿ ಆಕರ್ಷಕ ರೆಸ್ಟೋರೆಂಟ್ ಆದ ಹಳೆಯ ರೈಲಿನ ಕೋಚ್!
ನಾಗ್ಪುರ ರೈಲು ನಿಲ್ದಾಣದಲ್ಲಿ ಕೇಂದ್ರ ರೈಲ್ವೇ ಇಲಾಖೆ ಹಳೆಯ ಕೋಚ್ ಅನ್ನು ಆಕರ್ಷಕ ರೆಸ್ಟೋರೆಂಟ್ ಆಗಿ ಪರಿವರ್ತಿಸುವ ಮೂಲಕ ಮೊದಲ ‘ರೆಸ್ಟೋರೆಂಟ್ ಆನ್ ವೀಲ್ಸ್’ಅನ್ನು ಪ್ರಾರಂಭಿಸಿದೆ. ಹೊಸ ಪರಿಕಲ್ಪನೆಯ ಬಗ್ಗೆ ರೈಲ್ವೆ ಖಾತೆ ರಾಜ್ಯ ಸಚಿವೆ ದರ್ಶನಾ ಜರ್ದೋಶ್ ಟ್ವೀಟ್ ಮಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.
6. 3 ಪಾಕಿಸ್ತಾನಿ ಸ್ಮಗ್ಲರ್ಗಳನ್ನು ಕೊಂದು 180 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ BSF
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಡ್ರಗ್ಸ್ ಕಳ್ಳಸಾಗಣೆಗೆ ಯತ್ನಿಸಿದ ಮೂವರು ಪಾಕಿಸ್ತಾನಿ ಸ್ಮಗ್ಲರ್ ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ.
7. ಫೆ.11ಕ್ಕೆ ‘ಜೇಮ್ಸ್’ ಟೀಸರ್ ಬಿಡುಗಡೆ
ನಟ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ “ಜೇಮ್ಸ್’ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ನಿಗಧಿಯಾಗಿದೆ. ಇದೇ ಫೆ. 11ಕ್ಕೆ “ಜೇಮ್ಸ್’ ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾಗಲಿದ್ದು, ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ “ಜೇಮ್ಸ್’ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಟ್ವಿಟ್ಟರ್ನಲ್ಲಿ ಅನೌನ್ಸ್ ಮಾಡಿದ್ದಾರೆ.
8. ಏಕದಿನ ಕ್ರಿಕೆಟ್ ನಲ್ಲಿ ನೂರು ವಿಕೆಟ್ ಸಾಧನೆ ಮಾಡೆದ ಯುಜುವೇಂದ್ರ ಚಾಹಲ್
ಭಾರತ ಕ್ರಿಕೆಟ್ ತಂಡದ 1000ದ ಪಂದ್ಯದಲ್ಲಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಚಾಹಲ್ ಅವರು ವಿಕೆಟ್ ಪಡೆಯುವ ಮೂಲಕ ಏಕದಿನ ಕ್ರಿಕೆಟ್ ನಲ್ಲಿ ನೂರು ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು