ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್
Team Udayavani, Jun 16, 2024, 5:13 PM IST
ಲಕ್ನೋ: ಸಂಭ್ರಮದಲ್ಲಿ ನಡೆಯಬೇಕಿದ್ದ ಮದುವೆಯೊಂದು ಆಸ್ಪತ್ರೆಯ ಐಸಿಯುನಲ್ಲಿ ವಿಶಿಷ್ಟವಾಗಿ ನಡೆದಿರುವ ಮೂಲಕ ಸುದ್ದಿಯಾಗಿದೆ.
ಲಕ್ನೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಈ ಘಟನೆ ನಡೆದಿದ್ದು, ಅದರ ವಿಡಿಯೋ ಇದೀಗ ವೈರಲ್ ಆಗಿದೆ.
ಲಕ್ನೋ ಚೌಕ್‌ನ ನಿವಾಸಿ ಮೊಹಮ್ಮದ್ ಇಕ್ಬಾಲ್ ಅವರ ತಮ್ಮ ಪುತ್ರಿಯ ಮದುವೆಯ ದಿನಾಂಕ ಸಮೀಪಿಸುತ್ತಿದ್ದಂತೆಯೇ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಂದೆಗೆ ತನ್ನ ಮಗಳ ಮದುವೆ ತನ್ನ ಮುಂದೆಯೇ ನಡೆಯಬೇಕೆನ್ನುವ ಆಸೆ ಇರುತ್ತದೆ. ಹೀಗಾಗಿ ಎರಡೂ ಕುಟುಂಬದ ಹಿರಿಯರು ಒಂದು ನಿರ್ಧಾರಕ್ಕೆ ಬಂದಿದ್ದಾರೆ.
ಇಕ್ಬಾಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರೂ, ಐಸಿಯುನಲ್ಲೇ ಅವರ ಪುತ್ರಿಯ ವಿವಾಹ ನೆರವೇರಿದೆ.
ಎರಾ ವೈದ್ಯಕೀಯ ಕಾಲೇಜಿನ ವೈದ್ಯರ ಸಹಕಾರದೊಂದಿಗೆ ಇಕ್ಬಾಲ್ ಅವರ ಆಸೆಯನ್ನು ನೆರವೇರಿಸಲಾಗಿದೆ. ಎರಡೂ ಕುಟುಂಬಸ್ಥರು ಐಸಿಯುನಲ್ಲಿ ಮಾಸ್ಕ್ ಧರಿಸಿಕೊಂಡು ಮೌಲಾನಾ ಅವರನ್ನು ಕರೆಸಿ ನಿಕಾಹ್ ನಡೆಸಿಕೊಟ್ಟಿದ್ದಾರೆ. ಬೆಡ್ ನಲ್ಲಿ ಅನಾರೋಗ್ಯದಿಂದ ಮಲಗಿದ್ದ ಇಕ್ಬಾಲ್ ಮಗಳ ಮದುವೆಯನ್ನು ನೋಡಿ ಖುಷಿಪಟ್ಟಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎರಡು ಕುಟುಂಬಗಳ ನಡುವಿನ ಹೊಂದಾಣಿಕೆ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
A hospital in UP’s Lucknow organised an ICU Wedding to fulfill ailing father’s wish to see his daughters getting married. pic.twitter.com/qSUf9SAnfH
— Piyush Rai (@Benarasiyaa) June 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.