ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?
Team Udayavani, Oct 21, 2021, 5:18 PM IST
ಚೀನಾ ಬೆದರಿಕೆ: ಎಲ್ಎಸಿ ಬಳಿ ಭಾರತೀಯ ಸೇನೆಯ ಕಠಿಣ ಸಮರಾಭ್ಯಾಸ
ಭಾರತೀಯ ಸೈನಿಕರು ಚೀನಾದ ಕಡೆಯಿಂದ ಬರುವ ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧತೆ ನಡೆಸುತ್ತಿದ್ದು, ಅರುಣಾಚಲ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ ಕಠಿಣ ಸಮರಾಭ್ಯಾಸ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ವಿಪಕ್ಷಗಳು ಬುಧವಾರ ಗಂಭೀರ ಆರೋಪವೊಂದನ್ನು ಮಾಡಿದ್ದು, ವಿದೇಶದಿಂದ ಬಂದಿದ್ದ 1 ಮಿಲಿಯನ್ ಯುಎಸ್ ಡಾಲರ್ ನ ವಾಚ್ ಸೇರಿದಂತೆ ದುಬಾರಿ ಉಡುಗೊರೆಗಳನ್ನು ಮಾರಾಟ ಮಾಡಿರುವ ಬಗ್ಗೆ ದೂರಲಾಗಿದೆ.
‘ವ್ಯಾಕ್ಸಿನ್ ಸೆಂಚುರಿ’: ‘ನಾವು ವಿಜಯವನ್ನು ಕಾಣುತ್ತಿದ್ದೇವೆ’
ದೇಶದಲ್ಲಿ 100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಂಭ್ರಮವನ್ನು ಹಂಚಿಕೊಂಡಿದ್ದು ”ಭಾರತದ ಇತಿಹಾಸ ಬರೆದಿದೆ. ನಾವು 130 ಕೋಟಿ ಭಾರತೀಯರ ವಿಜ್ಞಾನ, ಉದ್ಯಮ ಮತ್ತು ಸಾಮೂಹಿಕ ಮನೋಭಾವದ ವಿಜಯವನ್ನು ಕಾಣುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು ಎಂದಿದ್ದಾರೆ.
ಪೋರ್ನ್ ವಿಡಿಯೋ ವೀಕ್ಷಿಸಲು ನಿರಾಕರಿಸಿದ 6 ವರ್ಷದ ಬಾಲಕಿಯ ಕೊಲೆ!
ತಮ್ಮ ಜೊತೆ ಅಶ್ಲೀಲ ವಿಡಿಯೋಗಳನ್ನು ನೋಡಲು ನಿರಾಕರಿಸಿದ ಆರು ವರ್ಷ ಪ್ರಾಯದ ಬಾಲಕಿಯನ್ನು ಮೂರು ಅಪ್ರಾಪ್ತ ವಯಸ್ಕ ಹುಡುಗರು ಕೊಲೆಗೈದ ಘಟನೆ ಅಸ್ಸಾಂ ರಾಜ್ಯದ ನಾಗೂನ್ ಜಿಲ್ಲೆಯಲ್ಲಿ ನಡೆದಿದೆ.
ಸಂಘ ಪರಿವಾರದವರು ಸಮಾಜ ಒಡೆಯುವ ಕೆಲಸ ಮಾಡ್ತಾರೆಂಬ ಭಯವಿದೆ
ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಭ್ರಮಿಸುವ ಬದಲು ಕ್ಷಮೆಯಾಚಿಸಲಿ
ಕೇಂದ್ರ ಬಿಜೆಪಿ ಸರ್ಕಾರದ ಅಸಮರ್ಥತೆಯಿಂದಾಗಿ ಕೋವಿಡ್ ನಿಂದ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಜನ ಔಷಧಿ, ಆಕ್ಸಿಜನ್, ಲಸಿಕೆ ಸಿಗದೆ ಪರದಾಟ ನಡೆಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು 100 ಕೋಟಿ ಡೋಸ್ ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಿಸಿ ಪ್ರಚಾರ ಪಡೆಯುವ ಬದಲು, ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ಬಾಲಿವುಡ್ ನಟಿ ಅನನ್ಯ ಪಾಂಡೆ ನಿವಾಸದ ಮೇಲೆ ಎನ್ ಸಿಬಿ ದಾಳಿ
ಬಾಲಿವುಡ್ ನಟಿ ಅನನ್ಯ ಪಾಂಡೆ ನಿವಾಸದ ಮೇಲೆ ದಾಳಿ ನಡೆಸಿದ ಎನ್ ಸಿಬಿಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಕೆಲವು ಪೋನ್ ಗಳು, ಲ್ಯಾಪ್ ಟಾಪ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆದಿರುವುದಾಗಿ ಮೂಲಗಳು ತಿಳಿಸಿವೆ.
ಐಪಿಎಲ್ ತಂಡ ಖರೀದಿಸಲು ಮುಂದಾದ ಮ್ಯಾಂಚೆಸ್ಟರ್ ಯುನೈಟೆಡ್ ಮಾಲಕರು
14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕೂಟವನ್ನು ಯಶಸ್ವಿಯಾಗಿ ಮುಗಿಸಿದ ಖುಷಿಯಲ್ಲಿರುವ ಬಿಸಿಸಿಐ ಮುಂದಿನ ಆವೃತ್ತಿಗೆ ಸಿದ್ದತೆ ನಡೆಸುತ್ತಿದೆ. ಈ ನಡುವೆ ಫುಟ್ ಬಾಲ್ ಕ್ರೀಡೆಯ ಪ್ರಸಿದ್ದ ಫ್ರಾಂಚೈಸಿ ಮ್ಯಾಂಚೆಸ್ಟರ್ ಯುನೈಟೆಡ್ ನ ಮಾಲಕರು ಇದೀಗ ಐಪಿಎಲ್ ತಂಡವನ್ನು ಖರೀದಿಸಲು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.