ಸಾಮಾನ್ಯ ವ್ಯಕ್ತಿಯೆಂದು ಎನ್‌ಕೌಂಟರ್ ಸ್ಪೆಷಲಿಸ್ಟ್ ಪೊಲೀಸ್ ಮೇಲೆಯೇ ಸರ ಕಳ್ಳರ ದಾಳಿ
ಮುಂದೆ ಆಗಿದ್ದೇನು?
Team Udayavani, Mar 18, 2024, 11:38 AM IST
ದೆಹಲಿ: ವಾಕಿಂಗ್ ಹೊರಟ್ಟಿದ್ದ ಖಾಕಿಯ ಸರವನ್ನು ಕಳ್ಳತನ ಮಾಡಲು ಹೋಗಿ ವ್ಯಕ್ತಿಗಳಿಬ್ಬರು ಪೇಚಿಗೆ ಸಿಲುಕಿರುವ ಘಟನೆ ದೆಹಲಿಯ ಚಾಣಕ್ಯಪುರಿ ನಡೆದಿದೆ.
ಏನಿದು ಘಟನೆ?: ದೆಹಲಿ ಪೊಲೀಸ್ ಸ್ಪೆಷಲ್ ಸೆಲ್‌ನ ಎನ್‌ಕೌಂಟರ್ ಸ್ಪೆಷಲಿಸ್ಟ್ ಆಗಿರುವ ವಿನೋದ್ ಬಡೋಲಾ ಅವರು ನೆಹರೂ ಪಾರ್ಕ್‌ನಲ್ಲಿ ಸಂಜೆ ವಾಕ್ ಮಾಡಲು ಹೊರಟಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಅವರಲ್ಲಿ ಒಬ್ಬರು ಬಡೋಲಾ ಅವರ ಮೂಗಿಗೆ ಗುದ್ದಿದ್ದಾರೆ. ಇದರಿಂದ ಗಾಯಗೊಂಡ ವಿನೋದ್ ಕೆಳಕ್ಕೆ ಬಿದ್ದಿದ್ದಾರೆ. ಮತ್ತೊಬ್ಬ ಕತ್ತಿನಲ್ಲಿದ್ದ ಸರವನ್ನು ಎಳೆದು ಪರಾರಿ ಆಗಿದ್ದಾನೆ. ಆದರೆ ಗಾಯಗೊಂಡಿದ್ದ ವಿನೋದ್ ಪಕ್ಕದಲ್ಲಿ ಪಿಸ್ತೂಲ್ ಹಿಡಿದು ನಿಂತಿದ್ದ ಆರೋಪಿಯನ್ನು ಹಿಡಿದು ವಿನೋದ್ ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಗೌರವ್‌ನನ್ನು ಬಂಧಿಸಿದ್ದಾರೆ. ನಂತರ ಸ್ಥಳೀಯ ಪೊಲೀಸರ ನೆರವಿನೊಂದಿಗೆ ವಿನೋದ್, ಇತರ ಆರೋಪಿ ಪವನ್ ನನ್ನು ಬೆನ್ನಟ್ಟಿ ಬಂಧಿಸಿದ್ದಾರೆ.
ವಿನೋದ್ ಅವರನ್ನು ಪೊಲೀಸ್ ಎಂದು ತಿಳಿಯದ ಆರೋಪಿಗಳು ದಾಳಿ ನಡೆಸಿ ಸರವನ್ನು ಕಸಿದುಕೊಳ್ಳಲು ಹೋಗಿದ್ದಾರೆ.
ಆರೋಪಿಗಳ ಬಂಧನದ ಬಳಿಕ ವಿಚಾರಣೆ ನಡೆಸಿದ್ದು, ಈಗಾಗಲೇ ಆರೋಪಿಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವುದು ಪತ್ತೆಯಾಗಿದೆ.
48 ವರ್ಷ ವಯಸ್ಸಿನ ವಿನೋದ್ ಬಡೋಲಾ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ಉನ್ನತ ಮಟ್ಟದ ಕಾರ್ಯಾಚರಣೆಗಳು ಮತ್ತು ಎನ್‌ಕೌಂಟರ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಕ್ಟೋಬರ್ 2013 ರಲ್ಲಿ ಬಡೋಲಾ ಮತ್ತು ಅವರ ತಂಡವು ನಗರದ ಉದ್ಯಮಿಗಳಲ್ಲಿ ಭಯವನ್ನು ಹುಟ್ಟುಹಾಕಿದ ದರೋಡೆಕೋರ ನಿತು ದಾಬೋಡಿಯಾವನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದರು. ದಕ್ಷಿಣ ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಪಂಚತಾರಾ ಹೋಟೆಲ್ ಬಳಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಅವರು ದಾಬೋಡಿಯಾವನ್ನು ಎನ್ ಕೌಂಟರ್ ಮಾಡಿದ್ದರು.
ವಿನೋದ್ ಬಡೋಲಾ ಅವರು ವಿವಿಧ ಕಾರ್ಯಾಚರಣೆ ಹಾಗೂ ತಮ್ಮ ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.