Video: ಕಾಣಿಕೆ ಹುಂಡಿ ಎಗರಿಸಲು ಕುದುರೆ ಏರಿ ಬಂದ ಕಳ್ಳರು… ಮುಂದೇನಾಯ್ತು ನೀವೇ ನೋಡಿ
Team Udayavani, Dec 24, 2023, 3:37 PM IST
ಉತ್ತರ ಪ್ರದೇಶ: ದೇವಸ್ಥಾನವೊಂದರಲ್ಲಿ ಕಳ್ಳನೊಬ್ಬ ಕಾಣಿಕೆ ಡಬ್ಬವನ್ನು ಕದಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಇಲ್ಲಿ ನೆಟ್ಟಿಗರ ಗಮನ ಸೆಳೆದಿದ್ದು ಕುದುರೆ, ಆರೋಪಿ ಕಳ್ಳ ಮತ್ತು ಆತನ ಸಹಚರರು ಕಾಣಿಕೆ ಡಬ್ಬವನ್ನು ಕದಿಯಲು ಕುದುರೆಯ ಮೇಲೆ ಬಂದಿದ್ದಾರೆ. ಇದು ನಡೆದಿರುವುದು ಉತ್ತರ ಪ್ರದೇಶದ ಕಾನ್ಪುರದಲ್ಲಿ.
ಡಿಸೆಂಬರ್ 20 ರಂದು ಕಾನ್ಪುರದ ಬರ್ರಾ ಪ್ರದೇಶದಲ್ಲಿ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ವೈರಲ್ ಆಗಿರುವ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ದೇವಸ್ಥಾನದೊಳಗೆ ಜಿಗಿಯುತ್ತಿರುವುದನ್ನು ಕಾಣಬಹುದು. ನಂತರ ದೇವಸ್ಥಾನದಿಂದ ಕಾಣಿಕೆಗಳ ಪೆಟ್ಟಿಗೆಯನ್ನು ತೆಗೆಯಲು ಪ್ರಯತ್ನಿಸುತ್ತಾನೆ.
ಈ ವೇಳೆ ಅಲ್ಲಿದ್ದ ಬೀದಿ ನಾಯಿಗಳು ಬೊಗಳಲು ಆರಂಭಿಸುತ್ತವೆ ಆದರೂ ಹೆದರದ ಕಳ್ಳ ಮತ್ತೆ ಕಾಣಿಕೆ ಡಬ್ಬ ಒಡೆಯಲು ಯತ್ನಿಸಿದ್ದಾನೆ ಅಷ್ಟೋತ್ತಿಗೆ ನಾಯಿ ಸದ್ದಿಗೆ ಎಚ್ಚರಗೊಂಡ ಅಲ್ಲಿನ ಸ್ಥಳೀಯ ಯುವಕರು ಕೂಡಲೇ ಮನೆಯಿಂದ ಹೊರಗೆ ಬಂದಿದ್ದಾರೆ ಅಷ್ಟೋತ್ತಿಗಾಗಲೇ ಕಳ್ಳರು ಕುದುರೆ ಮೇಲೇರಿ ಪರಾರಿಯಾಗಿದ್ದಾರೆ.
ಬೀದಿ ನಾಯಿಗಳಿಂದ ಕಳ್ಳತನ ವಿಫಲವಾಗಿ ದೇವಸ್ಥಾನದ ಕಾಣಿಕೆ ಹುಂಡಿ ಭದ್ರವಾಗಿ ಉಳಿದುಕೊಂಡಿದೆ.
#ViralVideos : कानपुर से अजब गजब वीडियो, राधाकृष्ण मंदिर में दान पात्र चुराने घोड़े पर सवार होकर आए चोर @kanpurnagarpol pic.twitter.com/ZPI8knKFGn
— princy sahu (@princysahujst7) December 24, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.