Video: ರೈಲು ಹತ್ತುವ ವೇಳೆ ನೂಕುನುಗ್ಗಲು, ಹಳಿ ಮೇಲೆ ಬಿದ್ದ ತಾಯಿ, ಇಬ್ಬರು ಮಕ್ಕಳು…
ಮೂವರು ಬದುಕಿ ಬಂದದ್ದೇ ಪವಾಡ
Team Udayavani, Dec 24, 2023, 1:04 PM IST
ಬಿಹಾರ: ರೈಲು ಹಳಿಯ ಮೇಲೆ ತಾಯಿ ಮತ್ತು ಇಬ್ಬರು ಮಕ್ಕಳು ಬಿದ್ದು ಅವರ ಮೇಲೆ ರೈಲು ಹರಿದ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರ ರೈಲು ನಿಲ್ದಾಣದಲ್ಲಿ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳ ಮೇಲೆ ರೈಲು ಹರಿದಿದೆ ಆದರೆ ಇವರ ಅದೃಷ್ಟ ಚೆನ್ನಾಗಿತ್ತು ನೋಡಿ ಮೂವರೂ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದಾರೆ.
ಏನಿದು ಘಟನೆ: ಶನಿವಾರ, ಮಹಿಳೆ ಮತ್ತು ಅವರ ಮಕ್ಕಳು ತಮ್ಮ ಕುಟುಂಬದೊಂದಿಗೆ ದೆಹಲಿಗೆ ತೆರಳಲು ವಿಕ್ರಮಶಿಲಾ ಎಕ್ಸ್‌ಪ್ರೆಸ್ ಹತ್ತಲು ಬಿಹಾರದ ಬರ್ಹ್ ರೈಲು ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ರೈಲು ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲಿಗಾಗಿ ಕಾಯುತಿದ್ದರು ಇದಾದ ಕೆಲವೇ ಹೊತ್ತಿನಲ್ಲಿ ಪ್ಲಾಟ್ ಫಾರ್ಮ್ ಗೆ ರೈಲು ಬಂದಿದೆ ಈ ವೇಳೆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಎತ್ತಿಕೊಂಡು ಜನರ ನೂಕುನುಗ್ಗಲ ನಡುವೆ ರೈಲು ಹತ್ತಲು ಮುಂದಾಗಿದ್ದಾಳೆ ಇನ್ನೇನು ರೈಲು ಹತ್ತಬೇಕು ಎನ್ನುವಷ್ಟರಲ್ಲಿ ಮಹಿಳೆಯ ಕಾಲು ಜಾರಿ ರೈಲು ಹಳಿಯ ಮೇಲೆ ಬಿದ್ದಿದ್ದಾರೆ ಇನ್ನೇನು ಅಲ್ಲಿದ ಜನ ರಕ್ಷಣೆಗೆ ಮುಂದಾಗಬೇಕು ಎನ್ನುವಷ್ಟರಲ್ಲಿ ರೈಲು ಹೊರಟಿದೆ.
ಈ ವೇಳೆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ತಬ್ಬಿ ಹಿಡಿದು ರೈಲು ಹಳಿಗಳ ನಡುವೆ ಮಲಗಿದ್ದಾರೆ ರೈಲು ಹಾದು ಹೋಗುವ ವೇಳೆ ಅಲ್ಲಿದ್ದ ಜನ ಭಯಭೀತರಾಗಿದ್ದಾರೆ ಆದರೆ ರೈಲು ಹಾದು ಹೋದ ಬಳಿಕ ಅಲ್ಲಿದ್ದ ಸಾರ್ವಜನಿಕರು ಮಹಿಳೆ ಇದ್ದ ಕಡೆ ಧಾವಿಸಿ ರಕ್ಷಣೆ ಮಾಡಿ ಮೇಲೆ ಕರೆದು ತಂದಿದ್ದಾರೆ ಅದೃಷ್ಟವಶಾತ್ ಮೂವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆಯನ್ನು ಅಲ್ಲಿದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ನಿಜಕ್ಕೂ ತಾಯಿ ಮಕ್ಕಳ ಅದೃಷ್ಟ ಚೆನ್ನಾಗಿತ್ತು ಮಹಿಳೆಯ ಸಮಯ ಪ್ರಜ್ಞೆಯಿಂದ ಮೂವರು ಬದುಕುಳಿಯುವಂತಾಯಿತು.
ಇದನ್ನೂ ಓದಿ: Test; ವಾಂಖೆಡೆಯಲ್ಲಿ ವನಿತೆಯರ ವಿಕ್ರಮ; ಆಸೀಸ್ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಗೆದ್ದ ಭಾರತ
Video: Train Passes Over Woman, Her 2 Children In Bihar. They Survive https://t.co/7u7prDle7R pic.twitter.com/Lg8wAPFb1e
— NDTV (@ndtv) December 23, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.