Video: ಏಕಾಏಕಿ ಮೈದಾನಕ್ಕೆ ಓಡಿ ಬಂದ ಅಭಿಮಾನಿ… ಬೆಚ್ಚಿ ಬಿದ್ದ ರೋಹಿತ್ ಶರ್ಮ
Team Udayavani, Apr 2, 2024, 10:14 AM IST
ಮುಂಬಯಿ: ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬ ಭದ್ರತಾ ವೈಫಲ್ಯದಿಂದ ಮೈದಾನಕ್ಕೆ ಪ್ರವೇಶಿಸಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿಯ ವಿಡಿಯೋ ವೈರಲ್ ಆಗುತ್ತಿದ್ದ ಬೆನ್ನಲ್ಲೇ ಮುಂಬಯಿಯಲ್ಲಿ ಅಂತದ್ದೇ ಘಟನೆಯೊಂದು ಬೆಳಕಿಗೆ ಬಂದಿದೆ.
ಐಪಿಎಲ್ ನ ಹದಿನಾಲ್ಕನೇ ಪಂದ್ಯಾಟ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿತ್ತು ಈ ವೇಳೆ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದ ವೇಳೆ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಇದ್ದಕಿದ್ದಂತೆ ಮೈದಾನಕ್ಕೆ ನುಗ್ಗಿದ್ದಾನೆ ಇದನ್ನು ಕಂಡ ರೋಹಿತ್ ಶರ್ಮ ಒಮ್ಮೆ ಬೆಚ್ಚಿ ಬಿದ್ದಿದ್ದಾರೆ ಬಳಿಕ ಅಭಿಮಾನಿ ರೋಹಿತ್ ಶರ್ಮ ಅವರನ್ನು ತಬ್ಬಿಕೊಂಡಿದ್ದಾನೆ ಇದಾದ ಬಳಿಕ ಅಲ್ಲೇ ಇದ್ದ ಇಶಾನ್ ಕಿಶನ್ ಅವರನ್ನೂ ತಬ್ಬಿ ಹಿಡಿದು ಸಂಭ್ರಮಪಟ್ಟಿದ್ದಾನೆ.
ಈ ವೇಳೆ ಮೈದಾನಕ್ಕೆ ಬಂದ ಭದ್ರತಾ ಸಿಬಂದಿ ಕೂಡಲೇ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ಓಡಿ ಬಂದು ಕೊಹ್ಲಿಯ ಕಾಲು ಹಿಡಿಯಲು ಹೋಗಿ ಬಳಿಕ ಭದ್ರತಾ ಸಿಬಂದಿ ಆತನನ್ನು ವಶಕ್ಕೆ ಪಡೆದು ಥಳಿಸಿದ್ದರು ಎಂದು ಹೇಳಲಾಗಿತ್ತು ಈ ಘಟನೆಯ ಬೆನ್ನಲ್ಲೇ ಮುಂಬೈ ನಲ್ಲಿ ಮತ್ತೊಂದು ಘಟನೆ ನಡೆದಿರುವುದು ಭದ್ರತಾ ಲೋಪ ಸಾಬೀತುಪಡಿಸಿದಂತಾಗಿದೆ.
ಇದನ್ನೂ ಓದಿ: Gayathri Siddeshwara: ಜಿಲ್ಲೆ ಅಭಿವೃದ್ಧಿಗೆ ಮೋದಿ ಲಕ್ಷೀ ಕಟಾಕ್ಷ : ಗಾಯತ್ರಿ ಸಿದ್ದೇಶ್ವರ
BHAI YEA SAB KYA HORA HAI YAHAN …#ipl #matchinterupp #crazyfan #mivsrr pic.twitter.com/SrAYGVNcBg
— SouL Mayavi (@soul_mayavi) April 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.