Naatu Naatu ದಾಟಿಯಲ್ಲಿ ವೈರಲ್ ಆಗುತ್ತಿದೆ ಬಿಜೆಪಿಯ ಮೋದಿ ಮೋದಿ ಹಾಡು
Team Udayavani, Apr 11, 2023, 4:55 PM IST
ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಜನಪ್ರೀಯ ಹಾಡು ನಾಟು ನಾಟು ಹಾಡಿನ ದಾಟಿಯಲ್ಲಿ ಮೋದಿ ಮೋದಿ ಎನ್ನುವ ಬಿಜೆಪಿ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಹಾಡನ್ನು ಚುನಾವಣಾ ಪ್ರಚಾರಕ್ಕಾಗಿ ಸಂಯೋಜಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷವು ಮಂಗಳವಾರ ತೆಲುಗು ಚಲನಚಿತ್ರ ಆರ್.ಆರ್.ಆರ್ ನಿಂದ ಆಸ್ಕರ್ ವಿಜೇತ ನಾಟು ನಾಟು ಹಾಡಿನ ರೀಮಿಕ್ಸ್ ಅನ್ನು ಬಿಡುಗಡೆ ಮಾಡಿದೆ.
ಚುನಾವಣಾ ಪ್ರಚಾರದ ಹಾಡಿನಲ್ಲಿ, ಮೂಲ ನಾಟು ನಾಟು ಸಾಹಿತ್ಯವನ್ನು ಮೋದಿ ಮೋದಿ ಎಂದು ಬದಲಾಯಿಸಲಾಗಿದೆ, ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳ ಬಗೆಗೆ ಈ ಹಾಡಿನಲ್ಲಿ ಹೇಳಲಾಗಿದೆ. ಅಲ್ಲದೆ ಈ ವಿಡಿಯೊದಲ್ಲಿ ಜನರು ಪ್ರಸಿದ್ಧ ನಾಟು ನಾಟು ಹಾಡಿಗೆ ಹೆಜ್ಜೆಯನ್ನೂ ಅನುಕರಣೆ ಮಾಡುತ್ತಿರುವುದು ಕಂಡುಬಂದಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಅನೇಕ ಯೋಜನೆಗಳು ಮಾಡಿದೆ . ಶಿವಮೊಗ್ಗ ವಿಮಾನ ನಿಲ್ದಾಣ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಮೆಟ್ರೋ ಮಾರ್ಗಗಳು ಮತ್ತು ಇತರ ಕಲ್ಯಾಣ ಯೋಜನೆಗಳಂತಹ ಯೋಜನೆಗಳ ಮೇಲೆ ಕೇಂದ್ರೀಕರಿಸಿದೆ.
ರಾಜಕೀಯ ಪಕ್ಷವೊಂದು ಆಸ್ಕರ್ ಪ್ರಶಸ್ತಿ ವಿಜೇತ ಹಾಡನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದು ಇದೇ ಮೊದಲಲ್ಲ. 2009 ರಲ್ಲಿ, ಸ್ಲಮ್ ಡಾಗ್ ಮಿಲಿಯನೇರ್‌ನ ‘ಜೈ ಹೋ’ ಹಾಡು ಆಸ್ಕರ್ ಪ್ರಶಸ್ತಿಯನ್ನು ಗೆದ್ದಾಗ, ಕಾಂಗ್ರೆಸ್ ಪಕ್ಷವೂ ಸಹ ಈ ಹಾಡನ್ನು ‘ಜೈ ಹೋ ಕಾಂಗ್ರೆಸ್’ ಎಂದು ಸಂಯೋಜನೆ ಮಾಡಿತ್ತು.
ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಬಾರಿ ಮತದಾನ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜನತಾ ದಳ ನಡುವೆ ಚುನಾವಣಾ ಕದನ ನಡೆಯಲಿದೆ.
ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಅವರು ವಿಡಿಯೋವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ. “ಪ್ರಧಾನಮಂತ್ರಿ ಶ್ರೀ @narendramodi ನೇತೃತ್ವದ ನಮ್ಮ ಡಬಲ್ ಇಂಜಿನ್ @BJP4Karnataka ಸರ್ಕಾರದ ಪ್ರಯತ್ನಗಳು ಕರ್ನಾಟಕದಲ್ಲಿ ಅಭಿವೃದ್ಧಿ ಉತ್ಸವವನ್ನು ಅದ್ಭುತವಾದ ಹಾಡಿನ ಮೂಲಕ ಜನರಿಗೆ ತಲುಪಿಸಲು ಶ್ರಮಿಸುತ್ತಿವೆ @BJYM ಶ್ಲಾಘನೀಯ.” ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಶ್ರೀ @narendramodi ಅವರ ನೇತೃತ್ವದಲ್ಲಿ ನಮ್ಮ ಡಬಲ್ ಎಂಜಿನ್ @BJP4Karnataka ಸರ್ಕಾರವು ಕರ್ನಾಟಕದಲ್ಲಿ ಕೈಗೊಂಡಿರುವ ಅಭಿವೃದ್ಧಿಯ ಪರ್ವವನ್ನು ಅದ್ಭುತವಾದ ಹಾಡಿನ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿರುವ @BJYM ಪ್ರಯತ್ನ ಶ್ಲಾಘನೀಯ. pic.twitter.com/CCi9BBoGyp
— Dr Sudhakar K (@mla_sudhakar) April 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.