Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ
Team Udayavani, Jan 12, 2025, 12:26 PM IST
ಉತ್ತರಪ್ರದೇಶ: ಮುಂಬರುವ ಮಹಾಕುಂಭ ಮೇಳವನ್ನು ಹೇಗೆ ನಡೆಸುತ್ತೀರಿ ಎಂಬುದನ್ನು ನಾನು ನೋಡುತ್ತೇನೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದು ಇದಾದ ಕೆಲವೇ ಸಮಯದಲ್ಲಿ ಆತ ಇನ್ನೊಂದು ವಿಡಿಯೋ ಮಾಡಿ ನನ್ನಿಂದ ತಪ್ಪಾಗಿದೆ ನನ್ನನ್ನು ಕ್ಷಮಿಸಿ ಎಂದು ಹೇಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಮೈಜಾನ್ ರಜಾ ಎಂದು ಗುರುತಿಸಲಾಗಿದೆ.
ಪ್ರಯಾಗ್ ರಾಜ್ ನಲ್ಲಿ ನಡೆಯುವ ಕುಂಭಮೇಳಕ್ಕೆ ಈಗಾಗಲೇ ಎಲ್ಲ ಸಿದ್ದತೆಗಳು ಅಂತಿಮ ಹಂತದಲ್ಲಿದೆ ಈ ನಡುವೆ ಯುವಕನೋರ್ವ ಕುಂಭಮೇಳವನ್ನು ಹೇಗೆ ನಡೆಸುತ್ತೀರಿ ಎಂಬುದನ್ನು ನಾನು ನೋಡುತ್ತೆಗೆ ಕುಂಭಮೇಳ ನಡೆದರೆ ತಾನೆ ಎಂದು ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದಾನೆ ಇದಾದ ಬಳಿಕ ಆತನ ವಿರುದ್ಧ ಬರೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಮೈಜಾನ್ ರಾಜಾ ನನ್ನ ಪತ್ತೆ ಹಚ್ಚಿ ಠಾಣೆಗೆ ಕರೆತಂದು ಬೆಂಡೆತ್ತಿದ್ದಾರೆ ಇದಾದ ಬಳಿಕ ಆರೋಪಿ ಸಾಮಾಜಿಕ ಜಾಲತಾಣದಲ್ಲಿ ಇನ್ನೊಂದು ವಿಡಿಯೋ ಹರಿಬಿಟ್ಟಿದ್ದು ತನ್ನಿಂದ ತಪ್ಪಾಗಿದೆ ನನ್ನನ್ನು ಕ್ಷಮಿಸಿ ಎಂದು ಹೇಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
बरेली के मैजान रजा ने फेसबुक पर लिखा कि #महाकुंभ_2025_प्रयागराज नहीं होने देंगे । इस पोस्ट के बाद देखिए कैसे है मैजान रजा के हालात pic.twitter.com/EljHpDkiH6
— Tushar Srivastava (@TusharSrilive) January 11, 2025
ಸದ್ಯ ಆರೋಪಿಯನ್ನು ಬರೇಲಿ ಪೊಲೀಸರು ಬಂಧಿಸಿದ್ದು ಪ್ರಕರಣದಲ್ಲಿ ಈತ ಒಬ್ಬನೇ ಇರುವುದೇ ಅಥವಾ ಈತನ ಜೊತೆ ಬೇರೆ ಯಾರಾದರೂ ಇದ್ದಾರೆಯೇ ಎಂಬುದರ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
Noida: ಜೀವ ತೆಗೆದ ಚೋಲೆ; ಸ್ಟವ್ ಆರಿಸದೆ ಮಲಗಿದ್ದ ಇಬ್ಬರು ಉಸಿರುಕಟ್ಟಿ ಸಾ*ವು
ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ
AAP ಅಬಕಾರಿ ನೀತಿಯಿಂದ ದಿಲ್ಲಿಗೆ 2026 ಕೋಟಿ ನಷ್ಟ: ಸಿಎಜಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.