ಫೇಸ್ಬುಕ್‌ನಲ್ಲಿ ಪರಿಚಯವಾದ ವಿವಾಹಿತೆ: ಮತಾಂತರಗೊಳಿಸಿ ಮದುವೆ ಆದ ಯುವಕ; ಮುಂದೆ ಆದದ್ದು..
Team Udayavani, Jun 12, 2023, 2:56 PM IST
ಲಕ್ನೋ: ಫೇಸ್‌ಬುಕ್ ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯನ್ನು ಓಡಿಸಿಕೊಂಡು ಹೋಗಿ ಮತಾಂತರಗೊಳಿಸಿ ಮದುವೆಯಾದ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಶೈಲೇಶ್ ಕುಮಾರ್ ಕಳೆದ 4 ವರ್ಷದ ಹಿಂದೆ ಲಕ್ಷ್ಮೀ ಎಂಬಾಕೆಯನ್ನು ವಿವಾಹವಾಗಿದ್ದಾರೆ. ಇದೇ ವರ್ಷದ ಮೇ.31 ರ ರಾತ್ರಿ 55 ಸಾವಿರ ನಗದು ಹಾಗೂ ಚಿನ್ನಾಭರಣದೊಂದಿಗೆ ಲಕ್ಷ್ಮೀ ಮನೆ ಬಿಟ್ಟು ಹೋಗಿದ್ದಾರೆ. ಮನೆಯವರು ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಎರಡು ದಿನದ ಬಳಿಕ ಲಕ್ಷ್ಮೀಗೆ ಫೇಸ್ ಬುಕ್ ನಲ್ಲಿ ಪರಿಚಯವಾದ ಜಿಲ್ಲೆಯ ಸಿಸ್ವಾನ್ ಗ್ರಾಮದ ನಿವಾಸಿ ಸಜಾವುಲ್ಲಾ ಅವರೊಂದಿಗೆ ಮುಂಬಯಿಗೆ ಹೋಗಿರುವುದು ಗೊತ್ತಾಗಿದೆ. ಪತ್ನಿ ಲಕ್ಷ್ಮೀಯ ಸಂಬಂಧಿಯೊಬ್ಬರ ಬಳಿ ಶೈಲೇಶ್ ಕುಮಾರ್ ಈ ಬಗ್ಗೆ ಕೇಳಿದಾಗ ಫೇಸ್ ಬುಕ್ ನಲ್ಲಿ ಲಕ್ಷ್ಮೀ ಸಜಾವುಲ್ಲಾಯೊಂದಿಗೆ ಚಾಟ್ ಮಾಡುತ್ತಿದ್ದಳು. ಕೆಲವೊಮ್ಮೆ ಫೋನ್ ನಲ್ಲೂ ಮಾತನಾಡುತ್ತಿದ್ದಳು ಎಂದು ಹೇಳಿದ್ದಾಳೆ.
ಮುಂಬಯಿಗೆ ತೆರಳಿದ ಬಳಿಕ ಲಕ್ಷ್ಮೀಯ ಹೆಸರನ್ನು ʼಮುಸ್ಕಾನ್ʼ ಎಂದು ಮಾಡಿ ಆಕೆಯನ್ನು ಮತಾಂತರ ಮಾಡಲಾಗಿದೆ. ಆ ಬಳಿಕ ಆಕೆಯೊಂದಿಗೆ ಸಜಾವುಲ್ಲಾ ವಿವಾಹವಾಗಿದ್ದಾನೆ. ಲಕ್ಷ್ಮೀಯ ಕುಟುಂಬಸ್ಥರು ಮುಂಬಯಿಗೆ ತೆರಳಿ ಮಾತುಕತೆ ನಡೆಸಿ, ಲಕ್ಷ್ಮೀಯನ್ನು ಮತ್ತೆ ಮನೆಗೆ ಕರೆ ತಂದಿದ್ದಾರೆ.
ಮುಂಬೈಗೆ ಕರೆದೊಯ್ಯುವ ಮೊದಲು ಲಕ್ಷ್ಮಿ ನಾಸಿಕ್‌ನಿಂದ ಕಲ್ಯಾಣ್‌ನಲ್ಲಿ ವಾಸಿಸುವ ತನ್ನ ಚಿಕ್ಕಪ್ಪನನ್ನು ಸಂಪರ್ಕಿಸಿದ್ದಳು. ತನ್ನನ್ನು ಬಲವಂತವಾಗಿ ಮುಂಬೈಗೆ ಕರೆದೊಯ್ದು ಬಿಡಲು ಬಯಸಿರುವುದಾಗಿ ಲಕ್ಷ್ಮಿ ತನ್ನ ಚಿಕ್ಕಪ್ಪನಿಗೆ ತಿಳಿಸಿದ್ದಾಳೆ. ಬಳಿಕ ಆಕೆಯ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ʼಆಜ್ ತಕ್ʼಗೆ ಶೈಲೇಶ್ ಹೇಳಿದ್ದಾರೆ.
ಐಪಿಸಿಯ ಸೆಕ್ಷನ್ 504 ಮತ್ತು 506, ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನಿನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆರೋಪಿ ಸಜಾವುಲ್ಲಾ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಸಿದ್ಧಾರ್ಥನಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.