Badminton: ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Team Udayavani, Jul 11, 2024, 9:44 AM IST
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿ ಗಮನಸೆಳೆದರು.
ರಾಷ್ಟ್ರಪತಿ ಮುರ್ಮು ಮತ್ತು ಸೈನಾ ನಡುವಿನ ಸೌಹಾರ್ದ ಪಂದ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು ಜೊತೆಗೆ ಮೆಚ್ಚುಗೆಯೂ ವ್ಯಕ್ತವಾಗಿದೆ.
ಸೈನಾ ಜೊತೆ ಬ್ಯಾಡ್ಮಿಂಟನ್ ಆಡಿದ ಕುರಿತ ಫೋಟೋಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ x ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಧ್ಯಕ್ಷೆ ದ್ರೌಪದಿ ಮುರ್ಮು ಅವರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವ ಫೋಟೋವನ್ನು ಸೈನಾ ನೆಹ್ವಾಲ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದು ನನ್ನ ಜೀವನದ ಸ್ಮರಣೀಯ ದಿನ, ಈ ದಿನವನ್ನು ನಾನು ಇಂದಿಗೂ ಮರೆಯುವುದಿಲ್ಲ ನನ್ನೊಂದಿಗೆ ಬ್ಯಾಡ್ಮಿಂಟನ್ ಆಡಿದ್ದಕ್ಕಾಗಿ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಸೈನಾ ಸೇರಿದಂತೆ ಪದ್ಮ ಪ್ರಶಸ್ತಿ ವಿಜೇತ ಮಹಿಳೆಯರು ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ‘ಹಿಸ್ ಕಹಾನಿ-ಮೇರಿ ಕಹಾನಿ’ ಕುರಿತು ಉಪನ್ಯಾಸ ನೀಡಲಿದ್ದು ಜೊತೆಗೆ ನೆರೆದಿರುವ ಪ್ರೇಕ್ಷಕರೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆ.
#WATCH | President Droupadi Murmu played badminton with ace shuttler Saina Nehwal at the Badminton Court in Rashtrapati Bhavan, Delhi today.
(Video: Rashtrapati Bhavan) pic.twitter.com/sLmFqQSMtk
— ANI (@ANI) July 10, 2024
President Droupadi Murmu’s natural love for sports and games was seen when she played badminton with the much-celebrated player Ms. Saina Nehwal at the Badminton Court in Rashtrapati Bhavan. The President’s inspiring step is in keeping with India’s emergence as a badminton-power… pic.twitter.com/DGjRudbzSc
— President of India (@rashtrapatibhvn) July 10, 2024
What a memorable day of my life 😍🙏..Thank you so much President Mam for playing badminton with me 🙏 #presidentofindia @rashtrapatibhvn pic.twitter.com/jt9ucXuZrx
— Saina Nehwal (@NSaina) July 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.