DJ ಗೆ ಪೊಲೀಸರ ತಡೆ; ಠಾಣೆ ಎದುರು ಪ್ರತಿಭಟನೆಗೆ ಕುಳಿತ ವಧು-ವರ!!
Team Udayavani, Apr 8, 2023, 7:21 PM IST
ರತ್ಲಾಮ್: ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಮದುವೆಯಲ್ಲಿ ಡಿಜೆ ಸಂಗೀತವನ್ನು ಪೊಲೀಸರು ತಡೆದ ನಂತರ ದಂಪತಿಗಳು ಠಾಣೆಯ ಎದುರು ಧರಣಿ ನಡೆಸಿ ಗಮನ ಸೆಳೆದಿದ್ದಾರೆ.
ಪೊಲೀಸ್ ಠಾಣೆಯಲ್ಲಿ ವಧು-ವರರು ಪ್ರತಿಭಟನೆಗೆ ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಇಬ್ಬರು ಪೊಲೀಸರುಮದುವೆ ಸ್ಥಳಕ್ಕೆ ಆಗಮಿಸಿ ಡಿಜೆ ಸಂಗೀತ ನುಡಿಸುವುದನ್ನು ನಿಲ್ಲಿಸುವಂತೆ ಕೇಳಿಕೊಂಡರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಥಳದಲ್ಲಿ ಪೊಲೀಸರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ದಂಪತಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಪೊಲೀಸ್ ಠಾಣೆಗೆ ತಲುಪಿ ಸುಮಾರು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವರ ಅಜಯ್ ಸೋಲಂಕಿ, ಪೊಲೀಸರು ತಮ್ಮ ಕುಟುಂಬದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಮದುವೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವವರೆಗೂ ದಂಪತಿಗಳು ಮದುವೆಯಾಗಲು ನಿರಾಕರಿಸಿದ್ದರು. ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಮದುವೆ ಮಂಟಪಕ್ಕೆ ಮರಳಿದರು ಎಂದು ಪೊಲೀಸ್ ಠಾಣೆ ಪ್ರಭಾರಿ ರಾಜೇಂದ್ರ ವರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಪತ್ನಿ ಮುಂದೆ ʼಅಂಕಲ್ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
Kerala: ಸರಣಿ ಅಪಘಾತ… ಅಪಾಯದಿಂದ ಪಾರಾದ ಕೇರಳ ಸಿಎಂ: ವಿಡಿಯೋ ವೈರಲ್
Challenge; ಪೆಟ್ರೋಲ್ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!
Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.