ವಿಜಯೇಂದ್ರಗೆ ಒಲಿಯುವುದೇ ಮಂಡ್ಯ : ಸಕ್ಕರೆ ನಾಡಿಗೆ ಬಿಎಸ್‌ವೈ ಪುತ್ರ ಪ್ರವೇಶ

ಪಕ್ಷದ ಗೆಲುವಿಗೆ ರಣಕಹಳೆ

Team Udayavani, Feb 23, 2023, 5:55 AM IST

ವಿಜಯೇಂದ್ರಗೆ ಒಲಿಯುವುದೇ ಮಂಡ್ಯ : ಸಕ್ಕರೆ ನಾಡಿಗೆ ಬಿಎಸ್‌ವೈ ಪುತ್ರ ಪ್ರವೇಶ

ಮಂಡ್ಯ: ಇಡೀ ರಾಜ್ಯದಲ್ಲಿ ಹಳೇ ಮೈಸೂರನ್ನು ಗೆಲ್ಲಬೇಕೆನ್ನುವುದು ಬಿಜೆಪಿ ಕನಸು. ಅದರಲ್ಲೂ ಈವರೆಗೂ ಸರಿಯಾಗಿ ಹೆಜ್ಜೆ ಊರಲಾಗದ ಮಂಡ್ಯ ಜಿಲ್ಲೆಯಲ್ಲಿ ಪ್ರಾಬಲ್ಯ ಊರಲು ಬಿಜೆಪಿ ಒಂದಲ್ಲ ಹಲವು ತಂತ್ರಗಳನ್ನು ಹೂಡಿದೆ.

ಹಾಗಾಗಿಯೇ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬುಧವಾರ ಪ್ರವೇಶಿಸಿದ್ದಾರೆ. ಮುಂಬರುವ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಏಳು ಕ್ಷೇತ್ರಗಳಲ್ಲಿ ಕೇಸರಿ ಧ್ವಜ ಹಾರಿಸಲು ರಣಕಹಳೆ ಮೊಳಗಿಸಿದರು. ಇದು ಬಿಜೆಪಿ ಕಾರ್ಯಕರ್ತ ರಲ್ಲಿ ಉತ್ಸಾಹ ಹೆಚ್ಚುವಂತೆ ಮಾಡಿದೆ.

ಈಗಾಗಲೇ ಹಳೇ ಮೈಸೂರು ಭಾಗ ಟಾರ್ಗೆಟ್‌ ಮಾಡಿಕೊಂಡಿರುವ ಬಿಜೆಪಿ ಕೆ.ಆರ್‌.ಪೇಟೆ ಉಪಚುನಾವಣೆಯಂತೆ ಮುಂದಿನ ವಿಧಾನಸಭಾ ಚುನಾವಣೆಯ ಲ್ಲಿಯೂ ವಿಜಯೇಂದ್ರ ಸಾರಥ್ಯದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲ್ಲಿಸಲು ರಣತಂತ್ರ ಹೂಡಲು ಮುಂದಾಗಿದೆ. ಅದರಂತೆ ರಾಜ್ಯದಲ್ಲಿಯೇ ಮೊದಲ ಯುವ ಮೋರ್ಚಾ ಸಮಾವೇಶವನ್ನು ಮಂಡ್ಯದಿಂದಲೇ ಆರಂಭಗೊಳಿಸಲಾಗಿದೆ.

ಮಂಗಳವಾರವೇ ಮಂಡ್ಯಕ್ಕೆ ಆಗಮಿಸಿದ ವಿಜಯೇಂದ್ರ ಅವರಿಗೆ ಭವ್ಯ ಸ್ವಾಗತ ಕೋರುವ ಮೂಲಕ ಬಿಜೆಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನ ಮಾಡಿದರು.

ಮಂಡ್ಯದ ಮೇಲೆ ಪಕ್ಷದ ವರಿಷ್ಠ ಅಮಿತ್‌ ಶಾ ಅವರಿಗೆ ವಿಶೇಷ ಕಣ್ಣು, ಅದಕ್ಕಾಗಿಯೇ ಅವರು ಕಳೆದ ಬಾರಿ ಮಂಡ್ಯದಲ್ಲೇ ಸಮಾವೇಶ ಮಾಡುವ ಮೂಲಕ ಪ್ರಚಾರಕ್ಕೆ ನಾಂದಿ ಹಾಡಿದರು. ಅಷ್ಟೇ ಅಲ್ಲ, ದಿಲ್ಲಿಗೆ ಹೋದ ಮೇಲೂ ಎಎನ್‌ಐಗೆ ನೀಡಿದ ಸಂದರ್ಶನವೊಂದರಲ್ಲಿ ಮಂಡ್ಯವನ್ನು ವಿಶೇಷ ವಾಗಿ ಪ್ರಸ್ತಾವಿಸಿ ಜೆಡಿಎಸ್‌ನ್ನು ಕುಟುಕಿದ್ದರು.

ಮಂಡ್ಯದ ಮೇಲೆ ಇಷ್ಟೊಂದು ಕಣ್ಣಿಟ್ಟಿರುವುದರಿಂದಲೇ ಕಂದಾಯ ಸಚಿವ ಆರ್‌. ಅಶೋಕ್‌ ಅವರನ್ನು ಉಸ್ತುವಾರಿ ಯಾಗಿ ನಿಯೋಜಿಸಲಾಗಿತ್ತು. ಆದರೆ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ್ದರಿಂದ ಆ ಪ್ರಯೋಗ ಫ‌ಲ ಕೂಡಲಿಲ್ಲ. ಈಗ ವಿಜಯೇಂದ್ರ ಅವರನ್ನು ಕಣಕ್ಕಿಳಿಸಿದ್ದಾರೆ ಬಿಜೆಪಿ ಹೈಕಮಾಂಡ್‌.

ಕೆ.ಆರ್‌.ಪೇಟೆಯಂತೆ ಜಿಲ್ಲೆ ಗೆಲ್ಲಲು ರಣತಂತ್ರ: 2020ರ ಕೆ.ಆರ್‌.ಪೇಟೆ ಉಪ ಚುನಾವಣೆಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ವಿಜಯೇಂದ್ರ ಅವರ ಮಾಸ್ಟರ್‌ ಪ್ಲ್ಯಾನ್‌ ಅನ್ನೇ ಜಿಲ್ಲೆಗೆ ವಿಸ್ತರಿಸಲು ಸಜಾjಗಿದ್ದಾರೆನ್ನಲಾಗಿದೆ. ಅದರಂತೆ ಮಂಗಳವಾರ ಮಂಡ್ಯಕ್ಕೆ ಆಗಮಿಸಿದ ಸಂದ ರ್ಭ ದಲ್ಲಿಯೂ ಮಂಡ್ಯ ಚುನಾವಣೆ ಉಸ್ತುವಾರಿ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ ಎಂದು ವಿಜಯೇಂದ್ರ ಹೇಳಿದ್ದರು.

ಹೈಕಮಾಂಡ್‌ ಸೂಚಿಸಿದರೆ ಮಂಡ್ಯದಲ್ಲೂ ಸ್ಪರ್ಧೆ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆಯೂ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವಿಜಯೇಂದ್ರ ಮಂಡ್ಯದಲ್ಲಿ ಮನೆ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಬುಧವಾರ ನೀಡಿರುವ ಹೇಳಿಕೆ ಸಾಕ್ಷೀಕರಿಸುವಂತಿದೆ. ನನಗೆ ಮಂಡ್ಯ, ವರುಣಾ, ಶಿಕಾರಿಪುರ ಕ್ಷೇತ್ರ ಅಂತಾ ಏನೂ ಇಲ್ಲ. ಹೈಕಮಾಂಡ್‌ ಸೂಚಿಸಿದರೆ ಎಲ್ಲಿ ಬೇಕಾದರೂ ಸ್ಪರ್ಧೆ ಮಾಡುವೆ. ಮಂಡ್ಯದಲ್ಲಿ ಮನೆ ಮಾಡುವುದು ಮುಖ್ಯವಲ್ಲ. ಜಿಲ್ಲೆಯ ಜನರ ಮನಸ್ಸಿನಲ್ಲಿ ಮನೆ ಮಾಡಿದರೆ ಅಷ್ಟೇ ಸಾಕು ಎಂದು ಹೇಳಿದ್ದಾರೆ.

-ಎಚ್‌.ಶಿವರಾಜು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.