Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು
Team Udayavani, Nov 13, 2024, 7:33 PM IST
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ ಖತರ್ನಾಕ್ ಕಳ್ಳರ ತಂಡ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೊರಗಿನಿಂದ ನೋಡಲು ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನ ಆದರೆ ಅಸಲಿಗೆ ಇದು ಪೆಟ್ರೋಲ್ ಟ್ಯಾಂಕರ್ ಅಲ್ಲವೇ ಅಲ್ಲ ಬದಲಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲು ಖತರ್ನಾಕ್ ಕಳ್ಳರು ರೆಡಿ ಮಾಡಿದ ವಾಹನ.
ಇತ್ತೀಚಿಗೆ ನವೆಂಬರ್ 11 ರಂದು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು ಜಮ್ಮು ಕಾಶ್ಮೀರದ ನೋಂದಣಿ ಹೊಂದಿರುವ ವಾಹನ ನೋಡಲು ಪೆಟ್ರೋಲ್ ಟ್ಯಾಂಕರ್ ರೀತಿ ಕಾಣುತ್ತಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದಾಗಲೇ ಗೊತ್ತು ಇದು ಟ್ಯಾಂಕರ್ ಅಲ್ಲ ಬದಲಿಗೆ ಗೋವುಗಳನ್ನು ಅಕ್ರಮವಾಗಿ ಸಾಗಿಸಲು ಮಾಡಿದ ವಾಹನ ಎಂಬುದು ಇದನ್ನು ಕಂಡ ಜನರು ಕೂಡ ಬೆಚ್ಚಿ ಬಿದ್ದಿದ್ದಾರೆ.
ಅಕ್ರಮವಾಗಿ ಗೋವುಗಳನ್ನು ವಾಹನದಲ್ಲಿ ಸಾಗಿಸುವ ಮಾಹಿತಿ ಪಡೆದ ಜಮ್ಮು ಕಾಶ್ಮೀರ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಟ್ಯಾಂಕರ್ ಒಳಗೆ ಇರುವುದು ಪೆಟ್ರೋಲ್ ಅಲ್ಲ ಬದಲಿಗೆ ಗೋವುಗಳು ಎಂಬುದು ಬೆಳಕಿಗೆ ಬಂದಿದೆ ಬಳಿಕ ಪೊಲೀಸರು ಬುಲ್ಡೋಜರ್ ತರಿಸಿ ಟ್ಯಾಂಕರ್ ನ ಒಂದು ಭಾಗ ತೆರೆದು ನೋಡಿದಾಗ ಟ್ಯಾಂಕರ್ ಒಳಗೆ ದನಗಳ ರಾಶಿ ಕಂಡು ಪೊಲೀಸರೇ ದಂಗಾಗಿದ್ದಾರೆ.
There is no petrol in this truck tanker but cows. This is the new way for smuggling the cows. These butchers deserve harshest punishment. pic.twitter.com/fBd0wlijrp
— Frontalforce 🇮🇳 (@FrontalForce) November 11, 2024
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ಖತರ್ನಾಕ್ ಗ್ಯಾಂಗ್ ವಿರುದ್ಧ ಆಕ್ರೋಶ ಹೊರಹಾಕಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
Tragedy: ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ.. 5 ತಿಂಗಳ ಮಗು ಸೇರಿ ಐವರು ದುರ್ಮರಣ
Bitcoin Scam: ಬಿಟ್‌ಕಾಯಿನ್ ವಿವಾದ… ಧ್ವನಿ ಸುಪ್ರಿಯಾದ್ದೆ ಎಂದ ಅಜಿತ್
Maharashtra Polls: ಘರ್ಷಣೆ, ವಾಗ್ವಾದ ನಡುವೆ ಮಹಾರಾಷ್ಟ್ರ ಮತ ಕುಸಿತ
Digitisation: ಡಿಜಿಟಲೀಕರಣದಿಂದ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Bhairathi Ranagal: ಶಿವಣ್ಣನ ಮೊಗದಲ್ಲಿ ಭೈರತಿ ನಗು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.