ಮನಕಲಕುವ ಡೆತ್ ನೋಟ್ ಬರೆದಿಟ್ಟು ಬಾಲಕಿ ಆತ್ಮಹತ್ಯೆ!
Team Udayavani, Nov 20, 2021, 7:28 PM IST
1. ಬಾದಾಮಿಯಲ್ಲೂ ಸಿದ್ದರಾಮಯ್ಯನವರನ್ನ ಸೋಲಿಸಲು ಕಾಯುತ್ತಿದ್ದಾರೆ: ಸಚಿವ ಈಶ್ವರಪ್ಪ
ಚಾಮರಾಜನಗರದಲ್ಲಿ ನಡೆದ ಜನಸ್ವರಾಜ್ ಯಾತ್ರೆಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ‘ಕಾಂಗ್ರೆಸ್ ಕಾರ್ಯಕರ್ತರಿಗೇ ಸಿದ್ದರಾಮಯ್ಯ ಬೈದಿದ್ದು, ಬಾದಾಮಿ ಕ್ಷೇತ್ರದಲ್ಲೂ ‘ಮುಂದಿನ ಚುನಾವಣೆಯಲ್ಲಿ ಎಲ್ಲರೂ ಸೇರಿಕೊಂಡು ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಯುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
2. ಕುಮಾರಸ್ವಾಮಿಯಂತೆ ದಿನಕ್ಕೆರಡು ಬಾರಿ ಕ್ಯಾಮರಾ ಮುಂದೆ ನಿಲ್ಲಲು ನಮಗಾಗದು: ಆರಗ ತಿರುಗೇಟು
ಗೃಹ ಸಚಿವ ಆರಗ ಜ್ಞಾನೇಂದ್ರ ಬಿಜೆಪಿಯ ಜನಶಕ್ತಿ ಸಮಾವೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರನಲ್ಲಿ ಇದ್ದರೆ ಬೆಂಗಳೂರಲ್ಲೇ ಇದ್ದಿರಿ ಎನ್ನುತ್ತೀರಿ, ಹಳ್ಳಿಕಡೆ ಹೋದರೆ ಶಂಕ ಊದುತ್ತಿದ್ದಾರೆ ಎನ್ನುತ್ತೀರಿ. ಜನರ ಕಷ್ಟ ಅರ್ಥ ಮಾಡಿಕೊಳ್ಳಲು ಈ ಪ್ರಯತ್ನ ಮಾಡಬಾರದಾ ಎಂದು ಅವರು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.
3. ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ
ವಿಧಾನ ಪರಿಷತ್ ಚುನಾವಣೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಶನಿವಾರ ನಾಮಪತ್ರ ಸಲ್ಲಿಸಿದರು.
4. ಆಂಧ್ರಪ್ರದೇಶ; ಭಾರೀ ಮಳೆಗೆ ಕುಸಿದು ಬಿದ್ದ 3 ಅಂತಸ್ತಿನ ಕಟ್ಟಡ, ನಾಲ್ವರು ಸಾವು
ಆಂಧ್ರಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು, ಮೂವರು ಮಕ್ಕಳು ಮತ್ತು ಮಹಿಳೆ ಸಾವನ್ನಪ್ಪಿರುವ ಘಟನೆ ಶನಿವಾರ (ನವೆಂಬರ್ 20) ಅನಂತ್ ಪುರದಲ್ಲಿ ನಡೆದಿದೆ.
5. ಭಾರತದಲ್ಲಿ 10,302 ಕೋವಿಡ್ ಪ್ರಕರಣ ಪತ್ತೆ, 24ಗಂಟೆಯಲ್ಲಿ 11,787 ಮಂದಿ ಗುಣಮುಖ
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,302 ನೂತನ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 267 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
6. “ಕಾರಣ ಯಾರೆಂದು ಹೇಳಲು ಭಯವಾಗ್ತಿದೆ..”: ಮನಕಲಕುವ ಡೆತ್ ನೋಟ್ ಬರೆದಿಟ್ಟು ಬಾಲಕಿ ಆತ್ಮಹತ್ಯೆ!
ಲೈಂಗಿಕ ಶೋಷಣೆಯಿಂದ ನೊಂದ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡು ರಾಜ್ಯದ ಕರೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಾರಣ ಯಾರೆಂದು ಹೇಳಲು ಭಯವಾಗ್ತಿದೆ ಎಂದು ಮನಕಲುಕುವ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
7. ರಾಜಕೀಯದ ಯಶಸ್ಸಿನ ಒತ್ತಡದಲ್ಲಿಯೂ ಭಟ್ಟರ ‘ಗರಡಿ’ ಪ್ರವೇಶಿಸಿದ ಕೌರವ
ಕೃಷಿ ಸಚಿವ, ಕೌರವ ಖ್ಯಾತಿಯ ನಟ ಬಿ.ಸಿ. ಪಾಟೀಲ್ ಬಹುದಿನಗಳ ಬಳಿಕ ರಾಜಕೀಯ ಒತ್ತಡದ ನಡುವೆಯೂ ಭರ್ಜರಿ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದ್ದು, ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ನಿರ್ದೇಶಿಸಲಿದ್ದಾರೆ. ‘ಗರಡಿ’ ಎಂಬ ಹೆಸರಿನ ಚಿತ್ರದಲ್ಲಿ ಯಶಸ್ ಸೂರ್ಯ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿ ಗಮನ ಸೆಳೆದಿದೆ.
8. ವಿದರ್ಭ ವಿರುದ್ಧ ರೋಚಕ ಜಯ: ಸಯ್ಯದ್ ಮುಷ್ತಾಕ್ ಅಲಿ ಫೈನಲ್ ತಲುಪಿದ ಕರ್ನಾಟಕ ತಂಡ
ವಿದರ್ಭ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ರೋಚಕ ಜಯ ಸಾಧಿಸಿದ ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ ತಂಡ ಫೈನಲ್ ಪ್ರವೇಶಿಸಿದೆ. ದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ತಂಡವು ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?