Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
ಖತರ್ನಾಕ್ ನನ್ನ ಬಂಧಿಸಿರುವ ದೆಹಲಿ ಪೊಲೀಸರು ಜನ್ಮ ಜಾಲಾಡುತ್ತಿದ್ದಾರೆ...
Team Udayavani, Jan 4, 2025, 8:33 PM IST
ನವದೆಹಲಿ: ಹಗಲಿನಲ್ಲಿ ಉತ್ತರ ಪ್ರದೇಶದ ನೋಯ್ಡಾದ ಖಾಸಗಿ ಕಂಪನಿಯಲ್ಲಿ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ರಾತ್ರಿ ಯುಎಸ್ ಮೂಲದ ಮಾಡೆಲ್ ಆಗಿ ಬದಲಾಗುತ್ತಿದ್ದ. ಹೌದು ಹಗಲಿನ ಕೆಲಸ ಮುಗಿಸಿದ ಬಳಿಕ ರಾತ್ರಿಯ ಚಟುವಟಿಕೆಗಳು ಯುವತಿಯರೊಂದಿಗೆ ಆನ್ಲೈನ್ ನಲ್ಲೆ ನಡೆಯುತ್ತಿದ್ದವು.
ಡೇಟಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾಡೆಲ್ ಆಗಿ ನಟಿಸುವ ಮೂಲಕ 700 ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ ಬ್ಲ್ಯಾಕ್‌ಮೇಲ್ ಮೂಲಕ ಭಾರೀ ಹಣವನ್ನು ಪೀಕಿದ ಆರೋಪದ ಮೇಲೆ 23 ವರ್ಷದ ತುಷಾರ್ ಸಿಂಗ್ ಬಿಶ್ತ್ ಎಂಬಾತನನ್ನು ಪೂರ್ವ ದೆಹಲಿಯ ಶಕರ್‌ಪುರ ಪ್ರದೇಶದಲ್ಲಿ ಬಂಧಿಸಲಾಗಿದೆ.
ದೆಹಲಿ ನಿವಾಸಿ ತುಷಾರ್ BBA ಪದವಿ ಪಡೆದಿದ್ದು, ಕಳೆದ ಮೂರು ವರ್ಷಗಳಿಂದ ನೋಯ್ಡಾದ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ರಿಕ್ರೂಟರ್ ಆಗಿ ಕೆಲಸ ಮಾಡುತ್ತಿದ್ದ. ರಾತ್ರಿ ವೇಳೆ ವಂಚನೆಯನ್ನೇ ಕಾಯಕವನ್ನಾಗಿಸಿಕೊಂಡಿದ್ದ.ಸೈಬರ್ ಕ್ರೈಮ್ ಜಗತ್ತಿಗೆ ಇಳಿದು ಭಾರೀ ಸಂಖ್ಯೆಯ ಮಹಿಳೆಯರನ್ನು ಸಂಪರ್ಕಿಸಿ ಅವರಲ್ಲಿ ದುರಾಸೆ ಮೂಡಿಸಿ ಹಣ ಮಾಡಿದ್ದಾನೆ.
ಆ್ಯಪ್ ಮೂಲಕ ಪಡೆದ ವರ್ಚುವಲ್ ಅಂತಾರಾಷ್ಟ್ರೀಯ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು, ತುಷಾರ್ ಜನಪ್ರಿಯ ಡೇಟಿಂಗ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಬಂಬಲ್ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ನಕಲಿ ಪ್ರೊಫೈಲ್‌ಗಳನ್ನು ರಚಿಸಿ ಕೊಂಡು ಮಹಿಳೆಯರ ಸಂಪರ್ಕ ಸಾಧಿಸಿ ವಂಚಿಸಿದ್ದಾನೆ.
ಬ್ರೆಜಿಲ್ ಮಾಡೆಲ್‌ನ ಫೋಟೋಗಳನ್ನು ಬಳಸಿಕೂಂಡು ಕಟ್ಟು ಕಥೆಗಳೊಂದಿಗೆ ಫ್ಯಾಬ್ರಿಕೇಟೆಡ್ ಬಳಸಿಕೊಂಡು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದು18-30 ವರ್ಷ ವಯಸ್ಸಿನ ಯುವತಿಯರ ಸ್ನೇಹ ಬೆಳೆಸಿ ಫೋಟೋಗಳನ್ನು ಪಡೆದು ವಂಚನೆ ಮಾಡಿದ್ದಾನೆ.
ಪೊಲೀಸರ ಪ್ರಕಾರ, ತುಷಾರ್ ಈ ದೃಶ್ಯಗಳನ್ನು ಬಳಸಿಕೊಂಡು ಯುವತಿಯರಿಗೆ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದ. ಸಂತ್ರಸ್ತೆ ಹಣ ನೀಡಲು ನಿರಾಕರಿಸಿದರೆ, ಫೋಟೋಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಅಥವಾ ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.
ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತುಷಾರ್ ನನ್ನ ಬಂಧಿಸಿರುವ ಪೊಲೀಸರು ಆತನ ಜನ್ಮ ಜಾಲಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
UP: ವಿವಾಹದ ಮಧ್ಯೆ ಬಾತ್‌ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.