ಬಾಲಿವುಡ್ ನಶೆ ನಂಟು: ನಿರ್ಮಾಪಕ ಇಮ್ತಿಯಾಜ್ ಖತ್ರಿ ಮನೆಗೆ ಎನ್ ಸಿಬಿ ದಾಳಿ
Team Udayavani, Oct 9, 2021, 5:34 PM IST
ಪ್ರಧಾನಿ ಮೋದಿ ಸ್ಫೂರ್ತಿದಾಯಕ ವ್ಯಕ್ತಿ
ನವೀಕರಿಸಬಹುದಾದ ಇಂಧನದ ಮೂಲಕ ಮಹತ್ವಾಕಾಂಕ್ಷೆಯ ವಾತಾವರಣ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದ ಇತರರಿಗೆ ಸ್ಫೂರ್ತಿದಾಯಕ ವ್ಯಕ್ತಿ ಎಂದು ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಹೇಳಿಕೆ ನೀಡಿದ್ದಾರೆ.
ಹೈದರಾಬಾದ್ನಲ್ಲಿ ಭಾರಿ ಮಳೆ
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ತೆಲಂಗಾಣ ತತ್ತರಿಸಿದೆ. ತೆಲಂಗಾಣದ ರಾಜಧಾನಿ ಹೈದರಾಬಾದ್, ಮೇಲ್ಚಡ್ ಮಲ್ಕಾಜರಿ ಮತ್ತು ರಂಗಾರೆಡ್ಡಿ ಜಿಲ್ಲೆಗಳಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ, ವಾಣಿಜ್ಯ ಮಳಿಗೆಗಳಿಗೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿದೆ.
ಒಎಂಆರ್ ಮಾದರಿಯಲ್ಲಿ ಸಿಬಿಎಸ್ಸಿ ಪರೀಕ್ಷೆ!
ಮುಂದಿನ ತಿಂಗಳು ನಡೆಯಲಿರುವ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ ವಾರ್ಷಿಕ ಪರೀಕ್ಷೆಯನ್ನು ಆಪ್ಟಿಕಲ್ ಮಾರ್ಕ್ ರೀಡಿಂಗ್ ಮಾದರಿಯಲ್ಲಿ ನಡೆಸಲು ಮಂಡಳಿ ನಿರ್ಧರಿಸಿದೆ. ಅಲ್ಲದೆ ಯಾವುದೇ ಪ್ರಶ್ನೆಗೆ ತಪ್ಪು ಉತ್ತರ ಗುರುತಿಸಿದರೆ ಅದನ್ನು ಮತ್ತೆ ಬದಲಾಯಿಸಲು ಮತ್ತೂಂದು ಅವಕಾಶವನ್ನು ಒಎಂಆರ್ ಶೀಟ್ನಲ್ಲೇ ನೀಡಲು ತೀರ್ಮಾನಿಸಲಾಗಿದೆ.
ಪೊಲೀಸರೆದುರು ಆಶಿಶ್ ಮಿಶ್ರಾ
ಲಖೀಂಪುರ್ಖೇರಿ ಹಿಂಸಾಚಾರ ಘಟನೆಯ ಪ್ರಮುಖ ಆರೋಪಿಯಾಗಿರುವ ಆಶಿಶ್ ಮಿಶ್ರಾ ಶನಿವಾರ ಬೆಳಗ್ಗೆ 10:30 ರ ವೇಳೆಗೆ ಉತ್ತರ ಪ್ರದೇಶದ ಕ್ರೈಂ ಬ್ರಾಂಚ್ ಪೋಲೀಸರ ಎದುರು ಹಾಜರಾಗಿದ್ದಾರೆ. ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ ಕುಮಾರ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ
ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ
ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿಯವರಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿರಲಿ, ಹಿಂದೂಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ರಜೆಯಲ್ಲಿ ತರಗತಿ ನಡೆಸಿ ಪಠ್ಯ ಪೂರ್ಣಗೊಳಿಸಿ
ಕೋವಿಡ್ ಕಾರಣದಿಂದ ತರಗತಿ ಆರಂಭ ವಿಳಂಬವಾಗಿದ್ದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಕಡಿತ ಮಾಡುವ ಚಿಂತನೆ ಸರಕಾರದ ಮುಂದಿಲ್ಲ. ಮುಂದಿನ ವರ್ಷ ಶೈಕ್ಷಣಿಕ ವೇಳಾಪಟ್ಟಿಯಂತೆಯೇ ಪರೀಕ್ಷೆ, ತರಗತಿಗಳನ್ನು ಆರಂಭಿಸಬೇಕು ಎನ್ನುವ ಉದ್ದೇಶವಿದ್ದು, ಇದಕ್ಕಾಗಿ ಶನಿವಾರ, ರವಿವಾರ ಮತ್ತು ರಜಾ ದಿನಗಳಲ್ಲೂ ತರಗತಿ ಗಳನ್ನು ನಡೆಸಿ ಪಠ್ಯಕ್ರಮವನ್ನು ಆದಷ್ಟು ಶೀಘ್ರ ಪೂರ್ತಿಗೊಳಿಸಬೇಕು ಎಂದು ಶಿಕ್ಷಕ ಮಿತ್ರರಲ್ಲಿ ವಿನಂತಿಸಿ ಕೊಂಡಿದ್ದೇನೆ.ಶಿಕ್ಷಕರಿಂದಲೂ ಪೂರಕ ಪ್ರತಿಕ್ರಿಯೆ ಬಂದಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಬಾಲಿವುಡ್ ನಶೆ ನಂಟು: ನಿರ್ಮಾಪಕ ಇಮ್ತಿಯಾಜ್ ಖತ್ರಿ ಮನೆಗೆ ಎನ್ ಸಿಬಿ ದಾಳಿ
ನಟ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಬಂಧನ ಪ್ರಕರಣದ ನಡುವೆ ಇದೀಗ ಎನ್ ಸಿಬಿ ಅಧಿಕಾರಿಗಳು ಚಿತ್ರ ನಿರ್ಮಾಪಕ ಇಮ್ತಿಯಾಜ್ ಖತ್ರಿ ಮನೆ ಮೇಲೆ ದಾಳಿ ನಡೆಸಿದ್ದಾರೆ.ಮುಂಬೈ ನಗರದ ಬಾಂದ್ರಾ ಪ್ರದೇಶದಲ್ಲಿರುವ ನಿರ್ಮಾಪಕ ಇಮ್ತಿಯಾಜ್ ಖತ್ರಿ ಅವರ ನಿವಾಸ ಮತ್ತು ಕಚೇರಿಯಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಪರಿಶೀಲನೆ ನಡೆಸಿದ್ದಾರೆ.
ಈ ಭಾರತೀಯ ಆಟಗಾರ ಕೊಹ್ಲಿ ಮತ್ತು ರೋಹಿತ್ ಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿದ್ದಾನೆ: ಗಂಭೀರ್
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕೊನೆಯ ಹಂತ ತಲುಪುತ್ತಿದೆ. ಈ ನಡುವೆ ಕೆ ಎಲ್ ರಾಹುಲ್ ಬ್ಯಾಟಿಂಗ್ ಬಗ್ಗೆ ಮಾತನಾಡಿರುವ ಮಾಜಿ ಆಟಗಾರ ಗೌತಮ್ ಗಂಭೀರ್ ಮಾತನಾಡಿದ್ದು ಕೆ ಎಲ್.ರಾಹುಲ್ ಅವರು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿದ್ದಾರೆ ಎಂದಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ