ಭೀಮಾ ನದಿ ಪ್ರವಾಹದಲ್ಲಿ ಪಿಎಸ್ಐಯ ನಕಲಿ ರಕ್ಷಣಾ ಕಾರ್ಯಚರಣೆಯ ವಿಡಿಯೋ ವೈರಲ್ !
Team Udayavani, Oct 22, 2020, 4:13 PM IST
ಕಲಬುರಗಿ: ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಕುರಿ ಮರಿಗಳನ್ನು ರಕ್ಷಣೆ ಮಾಡಿದ್ದೇನೆ ಎಂಬ ರೀತಿಯಲ್ಲಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪಿಎಸ್ಐಯ ನಕಲಿ ರಕ್ಷಣಾ ಕಾರ್ಯದ ವಿಡಿಯೋ ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಗೆ ಇರುಸುಮುರುಸು ಉಂಟಾಗುವಂತೆ ಆಗಿದೆ.
ಪಿಎಸ್ಐ ಮಲ್ಲಣ್ಣ ಯಲಗೋಡ ಬೇರೆ ಕಡೆಯಿಂದ ಕುರಿ ಮರಿಗಳನ್ನು ತರಿಸಿ ಅವುಗಳನ್ನು ಎತ್ತಿಹಿಡಿದು, ಇವು ಭೀಮಾ ಪ್ರವಾಹದಲ್ಲಿ ಸಿಲುಕಿದ್ದವು. ಇವುಗಳನ್ನು ತಾನೇ ರಕ್ಷಿಸಿರುವುದಾಗಿ ಗ್ರಾಮಸ್ಥರಿಂದ ಹೇಳಿಸಿ ವಿಡಿಯೋವನ್ನೂ ಮಾಡಿಸಿದ್ದಾರೆ.