Tumukuru ಮತ್ತೆ 9 ಕೋವಿಡ್ ಸೋಂಕಿತರು: 25ಕ್ಕೇರಿದ ಸೋಂಕಿತರ ಸಂಖ್ಯೆ
Team Udayavani, May 22, 2020, 6:05 PM IST
ತುಮಕೂರು: ಕಲ್ಪತರು ನಾಡಿನಲ್ಲಿ ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 9 ಮಂದಿಗೆ ಕೋವಿಡ್-19 ಸೋಂಕು ತಗಲಿದೆ. ಇವರಲ್ಲಿ ಮುಂಬೈನಿಂದ ಬಂದವರಲ್ಲಿಯೇ ಹೆಚ್ಚು ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ 9 ಮಂದಿಗೆ ಸೋಂಕು ಇರುವುದು ದೃಢವಾಗಿದೆ. ಈ ಪೈಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಂಕಿತೆ ತುಮಕೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರಲ್ಲಿಯೂ ಸೋಂಕು ದೃಢವಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 25 ಕ್ಕೆ ಎರಿಕೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 105 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. ಇದರಲ್ಲಿ 588 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ