ಜೈ ಶ್ರೀರಾಮ್ ಘೋಷಣೆ ಕೂಗಿ ಮುಸ್ಲಿಂ ಕುಟುಂಬದ ಮೇಲೆ ಬಲವಂತವಾಗಿ ಹೋಳಿ ಬಣ್ಣ ಎಸೆದ ಯುವಕರು
Team Udayavani, Mar 24, 2024, 2:53 PM IST
ಲಕ್ನೋ: ಮುಸ್ಲಿಂ ಕುಟುಂಬವೊಂದನ್ನು ಅಡ್ಡಗಟ್ಟಿ ಅವರ ಮೇಲೆ ಬಲವಂತವಾಗಿ ಹೋಳಿ ಬಣ್ಣವನ್ನು ಹಾಕಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಾರ್ಚ್ 20 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಬೈಕ್ ನಲ್ಲಿ ಸಾಗುತ್ತಿದ್ದ ಮುಸ್ಲಿಂ ಕುಟುಂಬವನ್ನು ಕೆಲ ಅಪರಿಚಿತರು ಅಡ್ಡಗಟ್ಟಿದ್ದಾರೆ. ಆ ಬಳಿಕ ಅವರ ಮೇಲೆ ಬಲವಂತವಾಗಿ ಬಣ್ಣದ ನೀರನ್ನು ಎಸೆದಿದ್ದಾರೆ. ಜೈಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ಕುಟುಂಬದ ಮೇಲೆ ಬಣ್ಣವನ್ನು ಎಸೆಯಲಾಗಿದೆ.
ನೊಂದ ಕುಟುಂಬವನ್ನು ಸಂಪರ್ಕಿಸಿ ಅವರಿಂದ ಹೇಳಿಕೆ ಪಡೆದು ಎಫ್ ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ. ಬಿಜ್ನೋರ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಈ ವ್ಯಕ್ತಿಗಳನ್ನು ಗುರುತಿಸುತ್ತಿದ್ದಾರೆ ಎಂದು ಎಸ್‌ಎಸ್‌ಪಿ ನೀರಜ್ ಜಾದುವಾನ್ ಹೇಳಿದ್ದಾರೆ.
ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
In UP’s Bijnor, a purported video of a family of three on motorcycle being harassed by people playing Holi on the street has surfaced. The family could be seen objecting to people forcefully applying colors and pouring water on them. pic.twitter.com/adjB4EADnH
— Piyush Rai (@Benarasiyaa) March 24, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.