AIIMS;9 ಗಂಟೆಗಳ ಯಶಸ್ವಿ ಶಸ್ತ್ರಚಿಕಿತ್ಸೆ: ಸಯಾಮಿ ಅವಳಿ ಮಕ್ಕಳನ್ನು ಬೇರ್ಪಡಿಸಿದ ವೈದ್ಯರು
Team Udayavani, Jul 27, 2023, 4:14 PM IST
ಹೊಸದಿಲ್ಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ(AIIMS) 9 ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯಲ್ಲಿ, ಕಳೆದ ವರ್ಷ ಎದೆ ಮತ್ತು ಹೊಟ್ಟೆಯಿಂದ ಸೇರಿಕೊಂಡೇ ಹುಟ್ಟಿದ್ದ ಸಯಾಮಿ ಅವಳಿಗಳಾದ ರಿದ್ಧಿ ಮತ್ತು ಸಿದ್ಧಿ ಎಂಬ ಮಕ್ಕಳನ್ನು ಯಶಸ್ವಿಯಾಗಿ ಬೇರ್ಪಡಿಸಲಾಗಿದೆ ಎಂದು ಬುಧವಾರ ವೈದ್ಯರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬರೇಲಿಯ ಮಹಿಳೆಯ ಗರ್ಭಧಾರಣೆಯ ನಾಲ್ಕನೇ ತಿಂಗಳಲ್ಲಿ ‘ಥೋರಾಕೊ-ಆಂಫಾಲೋಪಾಗಸ್ ಸಯಾಮಿ ಅವಳಿಗಳು’ ಎಂದು ಗುರುತಿಸಲಾಯಿತು, ನಂತರ ದಂಪತಿಗಳಿಗೆ AIIMS ನಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯಲು ಸೂಚಿಸಲಾಯಿತು. ಹೆಣ್ಣುಮಕ್ಕಳ ಜನನ ಮತ್ತು ಅಂತಿಮವಾಗಿ ಬೇರ್ಪಡುವಿಕೆಗೆ ಸರಿಯಾದ ಚಿಕಿತ್ಸೆಯನ್ನು ಪಡೆದಿದ್ದಾರೆ ಎಂದು ಏಮ್ಸ್ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಮಿನು ಬಾಜ್‌ಪೇಯ್ ಹೇಳಿದ್ದಾರೆ.
ಸಯಾಮಿ ಅವಳಿ ಮಕ್ಕಳು ಕಳೆದ ವರ್ಷ ಜುಲೈ 7 ರಂದು ಜನಿಸಿದ್ದರು. ಯಕೃತ್ತು, ಪಕ್ಕೆಲುಬುಗಳನ್ನು ಹಂಚಿಕೊಂಡಿದ್ದರು. ಐದು ತಿಂಗಳ ಕಾಲ ICU ನಲ್ಲಿದ್ದರು. ಸುದೀರ್ಘ ಶಸ್ತ್ರಚಿಕಿತ್ಸೆಯ ನಂತರ ಅವರನ್ನು ಜೂನ್ 8 ರಂದು ಬೇರ್ಪಡಿಸಲಾಯಿತು”ಎಂದು ಆಸ್ಪತ್ರೆಯು ಬುಧವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
ಶಸ್ತ್ರಚಿಕಿತ್ಸೆಯ ಆಘಾತವನ್ನು ಸಹಿಸಿಕೊಳ್ಳುವ ಸಲುವಾಗಿ11 ತಿಂಗಳ ಮಗುವಾಗಿದ್ದಾಗ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕ ಪ್ರಬುದ್ ಗೋಯೆಲ್ ಹೇಳಿದ್ದಾರೆ.
”ಇಬ್ಬರಲ್ಲೂ ಎರಡೂ ಹೃದಯಗಳು ಒಂದಕ್ಕೊಂದು ಹತ್ತಿರವಾಗಿದ್ದವು, ಬಹುತೇಕ ಸ್ಪರ್ಶ ಮತ್ತು ಸಂಪರ್ಕದಲ್ಲಿ ಬಡಿಯುತ್ತಿದ್ದವು. ಪೆರಿಕಾರ್ಡಿಯಮ್ ಭಾಗಶಃ ಬೆಸೆದಿತ್ತು” ಎಂದು ಗೋಯೆಲ್ ಹೇಳಿದರು.
ಶಸ್ತ್ರಚಿಕಿತ್ಸೆ ಸುಮಾರು ಒಂಬತ್ತು ಗಂಟೆಗಳ ಕಾಲ ನಡೆದರೂ, ಶಸ್ತ್ರಚಿಕಿತ್ಸೆಯ ಪೂರ್ವ ಮತ್ತು ನಂತರದ ಪ್ರಕ್ರಿಯೆಗಳಿಗೆ 3.5 ಗಂಟೆಗಳು ಹೆಚ್ಚುವರಿಯಾಗಿ ಬೇಕಾಯಿತು ಎಂದು ವೈದ್ಯರು ಹೇಳಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತರ, ಅವಳಿಗಳು ತಮ್ಮ ಮೊದಲ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲೇ ಆಚರಿಸಿಕೊಂಡರು ಎಂದು ವೈದ್ಯರು ತಿಳಿಸಿದ್ದಾರೆ.
ಏಮ್ಸ್ ನಲ್ಲಿ ಇಂತಹ ಯಶಸ್ವಿ ಶಸ್ತ್ರಚಿಕಿತ್ಸೆ ಇದೇ ಮೊದಲಲ್ಲ. 2017 ರಲ್ಲಿ, ಒಡಿಶಾದ ಜಗನ್ನಾಥ್ ಮತ್ತು ಬಲರಾಮ್ ಎನ್ನುವವರನ್ನು ವೈದ್ಯರು ಯಶಸ್ವಿಯಾಗಿ ಬೇರ್ಪಡಿಸಿದ್ದರು, ಅವರು ಕ್ರಾನಿಯೊಪಾಗಸ್ ಅವಳಿಗಳಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.