Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!
Team Udayavani, Jun 7, 2023, 10:26 AM IST
ಜೈಪುರ: ವ್ಯಕ್ತಿಯೊಬ್ಬ ಬಲವಂತವಾಗಿ ಯುವತಿಯನ್ನು ಅಪಹರಣ ಮಾಡಿ ಸಪ್ತಪದಿಯ ವಿಧಾನವನ್ನು ನೆರವೇರಿಸುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಪುಷ್ಪೇಂದ್ರ ಸಿಂಗ್ ಎಂಬಾತ 15-20 ಜನರ ಸಹಾಯದಿಂದ ರಾಜಸ್ಥಾನದ ಜೈಸಲ್ಮೇರ್ ನ ಸಂಖ್ಲಾ ಗ್ರಾಮದಿಂದ ಯುವತಿಯನ್ನು ಅವಳ ಕುಟುಂಬದ ಮುಂದೆಯೇ ಅಪಹರಿಸಿಕೊಂಡು ಬಂದಿದ್ದಾನೆ. ಇದಾದ ಬಳಿಕ ನಿರ್ಜನ ಪ್ರದೇಶವೊಂದರಲ್ಲಿ ಯುವತಿಯನ್ನು ಎತ್ತಿಕೊಂಡು ಅಲ್ಲಿ ಬೆಂಕಿಯನ್ನು ಹಾಕಿ ಸಪ್ತಪದಿ ವಿಧಿ ವಿಧಾನವನ್ನು ಬಲವಂತವಾಗಿ ನೆರವೇರಿಸಿದ್ದಾನೆ. ಯುವತಿ ಜೋರಾಗಿ ಆಳುತ್ತಿದ್ದರೂ, ಅವಳ ಮಾತನ್ನು ಕೇಳದೇ ಬಲವಂತವಾಗಿ ಈ ಪ್ರಕ್ರಿಯೆಯನ್ನು ಆತ ನೆರವೇರಿಸಿದ್ದಾನೆ.
ಯುವಕನ ಪಕ್ಕದಲ್ಲಿ ಒಂದಷ್ಟು ಜನರ ಗುಂಪು ಹಾಗೂ ಯುವಕನ ಮನೆಯವರು ಕೂಡ ಕಾಣಿಸುತ್ತಾರೆ. ಕೆಲವರು ಈ ಘಟನೆಯ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಜೂ.1 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಸಂಬಂಧ ದೆಹಲಿ ಮಹಿಳಾ ಸಮಿತಿಯ ಮುಖ್ಯಸ್ಥೆ ಸ್ವಾತಿ ಮಲಿವಾಲ್ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೆ ಟ್ವಿಟರ್ ನಲ್ಲಿ ಟ್ಯಾಗ್ ಮಾಡಿ ಘಟನೆಯ ಬಗ್ಗೆ ಖಂಡಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದಾದ ಬಳಿಕ ಜೈಸಲ್ಮೇರ್ ಪೊಲೀಸರು ಈ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಘಟನೆ ಜೂನ್ 1 ರಂದು ನಡೆದಿದೆ. ಕೃತ್ಯದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಇತರ ಆರೋಪಿಗಳಿಗೆ ಹುಡುಕಾಟ ನಡೆಯುತ್ತಿದೆ. ಆರೋಪಿಗಳ ವಿರುದ್ಧ ಸಂಬಂಧ ಪಟ್ಟ ಕಾಯ್ದೆಗಳ ಅಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಮೊದಲು ಘಟನೆ ನಡೆದ ಬಳಿಕ ಯುವತಿಯ ಮನೆಯವರು ಪೊಲೀಸರಿಗೆ ಕ್ರಮಕ್ಕೆ ಆಗ್ರಹ ಮಾಡಿದಾಗ, ಪೊಲೀಸರು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂದು ಯುವತಿಯ ತಂದೆ ಮಾಧ್ಯಮದ ಮುಂದೆ ಹೇಳಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.