Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Team Udayavani, Sep 18, 2024, 4:28 PM IST
ಹೈದರಾಬಾದ್: ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಬೆಡ್‌ನಲ್ಲಿ ಮಲಗಿಕೊಂಡು ಸಿನಿಮಾ ನೋಡುತ್ತಿರುವ ವೇಳೆಯೇ ವೈದ್ಯರು ಯಶಸ್ವಿಯಾಗಿ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಸಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಸರ್ಕಾರಿ ಜನರಲ್ ಆಸ್ಪತ್ರೆಯ ವೈದ್ಯರ ತಂಡವು ರೋಗಿಯೊಬ್ಬರ ಮೆದುಳಿನ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿದೆ.
ಕೊತಪಲ್ಲಿಯ ಎ ಅನಂತಲಕ್ಷ್ಮಿ ಅವರಿಗೆ ತಮ್ಮ ಕೈಕಾಲುಗಳಲ್ಲಿ ಮರಗಟ್ಟುವಿಕೆ ಮತ್ತು ನಿರಂತರ ತಲೆನೋವಿನಂತಹ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಅವರ ಮೆದುಳಿನ ಎಡಭಾಗದಲ್ಲಿ 3.3 x 2.7 ಸೆಂ.ಮೀ ಗಡ್ಡೆಯಿರುವುದು ಪತ್ತೆಯಾಗಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸಾ ವೆಚ್ಚದ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಂಡು ಶಸ್ತ್ರ ಚಿಕಿತ್ಸೆ ಮಾಡಿಸಲು ಮುಂದಾಗುತ್ತಾರೆ.
Doctors at the Government General Hospital, Kakinada for the first time removed a brain tumor from a female patient through “Awake Craniotomy” surgery, while showing her favorite movie Adhurs, starring Jr NTR.
The 55-year-old patient A Anantalakshmi from A… pic.twitter.com/s9jS9r7mGK
— NewsMeter (@NewsMeter_In) September 18, 2024
ಈ ಮೆದುಳಿನ ಶಸ್ತ್ರ ಚಿಕಿತ್ಸೆಗೆ ʼಅವೇಕ್ ಕ್ರಾನಿಯೊಟಮಿ’(Awake craniotomy) ಅಥವಾ ʼಅವೇಕ್ ಬ್ರೈನ್ ಸರ್ಜರಿʼ(Awake Brain Surgery) ಎಂದೂ ಕರೆಯುತ್ತಾರೆ. ಈ ಶಸ್ತ್ರ ಚಿಕಿತ್ಸಾ ವಿಧಾನದಲ್ಲಿ ರೋಗಿಯು ಎಚ್ಚರವಾಗಿರಬೇಕಾಗುತ್ತದೆ. ಮೆದುಳಿನ ನರಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಎಚ್ಚರಿಕೆಯಿಂದ ಈ ಸರ್ಜರಿಯನ್ನು ನಡೆಸಬೇಕಾಗುತ್ತದೆ. ಆಗಾಗ ರೋಗಿಯ ಬಳಿ ಶಸ್ತ್ರಚಿಕಿತ್ಸಾ ತಂಡ ಸಂವಹನ ನಡೆಸಬೇಕಾಗುತ್ತದೆ.
ಹೀಗಾಗಿ ರೋಗಿ ಎಚ್ಚರದಿಂದ ಇರಬೇಕಾಗುವ ಹಿನ್ನೆಲೆಯಲ್ಲಿ, ಅನಂತಲಕ್ಷ್ಮಿ ಸರ್ಜರಿ ನಡೆಸುವಾಗ ಎಚ್ಚರದಿಂದ ಇದ್ದು ತನ್ನ ನೆಚ್ಚಿನ ಹೀರೋ ಜೂ.ಎನ್ ಟಿಆರ್ ಅವರ ʼಅಧುರ್ಸ್ʼ ಸಿನಿಮಾವನ್ನು ನೋಡಿದ್ದಾರೆ.
ಮೂರು ಗಂಟೆಗಳ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸ್ವಲ್ಪ ಸಮಯದ ನಂತರ ರೋಗಿಯು ಎದ್ದು ಉಪಹಾರ ಸೇವಿಸಲು ಸಾಧ್ಯವಾಯಿತು. ವರದಿಗಳ ಪ್ರಕಾರ, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಐದು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ.
ಸದ್ಯ ಅವರು ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.