Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
ವಿಚಿತ್ರವೂ,ವಿಶೇಷವೂ ಎನಿಸುವ ಅದ್ಧೂರಿ ಸಮಾಧಿ ಕಾರ್ಯಕ್ರಮ.. ವಿಡಿಯೋ ವೈರಲ್
Team Udayavani, Nov 8, 2024, 7:55 PM IST
ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಉದ್ಯಮಿಯೊಬ್ಬರ ಕುಟುಂಬವೊಂದು ತಮ್ಮ ಬದುಕಿನಲ್ಲಿ ಅದೃಷ್ಟ ತಂದು ಕೊಟ್ಟ ಕಾರಿಗೆ ಅದ್ಧೂರಿ ಸಮಾಧಿ ಕಾರ್ಯಕ್ರಮವನ್ನು ನಡೆಸಿದ್ದು ಸದ್ಯ ಭಾರೀ ಸುದ್ದಿಯಾಗುತ್ತಿದೆ. ಲಾಠಿ ತಾಲೂಕಿನ ಪಾದರಶಿಂಗ ಗ್ರಾಮದಲ್ಲಿ ಗುರುವಾರ ಸಂಜಯ ಪೋಲಾರ್ ಮತ್ತು ಕುಟುಂಬ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಆಧ್ಯಾತ್ಮಿಕ ಮುಖಂಡರು ಸೇರಿದಂತೆ ಸುಮಾರು 1,500 ಜನರು ಭಾಗವಹಿಸಿದ್ದರು ಎನ್ನುವುದು ಗಮನಾರ್ಹ ಸಂಗತಿ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಚಿತ್ರವೂ , ವಿಶೇಷವೂ ಎನಿಸುವ ಸಮಾಧಿ ಕಾರ್ಯಕ್ರಮದ ವಿಡಿಯೋದಲ್ಲಿ 12 ವರ್ಷ ಹಳೆಯದಾದ ವ್ಯಾಗನ್ ಆರ್ ಕಾರನ್ನು ಜಮೀನಿನಲ್ಲಿ 15 ಅಡಿ ಆಳದ ಹೊಂಡವನ್ನು ಅಗೆದು ಧಾರ್ಮಿಕ ಕ್ರಿಯೆಗಳನ್ನು ನಡೆಸುವ ಸಮಾಧಿ ಮಾಡಿರುವುದನ್ನು ಕಾಣಬಹುದಾಗಿದೆ.
ಹೂವುಗಳು ಮತ್ತು ಹೂಮಾಲೆಗಳಿಂದ ಅಲಂಕರಿಸಲ್ಪಟ್ಟ ಹ್ಯಾಚ್‌ಬ್ಯಾಕ್ ಅನ್ನು ಅವರ ಮನೆಯಿಂದ ಪೋಲಾರನ ಜಮೀನಿಗೆ ಬಹಳ ಸಂಭ್ರಮದಿಂದ ತೆಗೆದುಕೊಂಡು ಹೋಗಿ, ಇಳಿಜಾರಿನಲ್ಲಿ ಓಡಿಸಿ ಹಳ್ಳದಲ್ಲಿ ಇರಿಸಲಾಯಿತು.
ವಾಹನಕ್ಕೆ ಹಸುರು ಬಟ್ಟೆಯನ್ನು ಹೊದಿಸಿ, ಪುರೋಹಿತರು ಮಂತ್ರ ಪಠಿಸುತ್ತಿದ್ದಂತೆ ಕುಟುಂಬಸ್ಥರು ಪೂಜೆ ಸಲ್ಲಿಸಿ ಗುಲಾಬಿ ದಳಗಳನ್ನು ಸುರಿಸುವುದರ ಮೂಲಕ ಕಾರನ್ನು ಸಮಾಧಿ ಹೊಂಡಕ್ಕೆ ಇಳಿಸಲಾಗಿದೆ.ಜೆಸಿಬಿ ಬಳಸಿ ಮಣ್ಣು ಸುರಿದು ಕಾರನ್ನು ಹೂಳಲಾಗಿದೆ.
વ્હાલસોઈ નસીબદાર કારની સમાધિ !!!
અમરેલીમાં પરિવાર માટે લકી કારને વેચવાને બદલે ઘામધૂમથી જમણવાર યોજી સમાધિ અપાઈ, કારના સમાધિ સ્થળે વૃક્ષારોપણ કરાશે #Gujarat #Amreli pic.twitter.com/1c4hiogs7n
— Kamit Solanki (@KamitSolanki) November 8, 2024
ಸೂರತ್‌ನಲ್ಲಿ ಕನ್‌ಸ್ಟ್ರಕ್ಷನ್ ಉದ್ಯಮಿಯಾಗಿರುವ ಪೋಲಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಭವಿಷ್ಯದ ಪೀಳಿಗೆಗಳು ಕುಟುಂಬಕ್ಕೆ ಅದೃಷ್ಟವನ್ನು ಸಾಬೀತುಪಡಿಸಿದ ಕಾರನ್ನು ನೆನಪಿಟ್ಟುಕೊಳ್ಳಲು ವಿಭಿನ್ನವಾದದ್ದನ್ನು ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.
“ನಾನು ಕಾರನ್ನು 12 ವರ್ಷಗಳ ಹಿಂದೆ ಖರೀದಿಸಿದ್ದೆ. ಅದು ಕುಟುಂಬಕ್ಕೆ ಸಮೃದ್ಧಿಯನ್ನು ತಂದಿದೆ. ವ್ಯಾಪಾರದಲ್ಲಿ ಯಶಸ್ಸನ್ನು ಕಂಡಿದ್ದಲ್ಲದೆ, ನನ್ನ ಕುಟುಂಬವೂ ಗೌರವವನ್ನು ಗಳಿಸಿತು. ವಾಹನ ನನ್ನ ಕುಟುಂಬ ಮತ್ತು ನನಗೆ ಅದೃಷ್ಟವನ್ನು ಸಾಬೀತುಪಡಿಸಿತು. ಹಾಗಾಗಿ ಅದನ್ನು ಮಾರುವ ಬದಲು ನನ್ನ ಜಮೀನಿನಲ್ಲಿ ಸಮಾಧಿಯನ್ನು ಮಾಡಿದ್ದೇನೆ. ಸಮಾರಂಭಕ್ಕೆ 4 ಲಕ್ಷ ರೂಪಾಯಿ ಖರ್ಚು ಮಾಡಿದ್ದೇನೆ, ಸಮಾಧಿ ಸ್ಥಳದಲ್ಲಿ ಗಿಡವನ್ನು ನೆಡಲಾಗುತ್ತದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.