ಉಡುಪಿ: ಜಿಲ್ಲೆಯಿಂದ ಹೊರ ಹೋಗಲು ಮತ್ತು ಜಿಲ್ಲಾ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ
Team Udayavani, Apr 10, 2020, 6:21 PM IST
ಉಡುಪಿ: ಜಿಲ್ಲೆಯಲ್ಲಿ ಇದುವರೆಗೂ ಮೂರು ಕೋವಿಡ್ 19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಅವರೆಲ್ಲರೂ ಐಸೊಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಂಪೂರ್ಣ ಗುಣಮುಖರಾಗುತ್ತಿದ್ದಾರೆ. ಮತ್ತು ಈ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್ ಗಳನ್ನು ಗುರುತಿಸಿ ಕ್ವಾರೆಂಟೈನ್ ನಲ್ಲಿಡಲಾಗಿತ್ತು ಮತ್ತು ಅವರೆಲ್ಲರ ಗಂಟಲ ದ್ರವದ ಮಾದರಿ ತಪಾಸಣಾ ವರದಿ ನೆಗೆಟಿವ್ ಬಂದಿರುತ್ತದೆ.
ಸದ್ಯದ ಮಟ್ಟಿಗೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಗಳು ಕಡಿಮೆ ಇದೆ. ಈ ಕಾರಣದಿಂದ ಮುಂಬರುವ ದಿನಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಿಂದ ಯಾರನ್ನೂ ಹೊರಗಡೆ ಬಿಡಲಾಗುವುದಿಲ್ಲ ಮತ್ತು ಈ ಜಿಲ್ಲೆಗೆ ಹೊರ ರಾಜ್ಯದ ಹಾಗೂ ಹೊರ ಜಿಲ್ಲೆಗಳ ವ್ಯಕ್ತಿಗಳು ಬರುವುದಕ್ಕೆ ಸದ್ಯಕ್ಕೆ ಅವಕಾಶ ಇರುವುದಿಲ್ಲ. ಈ ನಿಯಮವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಸಹಕಾರವನ್ನು ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಜಿ. ಅವರು ವಿನಂತಿಸಿಕೊಂಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bengaluru: ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್