Bhopal: ಆ್ಯಂಬ್ಯುಲೆನ್ಸ್ ನೀಡದ ಆಸ್ಪತ್ರೆ: ಮಗಳ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ತಂದೆ
Team Udayavani, May 17, 2023, 10:29 AM IST
ಭೋಪಾಲ್: ತೀರಿಹೋದ ಮಗನ ಮೃತದೇಹವನ್ನು ಮನೆಗೆ ತರಲು ಆ್ಯಂಬ್ಯುಲೆನ್ಸ್ ನವರು ಹೆಚ್ಚು ಹಣ ಕೇಳಿದಕ್ಕೆ ತಂದೆಯೊಬ್ಬ ಮೃತದೇಹವನ್ನು ಬ್ಯಾಗ್ ನಲ್ಲಿ ಹಾಕಿ ಮನೆಗೆ ತಂದ ಪಶ್ಚಿಮ ಬಂಗಾಳದ ಸುದ್ದಿ ಪ್ರಚಲಿತದಲ್ಲಿರುವಾಗಲೇ ಅಂಥದ್ದೇ ಹೃದಯ ವಿದ್ರಾವಕ ಘಟನೆ ಮಧ್ಯ ಪ್ರದೇಶದದಲ್ಲಿ ನಡೆದಿದೆ.
ಮಧ್ಯ ಪ್ರದೇಶದ ಕೋಟಾ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಎಂಬುವರ ಮಗಳು ಮಾಧುರಿ (13) ಯನ್ನು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತು. ರಕ್ತಹೀನತೆಯಿಂದ ಆಕೆ ಮೃತಪಟ್ಟಿದ್ದಾಳೆ. ಗ್ರಾಮದಿಂದ 70 ಕಿ.ಮೀ ದೂರದಲ್ಲಿರುವ ಶಹದೋಲ್ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದು ಮಗಳ ಮೃತದೇಹವನ್ನು ಊರಿಗೆ ಕರೆತರಲು ಲಕ್ಷ್ಮಣ್ ಸಿಂಗ್ ಆ್ಯಂಬ್ಯುಲೆನ್ಸ್ ವ್ಯವಸ್ಥೆಯನ್ನು ಕೇಳಿದ್ದಾರೆ. ಆದರೆ ಆಸ್ಪತ್ರೆಯವರು 15 ಕಿ.ಮೀಕ್ಕಿಂತ ದೂರದ ಪ್ರದೇಶಕ್ಕೆ ಆ್ಯಂಬ್ಯುಲೆನ್ಸ್ ಇಲ್ಲ ಎಂದು ಹೇಳಿದ್ದಾರೆ.
ಖಾಸಗಿ ಆ್ಯಂಬ್ಯುಲೆನ್ಸ್ ಮಾಡಲು ನಮ್ಮ ಬಳಿ ಹಣವಿಲ್ಲದ ಕಾರಣ ನಾವು ಮಗಳ ಮೃತದೇಹವನ್ನು ಬೈಕ್ ನಲ್ಲಿ ಹಿಡಿದುಕೊಂಡು ಬಂದಿದ್ದೇವೆ ಎಂದು ತಂದೆ ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.
ಇನ್ನೇನು ಊರಿಗೆ ತಲುಪಲು 20 ಕಿ.ಮೀ ದೂರವಿರುವಾಗ ಬೇರೊಂದು ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಶಹದೋಲ್ ನ ಜಿಲ್ಲಾಧಿಕಾರಿ ವಂದನಾ ವೈದ್ಯ ಅವರು ಬೈಕ್ ನಲ್ಲಿ ಹೋಗುತ್ತಿದ್ದವರನ್ನು ತಡೆದು ಕೂಡಲೇ ವಾಹನದ ವ್ಯವಸ್ಥೆ ಮಾಡಿಸಿ, ಈ ಬಗ್ಗೆ ಸೂಕ್ತ ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮೃತ ಯುವತಿಯ ಕುಟುಂಬಕ್ಕೆ ಆರ್ಥಿಕವಾಗಿ ಜಿಲ್ಲಾಧಿಕಾರಿಗಳು ನೆರವಾಗಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.