Whatsappನಲ್ಲಿ ಪರಿಚಯವಾದ ವ್ಯಕ್ತಿಯನ್ನು ವರಿಸಲು ಭಾರತದಿಂದ ಪಾಕ್‌ಗೆ ತೆರಳಿದ 2 ಮಕ್ಕಳ ತಾಯಿ
Team Udayavani, Feb 8, 2024, 11:28 AM IST
ಶ್ರೀನಗರ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯುನ್ನು ಮದುವೆಯಾಗುವ ನಿಟ್ಟಿನಲ್ಲಿ ನಾಲ್ಕು ಮಕ್ಕಳ ತಾಯಿ ಸೀಮಾ ಹೈದರ್ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿದ್ದಾರೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಗೆಳೆಯನಿಗಾಗಿ ರಾಜಸ್ಥಾನದ ಅಂಜು ಪಾಕಿಸ್ತಾನಕ್ಕೆ ತೆರಳಿದ ಘಟನೆ ನಿಮಗೆ ನಿಮಗೆ ನೆನಪಿರಬಹುದು.
ಇದೀಗ ಇಂಥದ್ದೇ ಮತ್ತೊಂದು ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ವಾಟ್ಸಾಪ್ ನಲ್ಲಿ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗುವ ನಿಟ್ಟಿನಲ್ಲಿ ಎರಡು ಮಕ್ಕಳ ತಾಯಿಯೊಬ್ಬಳು ಪಾಕಿಸ್ತಾನಕ್ಕೆ ತೆರಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ 22 ವರ್ಷದ ಮಹಿಳೆ ಶಬ್ನಮ್ ಬಿ ಗುಲಾಮ್ ರುಬಾನಿ ಅವರನ್ನು ಮದುವೆಯಾಗಿದ್ದಾರೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಶಬ್ನಮ್ ಅವರ ಪತಿ ಭಾನುವಾರ(ಫೆ.4 ರಂದು) ಪತ್ನಿ ನಾಪತ್ತೆಯಾಗಿರುವ ಪ್ರಕರಣವನ್ನು ದಾಖಲಿಸಿದ್ದಾರೆ. ತನ್ನ ಕಿರಿಯ ಮಗಳೊಂದಿಗೆ ಪತ್ನಿ ಹೋಗಿದ್ದಾಳೆ ಎಂದು ಪತಿ ದೂರಿನಲ್ಲಿ ಹೇಳಿದ್ದಾರೆ.
ಪೊಲೀಸರು ತನಿಖೆ ಆರಂಭಿಸಿದ್ದು, ಪಾಕಿಸ್ತಾನದಲ್ಲಿ ಮಹಿಳೆ ಮೂವರು ಚಿಕ್ಕಪ್ಪಂದಿರು ಹಾಗೂ ಚಿಕ್ಕಮ್ಮ ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ. ಮಹಿಳೆ ಪಾಕಿಸ್ತಾನದ ವ್ಯಕ್ತಿಯೊಬ್ಬನ ಜೊತೆ ವಾಟ್ಸಾಪ್ ನಲ್ಲಿ ಸಂಪರ್ಕದಲ್ಲಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಆತ ಮದುವೆಯಾಗುವ ಭರವಸೆ ನೀಡಿದ್ದು, ಈ ಕಾರಣದಿಂದ ಮಹಿಳೆ ಪಾಕಿಸ್ತಾನಕ್ಕೆ ತೆರಳಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.