Bihar: ಯೂಟ್ಯೂಬ್ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ
Team Udayavani, Sep 8, 2024, 4:29 PM IST
ಪಾಟ್ನಾ: ನಕಲಿ ವೈದ್ಯನೊಬ್ಬ (Fake Doctor) ಯೂಟ್ಯೂಬ್ (Youtube) ನೋಡಿ ಶಸ್ತ್ರ ಚಿಕಿತ್ಸೆ ಮಾಡಿದ ಪರಿಣಾಮ 15 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿರುವ ಘಟನೆ ಬಿಹಾರದ (Bihar) ಸರನ್ ಜಿಲ್ಲೆಯಲ್ಲಿ ನಡೆದಿದೆ.
15 ವರ್ಷದ ಬಾಲಕನಿಗೆ ತೀವ್ರ ಹೊಟ್ಟೆ ನೋವು ಹಾಗೂ ವಾಂತಿ ಆಗುತ್ತಿದ್ದ ಪರಿಣಾಮ ಆತನ ಮನೆಯವರು ಶುಕ್ರವಾರ(ಸೆ.6ರಂದು) ರಾತ್ರಿ ಮಧುರಾದಲ್ಲಿರುವ ಅಜಿತ್ ಕುಮಾರ್ ಪುರಿ ಎಂಬಾತ ನಡೆಸುತ್ತಿದ್ದ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿದ್ದಾರೆ.
ಬಾಲಕನ ಪಿತ್ತಕೋಶದಲ್ಲಿ ಕಲ್ಲು ಕಾಣಿಸಿಕೊಂಡಿದ್ದು ಅದನ್ನು ತೆಗೆಯಲು ಶಸ್ತ್ರಚಿಕಿತ್ಸೆಯ (Surgery) ಅಗತ್ಯವಿದೆ ಎಂದು ಅಜಿತ್ ಕುಮಾರ್ ಆಪರೇಷನ್ ಮಾಡಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ
ಅಜಿತ್ ಕುಮಾರ್ ತಮ್ಮ ಒಪ್ಪಿಗೆಯನ್ನು ಪಡೆಯದೆ ಶಸ್ತ್ರಚಿಕಿತ್ಸೆ ಮಾಡಲು ಪ್ರಾರಂಭಿಸಿದರು. ತಮ್ಮ ಮೊಬೈಲ್ ಫೋನ್‌ನಲ್ಲಿ ಯೂಟ್ಯೂಬ್ ವಿಡಿಯೋಗಳನ್ನು ನೋಡಿಕೊಂಡು ಅದರಲ್ಲಿನ ಸಲಹೆಯಂತೆ ಅವರು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.
ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಬಾಲಕನ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಇದನ್ನು ಪ್ರಶ್ನಿಸಿದಾಗ ಕುಟುಂಬದವರ ಮೇಲೆಯೇ ಪುರಿ “ನಾನು ಇಲ್ಲಿ ವೈದ್ಯನೇ ಅಥವಾ ನೀವೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ವೈದ್ಯ ಬಾಲಕನನ್ನು ಪಾಟ್ನಾ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ ಆದರೆ ಮಾರ್ಗ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.
ವೈದ್ಯ ಪುರಿ ನಿರ್ಲಕ್ಷ್ಯ ಮತ್ತು ದುಷ್ಕೃತ್ಯದ ಆರೋಪದ ಮೇಲೆ ಬಾಲಕನ ಕುಟುಂಬ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನಕಲಿ ವೈದ್ಯರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಪೊಲೀಸರು ನಕಲಿ ವೈದ್ಯ ಪುರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ಮತ್ತು ಕ್ಲಿನಿಕ್‌ನ ನೌಕರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.