ದೆಹಲಿಯಲ್ಲಿ ಕೊನೆಯದಾಗಿ ಭಾಷಣ ಮಾಡಿದ್ದ ಸಿಡಿಎಸ್ ಬಿಪಿನ್ ರಾವತ್
Team Udayavani, Dec 9, 2021, 7:47 PM IST
1. ನೈಟ್ ಕರ್ಫ್ಯೂ ಬಗ್ಗೆ ಸದ್ಯದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೋನ ಕುರಿತು ತಜ್ಞರ ಜೊತೆಗೆ ಚರ್ಚೆ ನಡೆಸಿದ್ದೇವೆ ಎಂದರು. ಒಮಿಕ್ರಾನ್ ಬಗ್ಗೆ ವಿವರಣೆ ನೀಡಿದ್ದಾರೆ. ನೈಟ್ ಕರ್ಫ್ಯೂ ಬಗ್ಗೆ ಸದ್ಯದಲ್ಲೇ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದರು.
2. ಮೊದಲ ಡೋಸ್ ವ್ಯಾಕ್ಸಿನೇಷನ್ ನಲ್ಲಿ ಕರ್ನಾಟಕ ನಂ. 1
ಮೊದಲ ಡೋಸ್ ವ್ಯಾಕ್ಸಿನೇಷನ್ ಹಾಕಿಸಿಕೊಂಡವರ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯವು ಮೊದಲ ಸ್ಥಾನಕ್ಕೇರಿದೆ. ಈ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಕೂ ಸಂದೇಶದಲ್ಲಿ ತಿಳಿಸಿದ್ದಾರೆ.
3. ಬಹಿರಂಗ ಚರ್ಚೆಗೆ ಬರಲು ಬೊಮಾಯಿಗೆ ಧಮ್ಮಿಲ್ಲ :ಗುಡುಗಿದ ಸಿದ್ದು
ಸಿದ್ದರಾಮಯ್ಯ ಆಡಳಿತ ಪಕ್ಷದ ಬಗ್ಗೆ ಕಿಡಿಕಾರಿದರು. ನನ್ನ 5 ವರ್ಷಗಳ ಆಡಳಿತದಲ್ಲಿ 15 ಲಕ್ಷ ಮನೆ ನೀಡಿದ್ದೆ. ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಮೂರುವರೆ ವರ್ಷಗಳ ಆಡಳಿತದಲ್ಲಿ ಒಂದು ಮನೆಯೂ ನಿರಾಶ್ರಿತರಿಗೆ ಕೊಟ್ಟಿಲ್ಲ ಎಂದರು.W ಈ ಬಗ್ಗೆ ಬಹಿರಂಗ ಚರ್ಚೆಗೆ ಅವರಿಗೆ ಧಮ್ಮಿಲ್ಲ ಎಂದು ಪ್ರತಿಪಕ್ಷ ನಾಯಕ ಹರಿಹಾಯ್ದರು.
4. ರೈತರ ಬೇಡಿಕೆ ಈಡೇರಿಕೆಗೆ ಕೇಂದ್ರ ಅಸ್ತು
ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗಿದೆ. ಈ ಮಾಹಿತಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ ಘೋಷಿಸಿದೆ.
5. ಜನವರಿಯಲ್ಲಿ ಯುಎಇಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ?
ಪ್ರಧಾನಿ ನರೇಂದ್ರ ಮೋದಿ 2022ರ ಜನವರಿಯಲ್ಲಿ ಯುಇಎ ಮತ್ತು ಕುವೈತ್ಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಕೇಂದ್ರ ಸರಕಾರದ ಮೂಲಗಳ ಪ್ರಕಾರ ಮುಂದಿನ 10ನೇ ತಾರೀಕಿನ ಒಳಗಾಗಿ ಅವರು ಈ ಪ್ರವಾಸ ಕೈಗೊಳ್ಳಲಿದ್ದಾರೆ.
6. ರಾವತ್ ಕೊನೆಯ ಭಾಷಣ
ಸಿಡಿಎಸ್ ಬಿಪಿನ್ ರಾವತ್ ಅವರು ಕೊನೆಯದಾಗಿ ಮಂಗಳವಾರ ಹೊಸದಿಲ್ಲಿಯಲ್ಲಿ ಭಾಷಣ ಮಾಡಿದ್ದರು. ಅವರು (BIMSTEC) ಬಿಐಎಂಎಸ್ಟಿಇಸಿ ರಾಷ್ಟ್ರಗಳ ಪ್ಯಾನೆಕ್ಸ್ 21ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
7. ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಯಶ್-ರಾಧಿಕಾ
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಅವರಿಗೆ ಇಂದು ಐದನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಿಸಿದರು. ಕಿರುತೆರೆಯಿಂದ ಒಟ್ಟಿಗೆ ಸಿನಿ ಪ್ರಪಂಚಕ್ಕೆ ಕಾಲಿಟ್ಟ ಈ ಜೋಡಿ 2016ರ ಡಿಸೆಂಬರ್ 9ರಂದು ವಿವಾಹವಾಗಿದ್ದರು.
8. ತಮಿಳುನಾಡು ವಿರುದ್ಧ ಎಡವಿದ ಕರ್ನಾಟಕ ತಂಡ
ವಿಜಯ್ ಹಜಾರೆ ಟ್ರೋಫಿಯ ಎರಡನೇ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದೆ. ಪುದುಚೇರಿ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮನೀಷ್ ಪಾಂಡೆ ಪಡೆ, ತಮಿಳುನಾಡು ವಿರುದ್ಧ ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ