ವಿಜಯಪುರ ಜಿಲ್ಲೆಯಲ್ಲೀಗ ಸಿಂಧೂರ ವಿವಾದ
Sindhoor Row arises amidst the ongoing Hijab row in Vijayapura
Team Udayavani, Feb 18, 2022, 12:04 PM IST
ವಿಜಯಪುರ ಜಿಲ್ಲೆಯಲ್ಲೀಗ ಸಿಂಧೂರ ವಿವಾದ
ವಿಜಯಪುರ: ಹಿಜಾಬ್ – ಕೇಸರಿ ಶಾಲು ವಿವಾದ ಜೀವಂತವಾಗಿರುವ ಮಧ್ಯೆಯೇ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಈಗ ಸಿಂಧೂರ ವಿವಾದ ತಲೆ ಎತ್ತಿದೆ.
ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ಓರ್ವ ವಿದ್ಯಾರ್ಥಿಗೆ ಕುಂಕುಮ ಅಳುಕಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ತಾಕೀತು ಮಾಡಿದ್ದಾರೆ.
ಇದಕ್ಕೆ ವಿದ್ಯಾರ್ಥಿ ಒಪ್ಪದಿದ್ದಾಗ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ.
ಹಣೆಗೆ ಕುಂಕುಮ ಹಚ್ಚಿಕೊಂಡು ಬರುವುದು ಕೂಡ ಹಿಜಾಬ್ ವಿವಾದಕ್ಕೆ ಮತ್ತಷ್ಟು ಸಮಸ್ಯೆಗೆ ಕಾರಣ ಎಂದು ಸಿಂಧೂರ ಹಚ್ಚಿಕೊಂಡು ಬಂದ
ವಿದ್ಯಾರ್ಥಿಗೆ ಕಾಲೇಜಿನ ದೈಹಿಕ ನಿರ್ದೇಶಕರು ಸಲಹೆ ನೀಡಿದಾಗ ವಿದ್ಯಾರ್ಥಿ ಹಾಗೂ ಉಪನ್ಯಾಸಕರ ಮಧ್ಯೆ ವಾಗ್ವಾದವಾಗಿದೆ.
ಕಾಲೇಜಿನ ದೈಹಿಕ ಉಪನ್ಯಾಸಕ
ಸಂಗಮೇಶಗೌಡ ಹಾಗೂ ಪದವಿ ವಿದ್ಯಾರ್ಥಿ ಗಂಗಾಧರ ಬಡಿಗೇರ ನಡುವೆ ಮಾತಿನ ಚಕಮಕಿ ನಡೆದಿದೆ.
ಹಿಜಾಬ್ ಹಾಗೂ ಕೇಸರಿ ಶಾಲು ಹೊರತು ಪಡಿಸಿ ಹಣೆಗೆ ಕುಂಕುಮ, ನಾಮ ಹಾಕಿ ಬರಬೇಡಿ ಎಂದರೆ ಹೇಗೆ. ನಮ್ಮ ಪಾರಂಪರಿಕ ಸಾಂಸ್ಕೃತಿಕ ಸಂಕೇತವಾಗಿರುವ ಸಿಂಧೂರ ತಿಲಕಕ್ಕೆ ಯಾಕೆ ಅನುಮತಿ ಇಲ್ಲ ಎಂದು ವಿದ್ಯಾರ್ಥಿ ಪಟ್ಟು ಹಿಡಿದಾಗ ವಾಗ್ವಾದವಾಗಿದೆ.
ವಿಷಯ ತಿಳಿದ ಇತರೆ ಉಪನ್ಯಾಸಕರು, ಪೊಲೀಸರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಯ ಮನವೊಲಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು