Video… ಪಂಜಾಬ್ ನ ಪ್ರಸಿದ್ಧ ಹೋಟೆಲ್ ನಲ್ಲಿ ನೀಡಿದ ಆಹಾರದಲ್ಲಿ ಸತ್ತ ಇಲಿ ಪತ್ತೆ!
Team Udayavani, Jul 3, 2023, 7:13 PM IST
ಪಂಜಾಬ್: ಇಲ್ಲಿನ ಪ್ರಸಿದ್ಧ ಹೋಟೆಲ್ ಒಂದರಲ್ಲಿ ಕುಟುಂಬವೊಂದು ಆರ್ಡರ್ ಮಾಡಿದ ಆಹಾರದಲ್ಲಿ ಸತ್ತ ಇಲಿಯೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಲುಧಿಯಾನದ ವಿಶ್ವಕರ್ಮ ಚೌಕ್ ಬಳಿಯ ಪ್ರಸಿದ್ಧ ರೆಸ್ಟೋರೆಂಟ್‌ಗೆ ಕುಟುಂಬ ಸದಸ್ಯರು ಊಟ ಮಾಡಲು ಬಂದಿದ್ದಾರೆ. ಈ ವೇಳೆ ಕುಟುಂಬ ಸದಸ್ಯರು ಮಲೈ ಮಟನ್ ಆರ್ಡರ್ ಮಾಡಿದ್ದಾರೆ. ಆಹಾರ ತಯಾರಾಗಿ ಟೇಬಲ್ ಮೇಲೆ ಬಂದಿದೆ ಇನ್ನೇನು ಪ್ಲೇಟ್ ಗೆ ಬಡಿಸಲು ತೆಗೆದಾಗ ಅದರಲ್ಲಿ ಬೆಂದ ಇಲಿಯೊಂದು ಪತ್ತೆಯಾಗಿದೆ. ಇದನ್ನು ಕಂಡ ಕುಟುಂಬ ಗಾಬರಿಗೊಳಗಾಗಿದೆ.
ಘಟನೆಗೆ ಸಂಬಂಧಿಸಿ ಕುಟುಂಬ ಸದಸ್ಯರು ಹೋಟೆಲ್ ಮಾಲೀಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ಮೊಬೈಲ್ ನಿಂದ ಸತ್ತ ಇಲಿಯ ವಿಡಿಯೋ ಮಾಡಿ ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.
ಇಷ್ಟೆಲ್ಲಾ ನಡೆದ ಬಳಿಕ ರೆಸ್ಟೋರೆಂಟ್ ಮಾಲೀಕ ಇದು ಸತ್ಯಕ್ಕೆ ದೂರವಾದ ವಿಚಾರ ನಮ್ಮ ಹೋಟೆಲ್ ಹೆಸರು ಹಾಳು ಮಾಡಲು ಈ ರೀತಿ ಮಾಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
In a famous restaurant of Ludhiana, a customer alleged that a rat had been served in their order of Malai Mutton and made a video of it. On the other hand, the restaurant owner rejects the claim and alleges that the customer is trying to defame his restaurant by using this trick. pic.twitter.com/lI3rc9BSLr
— Gagandeep Singh (@Gagan4344) July 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.