Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Team Udayavani, Nov 24, 2024, 3:44 PM IST
ಮುಂಬಯಿ: ಮಾಹಾರಾಷ್ಟ್ರ ಚುನಾವಣೆಯಲ್ಲಿ ವರ್ಸೋವಾ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಬಿಗ್‌ಬಾಸ್ ಖ್ಯಾತಿಯ ನಟ ಅಜಾಜ್ ಖಾನ್ ಭಾರೀ ಅಂತರದಲ್ಲಿ ಹೀನಾಯ ಸೋಲುಂಡು ಭಾರೀ ಸುದ್ದಿಯಾಗಿದ್ದಾರೆ.
ಆಜಾದ್ ಸಮಾಜ್ ಪಕ್ಷ (ಕಾನ್ಶಿರಾಮ್)ದಿಂದ ಕಣಕ್ಕಿಳಿದಿದ್ದ ಅಜಾಜ್ ಕೇವಲ 155 ಮತ ಗಳಿಸಿದ್ದಾರೆ. ಈ ಮತ ಗಳಿಕೆಯು ಕ್ಷೇತ್ರದಲ್ಲಿ ಚಲಾ ವಣೆಯಾದ ನೋಟಾ ಮತಗಳಿಗಿಂತಲೂ ಕಡಿಮೆ. 1,298 ಮಂದಿ ನೋಟಾಗೆ ಮತ ಚಲಾಯಿಸಿದ್ದಾರೆ. ವಿಶೇಷವೆಂದರೆ ಅಜಾಜ್ ಅವರಿಗೆ ಇನ್ ಸ್ಟಾಗ್ರಾಂನಲ್ಲಿ 56 ಲಕ್ಷ ಮಂದಿ ಹಿಂಬಾಲಕರಿದ್ದಾರೆ.
ಸಾಮಾಜಿಕ ತಾಣದಲ್ಲಿ ಎಷ್ಟೇ ಲಕ್ಷ ಬೆಂಬಲಿಗರಿದ್ದರೂ ಮತಗಳಾಗಿ ಪರಿವರ್ತಿಸುವುದು ಅಷ್ಟು ಸುಲಭವಲ್ಲ ಎನ್ನುವುದು ಈ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.
ಸಲ್ಮಾನ್ ಖಾನ್ ನಿರೂಪಣೆ ಮಾಡುವ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 7 ರಲ್ಲಿ ಅಜಾಜ್ ಖಾನ್ ಹೆಸರು ಮಾಡಿದ್ದರು. ಫಿಯರ್ ಫ್ಯಾಕ್ಟರ್, ಕಾಮಿಡಿ ನೈಟ್ಸ್ ವಿತ್ ಕಪಿಲ್, ಕಾಮಿಡಿ ಕ್ಲಾಸಸ್ ಮತ್ತು ಕಾಮಿಡಿ ನೈಟ್ಸ್ ಬಚಾವೋ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು ಹಲವಾರು ಸಂಗೀತ ವಿಡಿಯೋಗಳೊಂದಿಗೆ ತೆಲುಗು, ಕನ್ನಡ ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ನಟನೆ ಮಾಡಿದ್ದಾರೆ.
ಸಾಮಾಜಿಕ ತಾಣದಲ್ಲಿ ಅನೇಕರು “ಇನ್‌ಸ್ಟಾಗ್ರಾಮ್‌ನಲ್ಲಿ 5.6 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಅಜಾಜ್ ಖಾನ್ ಕೇವಲ ಮತಗಳನ್ನು ಪಡೆದರು. 16 ವರ್ಷ ದವರು ಬಿಗ್ ಬಾಸ್ ಎವಿಕ್ಷನ್‌ನಂತೆ ವಿಧಾನಸಭಾ ಚುನಾವಣೆಗಳಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.
ಅಜಾಜ್ ಖಾನ್ ಅವರನ್ನು 2021 ರಲ್ಲಿ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಬಂಧಿಸಿತ್ತು.
ವಿಶೇಷವೆಂದರೆ ಅಜಾಜ್ ಖಾನ್ ಅವರೊಂದಿಗೆ ಪ್ರಚಾರದಲ್ಲಿ ಭಾಗಿಯಾದ ಕ್ಷೇತ್ರದ ಕಾರ್ಯಕರ್ತರೂ ಮತ ಹಾಕಲಿಲ್ಲ ಎನ್ನುವುದೂ ಬಹಿರಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.