ರಸ್ತೆಗೆ ಬಿದ್ದ ವಿದ್ಯುತ್ ಕಂಬ: ಸಂಚಾರ ಅಸ್ತವ್ಯಸ್ತ
Power pole on the road: Traffic jam
Team Udayavani, May 18, 2022, 11:12 AM IST
ವಿಟ್ಲ : ಮಂಗಳವಾರ ರಾತ್ರಿ ಸುರಿದ ಮಳೆಗೆ ವಿಟ್ಲ- ಕಲ್ಲಡ್ಕ-ಮಂಗಳೂರು ರಸ್ತೆಯಲ್ಲಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಬುಧವಾರ ಬೆಳಗ್ಗೆ ಸುಮಾರು 9.30 ತನಕ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಕಂಬ ಬಿದ್ದಿದ್ದು, ಕಂಬದೊಂದಿಗೆ ದೀವಿ ಹಲಸು ಮರದ ದೊಡ್ಡ ಗಾತ್ರದ ಕೊಂಬೆ ಬಿದ್ದಿತ್ತು. ಬೆಳಗಿನ ಜಾವದಲ್ಲಿ ಬರುವ ಎಲ್ಲಾ ವಾಹನಗಳು ಅಗಲ ಕಿರಿದಾದ ಪಳಿಕೆ ರಸ್ತೆ ಯನ್ನು ಬಳಸಿ ಬೊಬ್ಬೆಕೇರಿ ಸಂಪರ್ಕ ರಸ್ತೆಯ ಮೂಲಕ ಸಂಚರಿಸಿದವು. ಎರಡೂ ಬದಿಗಳಲ್ಲಿ ವಾಹನಗಳು ಸಂಚರಿಸಿದ ಕಾರಣ ತಾಸುಗಟ್ಟಲೆ ಕಾಲ ಸಂಚಾರ ಸ್ಥಗಿತಗೊಂಡಿತ್ತು. ವಿಟ್ಲ ಪೊಲೀಸರು, ಸಾರ್ವಜನಿಕರು ಸುಗಮ ಸಂಚಾರಕ್ಕೆ ಸಹಕರಿಸಿದರು. ಮೆಸ್ಕಾಂ ಸಿಬಂದಿಗಳು ತತ್ ಕ್ಷಣ ಕಾರ್ಯಾಚರಿಸಿ ಕಂಬ ತೆರವುಗೊಳಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ