ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ ಪುರಸ್ಕಾರ : ಸಿಎಂ
Team Udayavani, Nov 16, 2021, 6:42 PM IST
1.ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ ಪುರಸ್ಕಾರ
ಇತ್ತೀಚೆಗೆ ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಅಪ್ಪುಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಘೋಷಿಸಿದರು.
2. ಪುನೀತ್ ದಸೆಯಿಂದಾದರೂ ಹಂಸಲೇಖರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ: ಗಣೇಶ್ ಕಾರ್ಣಿಕ್
ಪೇಜಾವರ ಶ್ರೀಗಳ ವಿರುದ್ಧ ಮಾತನಾಡಿದ ಹಂಸಲೇಖ ಅವರಿಗೆ ಟೀಕೆ ಕೆಟ್ಟ ಚಾಳಿ. ಇಷ್ಟೊಂದು ಕೀಳು ಮಟ್ಟಕ್ಕೆ ಹಂಸಲೇಖ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ. ಇಡೀ ಹಿಂದೂ ಸಮಾಜ ಹಂಸಲೇಖ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ವಕ್ತಾರಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ ನೀಡಿದ್ದಾರೆ.
3. ಸಿಎಂ ಬೊಮ್ಮಾಯಿ ಭೇಟಿಯಾದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ
ಇತ್ತೀಚೆಗೆ ನಡೆದ ಹಾನಗಲ್ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಕಾಂಗ್ರೆಸ್ ನ ಶ್ರೀನಿವಾಸ್ ಮಾನೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
4.ಕಾಯಿನ್ ಹಗರಣದಿಂದ ಪ್ರಿಯಾಂಕ್ ಖರ್ಗೆ ಕಪ್ಪುಹಣ ಪಡೆದಿದ್ದಾರೆ: ಕಾರ್ಣಿಕ್ ಆರೋಪ
ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹಪಾಹಪಿಯಿದೆ. ಇವರ ಬಳಿ 50 ಸಾವಿರ ಕೋಟಿ ಮೌಲ್ಯದ ಆಸ್ತಿಯಿದೆಯಂತೆ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದಾಗ ಬಿಟ್ ಕಾಯಿನ್ ಹಗರಣದಿಂದ ಕಪ್ಪು ಹಣ ಪಡಿದಿದ್ದಾರೆಂಬ ಮಾಹಿತಿ ಇದೆ ಎಂದು ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಆರೋಪಿಸಿದರು.
5. “ಕೈ” ಕಾರ್ಯಕರ್ತರಿಂದ ನಾಥುರಾಂ ಗೋಡ್ಸೆ ಪ್ರತಿಮೆ ಧ್ವಂಸ
ಹಿಂದೂ ಸೇನೆ ಸ್ಥಾಪಿಸಿರುವ ನಾಥೂರಾಂ ಗೋಡ್ಸೆ ಪ್ರತಿಮೆಯನ್ನು ಮಂಗಳವಾರ ಗುಜರಾತ್ ನ ಜಾಮ್ ನಗರದ ಕಾಂಗ್ರೆಸ್ ಅಧ್ಯಕ್ಷ ದಿಗುಭಾ ಜಡೇಜಾ ಮತ್ತು ಅವರ ಆಪ್ತರು ಧ್ವಂಸಗೊಳಿಸಿರುವ ಘಟನೆ ಮಂಗಳವಾರ ನಡೆದಿದೆ.
6. 24ಗಂಟೆಗಳಲ್ಲಿ 8,865 ಕೋವಿಡ್ ಪ್ರಕರಣ ಪತ್ತೆ, 197 ಮಂದಿ ಸಾವು
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,865 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು 287 ದಿನಗಳ ಬಳಿಕದ ಕನಿಷ್ಠ ಸಂಖ್ಯೆಯಾಗಿದೆ. 24ಗಂಟೆಯಲ್ಲಿ ಕೋವಿಡ್ ನಿಂದ 197 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
7. ಸೈಬರ್ ಕ್ರೈಮ್ ಸುತ್ತ ‘100’
ರಮೇಶ್ ಅರವಿಂದ್ ನಟನೆಯ “100′ ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ನ.19ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
8. ಟಿ20 ಸರಣಿಯಿಂದ ಹೊರಗುಳಿದ ಕೇನ್ ವಿಲಿಯಮ್ಸನ್
ಟಿ20 ವಿಶ್ವಕಪ್ ಮುಗಿದು ಮೂರೇ ದಿನಕ್ಕೆ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮತ್ತೆ ಮುಖಾಮುಖಿಯಾಗುತ್ತಿದೆ. ನ.17ರಂದು ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಭಾರತ ನ್ಯೂಜಿಲ್ಯಾಂಡ್ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ