Viral: ನೆದರ್‌ಲ್ಯಾಂಡ್ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದುವೆಯಾದ ಯುಪಿ ಮೂಲದ ಯುವಕ
Team Udayavani, Dec 2, 2023, 8:57 AM IST
ಲಕ್ನೋ: ಉತ್ತರ ಪ್ರದೇಶ ಮೂಲದ ಯುವಕನೊಬ್ಬ ನೆದರ್ಲ್ಯಾಂಡ್ ಮೂಲದ ಯುವತಿಯನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಉತ್ತರ ಪ್ರದೇಶದ ಫತೇಪುರದ ಹಳ್ಳಿಯೊಂದರಲ್ಲಿ ವಾಸವಾಗಿದ್ದ ಹಾರ್ದಿಕ್ ವರ್ಮಾ(32) ಕೆಲಸದ ನಿಮಿತ್ತ ನೆದರ್‌ಲ್ಯಾಂಡ್‌ಗೆ ತೆರಳಿದ್ದರು. ಅಲ್ಲಿ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಮೇಲ್ವಿಚಾರಕರಾಗಿ ಕೆಲಸವನ್ನು ಪಡೆದುಕೊಂಡಿದ್ದರು. ಈ ವೇಳೆ ಅದೇ ಕಂಪೆನಿಯಲ್ಲಿದ್ದ ನೆದರ್‌ಲ್ಯಾಂಡ್ ಮೂಲದ ಗೇಬ್ರಿಯೆಲಾ ದುಡಾ(21) ಅವರ ಪರಿಚಯವಾಗಿದೆ.
ಪ್ರತಿನಿತ್ಯ ಕೆಲಸ ಮಾಡುತ್ತಾ, ಆತ್ಮೀಯತೆಯಲ್ಲಿ ಇದ್ದ ಇಬ್ಬರಲ್ಲಿ ಪ್ರೀತಿ ಹುಟ್ಟಿದೆ. ಹಾರ್ದಿಕ್ ಅವರು ತನ್ನ ಪ್ರೀತಿಯನ್ನು ಮೊದಲು ಗೇಬ್ರಿಯೆಲಾ ಅವರಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅವರು ಕೂಡ ಹಾರ್ದಿಕ್ ಅವರನ್ನು ಇಷ್ಟಪಟಿದ್ದಾರೆ. ಮೂರು ವರ್ಷ ಸಹಜೀವನವಾಗಿ ಜೊತೆಗಿದ್ದ ಇಬ್ಬರು ಮದುವೆಯಾಗುವ ನಿಟ್ಟಿನಲ್ಲಿ ಕಳೆದ ವಾರ ಭಾರತಕ್ಕೆ ಬಂದಿದ್ದಾರೆ.
ಕುಟುಂಬದವರ ಒಪ್ಪಿಗೆಯ ಮೇರೆ ಬುಧವಾರ(ನ.29) ಹಿಂದೂ ಸಂಪ್ರದಾಯದಂತೆ ಎಲ್ಲಾ ವೈವಾಹಿಕ ವಿಧಿಗಳನ್ನು ಪೂರ್ಣಗೊಳಿಸಿ, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಫತೇಪುರದಲ್ಲಿ ಹಾರ್ದಿಕ್ ಅವರ ಪೂರ್ವಜರ ಮನೆ ಇದೆ. ಅದಕ್ಕಾಗಿ ಅವರು ಅಲ್ಲಿಯೇ ವಿವಾಹವಾಗಿದ್ದಾರೆ ಎಂದು ʼಇಂಡಿಯಾ ಟುಡೇʼಗೆ ಹಾರ್ದಿಕ್ ಹೇಳಿದ್ದಾರೆ.
ಡಿಸೆಂಬರ್ 11 ರಂದು ಗಾಂಧಿನಗರದಲ್ಲಿ ಆರತಕ್ಷತೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಗೇಬ್ರಿಯೆಲಾ ಅವರ ತಂದೆ ಮಾರ್ಸಿನ್ ದುಡಾ, ಅವರ ತಾಯಿ ಬಾರ್ಬರಾ ದುಡಾ ಮತ್ತು ಇತರ ಕುಟುಂಬ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದೆಲ್ಲಾ ಆದ ಬಳಿಕ ಡಿ.25 ನಾವು ನೆದರ್‌ಲ್ಯಾಂಡ್‌ಗೆ ತೆರಳಿದ್ದೇವೆ. ಅಲ್ಲಿ ಚರ್ಚ್ ನಲ್ಲಿ ಕ್ರೈಸ್ತ ಸಂಪ್ರದಾಯದಂತೆ ವಿವಾಹವಾಗಲಿದ್ದೇವೆ ಎಂದು ಹಾರ್ದಿಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.