ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ
Team Udayavani, Dec 6, 2021, 6:15 PM IST
1. ಅಗತ್ಯ ಬಿದ್ದರೆ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ : ಸಚಿವ ನಾಗೇಶ್ ರಾಜ್ಯದ ವಿವಿಧೆದೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಪರಿಸ್ಥಿತಿ ಎದುರಾದರೆ ಪರೀಕ್ಷೆ ಮತ್ತು ಶಾಲೆಗಳನ್ನು ಬಂದ್ ಮಾಡುವುದಕ್ಕೆ ಸರಕಾರವು ಹಿಂದೆ ಸರಿಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೋಮವಾರ ಹೇಳಿದ್ದಾರೆ. 2. ಬಸವರಾಜ್ ಬೊಮ್ಮಾಯಿ ಮೇಲಿನ ನಿರೀಕ್ಷೆಗಳೆಲ್ಲಾ ಹುಸಿಯಾಗಿದೆ: ಸಿದ್ದರಾಮಯ್ಯ ಬಸವರಾಜ್ ಬೊಮ್ಮಾಯಿಯವರ ಬಗ್ಗೆ ನನಗೆ ಕೆಲವು ನಿರೀಕ್ಷೆಗಳಿದ್ದವು. ನಿಜ ಮತ್ತು ನೈತಿಕತೆಯ ಆಧಾರದ ಮೇಲೆ ಆಡಳಿತ ನಡೆಸಬಹುದು, ನಮ್ಮ ಸರ್ಕಾರದ ಅವಧಿ ಮುಗಿದಾಗ ಅಭಿವೃದ್ಧಿ ಕೆಲಸಗಳು ಯಾವ ಹಂತದಲ್ಲಿದ್ದವೋ ಅಲ್ಲಿಂದ ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ನಮ್ಮ ನಿರೀಕ್ಷೆಗಳನ್ನೆಲ್ಲ ಸುಳ್ಳು ಮಾಡಿ ಬಿಜೆಪಿಯ ಬಹಳ ದೊಡ್ಡ ಸುಳ್ಳುಗಾರರಾಗಿ ಹೊರ ಹೊಮ್ಮುತ್ತಿರುವುದನ್ನು ನೋಡಿದರೆ, ಬೊಮ್ಮಾಯಿಯವರು ಕೆಲವೇ ದಿನಗಳಲ್ಲಿ ಜನರಿಂದ ಗೇಲಿಗೆ ಒಳಗಾಗುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 3. ಸಂವಿಧಾನ ದಿನಾಚರಣೆ ಘೋಷಣೆ ಮಾಡಿದ್ದು ಮೋದಿ : ಛಲವಾದಿ ನಾರಾಯಣಸ್ವಾಮಿ ಮೊದಲು ಕಾನೂನು ದಿನಾಚರಣೆ ಅಂತ ಆಚರಣೆ ಮಾಡುತ್ತಿದ್ದೇವು, ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಗೌರವ ಸಿಗುವ ಸಲುವಾಗಿ ನ.26, 2015ರಂದು ಪ್ರಧಾನಿ ನರೇಂದ್ರ ಮೋದಿ ‘ಸಂವಿಧಾನ ದಿನಾಚರಣೆ’ ಘೋಷಣೆ ಮಾಡಿದರು ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. 4. ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,306 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 8,834 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. 5. ಲಕ್ನೋದಲ್ಲಿ AK-203 ರೈಫಲ್ಸ್ ಉತ್ಪಾದನೆ:ಭಾರತ-ರಷ್ಯಾ 5 ಸಾವಿರ ಕೋಟಿ ರೂ. ಒಪ್ಪಂದಕ್ಕೆ ಸಹಿ ಭಾರತ ಸೋಮವಾರ ರಷ್ಯಾದ ಜತೆ ಪ್ರಮುಖ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಭಾರತಕ್ಕೆ ಭೇಟಿ ನೀಡಿರುವ ರಷ್ಯಾ ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಅವರ ಜತೆ ಮಾತುಕತೆ ನಡೆಸಿ ಮಹತ್ವದ ಒಪ್ಪಂದಕ್ಕೆ ಉಭಯ ದೇಶಗಳು ಸಹಿ ಹಾಕಿರುವುದಾಗಿ ವರದಿ ತಿಳಿಸಿದೆ. 6. ಸೇನೆಯ ಅಚಾತುರ್ಯ; 14 ನಾಗರಿಕರು ಸಾವನ್ನಪ್ಪಿರುವ ಘಟನೆಗೆ ಕೇಂದ್ರ ವಿಷಾದ ವ್ಯಕ್ತಪಡಿಸಿದೆ: ಶಾ ನಾಗಾಲ್ಯಾಂಡ್ ನ ಮಾನ್ ಜಿಲ್ಲೆಯ ತಿರು ಗ್ರಾಮದಲ್ಲಿ ಶನಿವಾರ ಸೇನಾ ಕಾರ್ಯಾಚರಣೆ ವೇಳೆ ಬಂಡುಕೋರರು ಎಂದು ತಪ್ಪಾಗಿ ಭಾವಿಸಿ 14 ಮಂದಿ ನಾಗರಿಕರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವ ಘಟನೆಗೆ ಕೇಂದ್ರ ಸರ್ಕಾರ ವಿಷಾದ ವ್ಯಕ್ತಪಡಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. 7. ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ ಪುನೀತ್ ರಾಜ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಚಿತ್ರದ ಟೈಟಲ್ ಟೀಸರ್ ಇಂದು ಬಿಡುಗಡೆಯಾಗಿದೆ. ಪಿಆರ್ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಚಿತ್ರದ ಟೀಸರ್ ಇಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆಯಾಗಿದ್ದು, ಕರ್ನಾಕಟದ ವನ್ಯ ಶ್ರೀಮಂತಿಕೆಯನ್ನು ಸುಂದರವಾಗಿ ತೋರಿಸಲಾಗಿದೆ. 8. ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಟೆಸ್ಟ್ ಸರಣಿ ಇಂದು ಅಂತ್ಯವಾಗಿದೆ. ಎರಡನೇ ಪಂದ್ಯವನ್ನು 372 ರನ್ ಅಂತರದಿಂದ ಗೆದ್ದ ಭಾರತ ತಂಡ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಂಡಿದೆ. ಇದು ಭಾರತ ತಂಡದ ತವರಿನಲ್ಲಿ ಸತತ 14ನೇ ಟೆಸ್ಟ್ ಸರಣಿ ಗೆಲುವಾಗಿದೆ.ಇದೇ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮುಂಬೈ ಟೆಸ್ಟ್ ಜಯ ವಿರಾಟ್ ಕೊಹ್ಲಿಯವರ 50ನೇ ಟೆಸ್ಟ್ ವಿಜಯ. ಈ ವೇಳೆ ಮೂರು ಮಾದರಿ ಕ್ರಿಕೆಟ್ ನಲ್ಲಿ 50 ಜಯ ಸಾಧಿಸಿದ ವಿಶ್ವದ ಏಕೈಕ ಆಟಗಾರ ಎಂಬ ದಾಖಲೆಯನ್ನು ವಿರಾಟ್ ಬರೆದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ