Heart Attack: ಕ್ರಿಕೆಟ್ ಆಡುವ ವೇಳೆ ಹೃದಯಾಘಾತ… ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು
Team Udayavani, Jan 10, 2024, 12:40 PM IST
ನೋಯ್ಡಾ: ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಪ್ರತಿದಿನ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ವರದಿಗಳು ಬರುತ್ತಿವೆ. ಇದೀಗ ನೋಯ್ಡಾದಿಂದ ಅಂತಹುದೇ ಪ್ರಕರಣವೊಂದು ಬಂದಿದ್ದು, ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ರನ್ ತೆಗೆದುಕೊಳ್ಳುವಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಇತರ ಆಟಗಾರರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ಅಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದರು ಎನ್ನಲಾಗಿದೆ.
ಈ ಘಟನೆಯು ಥಾನಾ ಎಕ್ಸ್‌ಪ್ರೆಸ್‌ವೇ ಪ್ರದೇಶದ ಸೆಕ್ಟರ್ -135 ರಲ್ಲಿ ನಡೆದಿದ್ದು, ಇಲ್ಲಿನ ಕ್ರೀಡಾಂಗಣದಲ್ಲಿ ಶನಿವಾರ ಕೆಲವು ಮಂದಿ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಉತ್ತರಾಖಂಡ ಮೂಲದ 36 ವರ್ಷದ ವಿಕಾಸ್ ನೇಗಿ ಬ್ಯಾಟಿಂಗ್‌ಗೆ ಬಂದಿದ್ದರು. ಆಟದ ವೇಳೆ ವಿಕಾಸ್ ರನ್ ತೆಗೆದುಕೊಳ್ಳಲು ಓದಿದ್ದಾರೆ ಆದರೆ ಇದರ ನಡುವೆ ಹೃದಯಾಘಾತಕ್ಕೆ ಒಳಗಾಗಿ ಪಿಚ್ ನಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಇತರ ಆಟಗಾರರು ವಿಕಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಷ್ಟೊತ್ತಿಗಾಗಲೇ ತಡವಾಗಿತ್ತು. ವಿಕಾಸ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ವಿಕಾಸ್ ರನ್ ತೆಗೆದುಕೊಳ್ಳಲು ಓಡಿ ನಂತರ ಪಿಚ್ ಮೇಲೆ ಬೀಳುವುದು ಕಂಡುಬಂದಿದೆ.
ಇದನ್ನೂ ಓದಿ: Derails: ನಿಲ್ದಾಣ ತಲುಪುತ್ತಿದ್ದಂತೆ ಹಳಿತಪ್ಪಿದ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲು…
Horrible scenes from SOP Cricket Ground in Noida where a middle aged man had a heart attack mid pitch & passed away on the way to hospital. This is getting scarily common especially post Covid. Om Shanti! pic.twitter.com/gQJ4DrzOa0
— Sushant Chaturvedi (@ShawshankOne) January 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್?
Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್ ಪೋಸ್ಟರ್ ವಾರ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್ ಚಾಲಕ!
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.