ಹುಟ್ಟುಹಬ್ಬದಂದೇ ಹೃದಯಾಘಾತದಿಂದ ಮಗ ಮೃತ್ಯು: ಮೃತದೇಹದ ಕೈಹಿಡಿದು ಕೇಕ್‌ ಕತ್ತರಿಸಿದ ಪೋಷಕರು!

Team Udayavani, May 22, 2023, 10:36 AM IST

ಹುಟ್ಟುಹಬ್ಬದಂದೇ ಹೃದಯಾಘಾತದಿಂದ ಮಗ ಮೃತ್ಯು: ಮೃತದೇಹದ ಕೈಹಿಡಿದು ಕೇಕ್‌ ಕತ್ತರಿಸಿದ ಪೋಷಕರು!

ಹೈದರಾಬಾದ್: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ಮಂಚೇರಿಯಲ್ ನಲ್ಲಿ ನಡೆದಿದೆ.

ಸಿಎಚ್‌ ಸಚಿನ್‌ (16) ಮೃತ ಬಾಲಕ.

ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸಬೇಕೆಂದಿದ್ದ ಸಚಿನ್‌ ಗಾಗಿ ಆತನ ಸ್ನೇಹಿತರು ಮನೆಯವರು ತಯಾರಿಯನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಆತನ ಸ್ನೇಹಿತರು ಹುಟ್ಟುಹಬ್ಬಕ್ಕಾಗಿ ಪೋಸ್ಟರ್‌, ಫೋಟೋಗನ್ನು ಹಾಕಿದ್ದರು. ತನ್ನ ಹುಟ್ಟುಹಬ್ಬಕ್ಕಾಗಿ ಎಲ್ಲರನ್ನು ಆಹ್ವಾನ ನೀಡಿ ಅದೇ ಖುಷಿಯಲ್ಲಿ ಆಸಿಫಾಬಾದ್ ಪಟ್ಟಣದಲ್ಲಿ ಶಾಪಿಂಗ್‌ ಗೆಂದು ಸಚಿನ್ ತೆರಳಿದ್ದಾರೆ.‌

ಶಾಪಿಂಗ್‌ ಮಾಡುವ ವೇಳೆ ಸಚಿನ್‌ ಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಅಲ್ಲೇ ಆತ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟ ಪರಿಣಾಮ ಆತನನ್ನು ಮಂಚೇರಿಯಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಆತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಗನನ್ನು ಕಳೆದುಕೊಂಡ ಪೋಷಕರು, ಸ್ನೇಹಿತರಿಗೆ ಇದು ದೊಡ್ಡ ಆಘಾತವನ್ನೇ ನೀಡಿದೆ. ಮಗನ ಹುಟ್ಟುಹಬ್ಬಕ್ಕಾಗಿ ತಯಾರಾಗಿದ್ದ ಮನೆಯಲ್ಲಿ ಅದೇ ದಿನ ಆತನ ಮೃತದೇಹವನ್ನು ತಂದು ದುಃಖಿಸುವ ಸ್ಥಿತಿ ನಿರ್ಮಾಣವಾಗಿದೆ.

ಕೇಕ್‌ ಕತ್ತರಿಸಬೇಕಿದ್ದ ಮಗನ ಆಸೆಯನ್ನು ತಂದೆ – ತಾಯಿ ಗ್ರಾಮಸ್ಥರು ನೆರವೇರಿಸಿದ್ದಾರೆ. ಮೃತದೇಹದ ಕೈಗೆ ಕೇಕ್‌ ಕತ್ತರಿಸುವ ಚಾಕುವನ್ನು ಕೊಟ್ಟು, ಅತ್ತ ಆಳುತ್ತಾ, ಇತ್ತ ಚಪ್ಪಾಳೆಯನ್ನೂ ಬಡಿಯುತ್ತ ಮೃತದೇಹದ ಕೈಯನ್ನು ಹಿಡಿದು ಮಗನ ಹುಟ್ಟುಹಬ್ಬವನ್ನು ಮನೆಯವರು ಆಚರಿಸಿದ್ದಾರೆ. ಆ ಮೂಲಕ ಮಗನ ಆ ದಿನದ ಆಸೆಯನ್ನು ನೆರವೇರಿಸಿದ್ದಾರೆ.

ಈ ಕರುಣಾಜನಕ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಯಾವ ಕಾರಣದಿಂದ ಈ ಹೃದಯಾಘಾತ ಸಂಭವಿಸಿದೆ ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

missing

ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.