Telangana: ಲೈವ್ ಕಾರ್ಯಕ್ರಮದಲ್ಲೆ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿದ ಬಿಆರ್‌ಎಸ್ ಶಾಸಕ
Team Udayavani, Oct 26, 2023, 11:21 AM IST
ಹೈದರಾಬಾದ್: ಇದೆ ಬರುವ ನವೆಂಬರ್ 30 ರಂದು ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು ಚುನಾವಣಾ ಕಣಕ್ಕಿಳಿದಿರುವ ತೆಲಂಗಾಣದಲ್ಲಿ ರಾಜಕೀಯ ತಾಪಮಾನ ಗಗನಕ್ಕೇರುತ್ತಿದೆ. ಪ್ರತಿಸ್ಪರ್ಧಿ ಪಕ್ಷಗಳು ಮತದಾರರನ್ನು ಓಲೈಸಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
ತಾಜಾ ಘಟನೆಯೊಂದರಲ್ಲಿ, ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆಪಿ ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬುಧವಾರ ಲೈವ್ ಡಿಬೇಟ್ ಕಾರ್ಯಕ್ರಮದ ವೇಳೆ ಚರ್ಚೆ ನಡೆಯುತ್ತಿರುವ ವೇಳೆ ಬಿಆರ್‌ಎಸ್ ಶಾಸಕ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಮೇಲೆ ಏಕಾಏಕಿ ದಾಳಿಗೆ ಮುಂದಾಗಿದ್ದಾರೆ ಅಲ್ಲದೆ ಬಿಜೆಪಿ ಅಭ್ಯರ್ಥಿಯ ಕುತ್ತಿಗೆಗೆ ಕೈ ಹಾಕಿ ಒತ್ತಿ ಹಿಡಿದ್ದಾರೆ. ಉದ್ವಿಗ್ನತೆ ಹೆಚ್ಚಾದಾಗ ಪೊಲೀಸರು ಮತ್ತು ಇತರರು ಮಧ್ಯಪ್ರವೇಶಿಸಿ ಇಬ್ಬರನ್ನು ಬೇರ್ಪಡಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಡಳಿತಾರೂಢ ಬಿಆರ್‌ಎಸ್ ವಿರುದ್ಧ ಬಿಜೆಪಿ ವಾಗ್ದಾಳಿ:
ಘಟನೆಯ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಆಡಳಿತಾರೂಢ ಬಿಆರ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತಿಪಕ್ಷದ ಅಭ್ಯರ್ಥಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಖಂಡನೀಯ,ಒಂದು ವೇಳೆ ಬಿಆರ್‌ಎಸ್ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ಗತಿ ಏನಾಗುತ್ತದೆ ಎಂದು ಊಹಿಸಿ ಎಂದು ಹೇಳಿದ್ದಾರೆ.
𝗧𝗵𝗲 𝗛𝗮𝗹𝗹𝗺𝗮𝗿𝗸 𝗼𝗳 𝗕𝗥𝗦 – 𝗚𝗼𝗼𝗻𝗱𝗮𝗶𝘀𝗺
BJP MLA candidate from Quthuballapur @KunaSrisailam attacked by BRS sitting MLA.
It’s shocking when a contesting opposition candidate is attacked and scuffled in open public, imagine if BRS returns to power even common… pic.twitter.com/h4kj3m9ydw
— G Kishan Reddy (@kishanreddybjp) October 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.