ಉಪ ಚುನಾವಣೆಯಲ್ಲಿ ಮುನಿರತ್ನ ಗೆದ್ದರೆ ಮಂತ್ರಿ ಸ್ಥಾನ ನಿಶ್ಚಿತ : ಶ್ರೀನಿವಾಸ್ ಪೂಜಾರಿ
Team Udayavani, Nov 3, 2020, 3:58 PM IST
ಹಳೆಯಂಗಡಿ : ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮುನಿರತ್ನ ಗೆದ್ದಲ್ಲಿ ಮಂತ್ರಿ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ ವಾಗ್ಧಾನವನ್ನು ಉಳಿಸಿಕೊಳ್ಳಲಿದ್ದಾರೆ. ಶಿರಾ ಸಹಿತ ಎರಡೂ ಕ್ಷೇತ್ರದ ಉಪ ಚುನಾವಣೆಯು ರಾಜ್ಯ ಸರ್ಕಾರದ ಆಡಳಿತಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಪ್ರಚಂಡ ಬಹುಮತದಿಂದ ಗೆಲ್ಲುವುದು ನಿಶ್ಚಿತ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.