Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ
Team Udayavani, Sep 17, 2024, 9:06 AM IST
ಗುಜರಾತ್: ಇತ್ತೀಚೆಗಿನ ವರ್ಷದಲ್ಲಿ ಹೃದಯಾಘಾತ ಘಟನೆಗಳು ಹೆಚ್ಚಾಗುತ್ತಿದೆ. ಸಂತಸ, ಸಂಭ್ರಮದ ಸನ್ನಿವೇಶದಲ್ಲೂ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಡುವ ಆಘಾತಕಾರಿ ಘಟನೆಗಳು ಅಲ್ಲಲಿ ನಡೆಯುತ್ತಿದೆ. ಇಂಥದ್ದೇ ಒಂದು ಶಾಕಿಂಗ್ ಘಟನೆ ಗುಜರಾತಿನಲ್ಲಿ ನಡೆದಿದೆ.
ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಂತಸದಲ್ಲಿ ಪಾರ್ಟಿ ಮಾಡುತ್ತಿದ್ದ ತಾಯಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಇತ್ತೀಚೆಗೆ(ಸೆ.14 ರಂದು) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
5 ವರ್ಷದ ಮಗ ಗೌರಿಕ್ ಹುಟ್ಟುಹಬ್ಬವನ್ನು ಪೋಷಕರು ಅದ್ಧೂರಿಯಾಗಿ ಸೆಲೆಬ್ರೆಟ್ ಮಾಡಿದ್ದಾರೆ. ಕುಟುಂಬದ ಸದಸ್ಯರು ಹಾಗೂ ಆತ್ಮೀಯರಿಗೆ ಬರ್ತ್ ಡೇ ಪಾರ್ಟಿಗೆ ಆಹ್ವಾನ ನೀಡಿದ್ದಾರೆ.
ಈ ವೇಳೆ ಗೌರಿಕ್ ಅವರ ತಾಯಿ ಯಾಮಿನಿಬೆನ್ ಪತಿಯೊಂದಿಗೆ ವೇದಿಕೆಯಲ್ಲಿದ್ದರು. ಸಂಭ್ರಮದಲ್ಲಿದ್ದಾಗಲೇ ಯಾಮಿನಿಬೆನ್ ಇದ್ದಕ್ಕಿದ್ದಂತೆ ಮಗುವನ್ನು ಗಂಡನಿಗೆ ಕೊಟ್ಟು ಅವರ ಹಿಂದೆ ಹೆಜ್ಜೆಯಿಡುವಾಗಲೇ ಕುಸಿದು ಬಿದ್ದಿದ್ದಾರೆ.
महिला को पार्टी में आया अचानक से हार्ट अटैक, हुई मौत…#heartattack #CCTV #Valsad #Vapi #viralvideo #tranding #LatestUpdates #MahanagarTimes pic.twitter.com/tno8inMtx1
— Mahanagar Times (@MahanagarTimes_) September 16, 2024
ಕೂಡಲೇ ಯಾಮಿನಿಬೆನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ವೈದ್ಯರು ಪರೀಕ್ಷಿಸಿ, ಯಾಮಿನಿಬೆನ್ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಸಂಭ್ರಮದಲ್ಲಿ ಸಾವು ಆಗಿರುವ ಆಘಾತಕಾರಿ ಘಟನೆ ನೆನೆದು ಕುಟುಂಬಸ್ಥರು ಶಾಕ್ ಆಗಿದ್ದಾರೆ. ಸದ್ಯ ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.