ಬಡತನ,ಅಸಹಾಯಕತೆ.. ಪಿಂಚಣಿ ಹಣ ಪಡೆಯಲು ಖುರ್ಚಿ ಹಿಡಿದುಕೊಂಡು ಕಿ.ಮೀಗಟ್ಟಲೇ ನಡೆದ ವೃದ್ಧೆ
Team Udayavani, Apr 21, 2023, 9:59 AM IST
ಭುವನೇಶ್ವರ: ಪಿಂಚಣಿ ಹಣವನ್ನು ಪಡೆಯಲು ವೃದ್ಧೆಯೊಬ್ಬರು ಕಿ.ಮೀ ಗಟ್ಟಲೆ ನಡೆದುಕೊಂಡೇ ಹೋಗಿರುವ ಮನಕಲುಕುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಒಡಿಶಾದ ನಬ್ರಂಗ್‌ಪುರ ಜಿಲ್ಲೆಯ ಜರಿಗಾಂವ್ ಬ್ಲಾಕ್‌ನ 70 ವರ್ಷದ ಸೂರ್ಯ ಹರಿಜನ ಎಂಬ ವೃದ್ಧೆಗೆ ತಿಂಗಳಿಗೆ ಬರುವ ಪಿಂಚಣಿ ಹಣ ಬಡತನದ ಬದುಕು ಸಾಗಿಸಲು ಅನಿವಾರ್ಯ. ಇವರ ಹಿರಿಯ ಮಗ ಬೇರೆ ಬೇರೆ ರಾಜ್ಯದಲ್ಲಿ ವಲಸೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದು, ವೃದ್ಧೆ ಕಿರಿಯ ಮಗನೊಂದಿಗೆ ವಾಸಿಸುತ್ತಿದ್ದಾರೆ. ಕಿರಿಯ ಮಗ ದನಗಳನ್ನು ಮೇಯಿಸುತ್ತಾ ಜೀವನ ಸಾಗಿಸುತ್ತಾನೆ. ಗುಡಿಸಲಿನಲ್ಲೇ ವಾಸಿಸುವ ವೃದ್ಧೆಗೆ ತಿಂಗಳ ಪಿಂಚಣಿ ಹಣ ಮೂರು ಹೊತ್ತಿನ ಊಟಕ್ಕೆ ಅನಿವಾರ್ಯ.
70 ವರ್ಷವಾದರೂ ಅವರು ಪಿಂಚಣಿ ಹಣಕ್ಕಾಗಿ ಬ್ಯಾಂಕ್ ಇರುವ ಸ್ಥಳಕ್ಕೆ ನಡೆದುಕೊಂಡು ಹೋಗುತ್ತಾರೆ. ವಯಸ್ಸಾದ ಕಾರಣ ಬಾಗಿದ ಬೆನ್ನು, ಬರೀ ಕಾಲಿನಲ್ಲಿ ಖುರ್ಚಿಯೊಂದರ ಸಹಾಯ ಪಡೆದು ಮೆಲ್ಲನೆ ಕುಂಟುತ್ತಾ ಬ್ಯಾಂಕಿಗೆ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.
ಅಷ್ಟು ಕಷ್ಟಪಟ್ಟು ಹೋದ ವೃದ್ಧೆಗೆ ಆಕೆಯ ಹೆಬ್ಬೆರಳು ದಾಖಲೆಗಳಿಗೆ ಹೊಂದಿಕೆ ಆಗಿಲ್ಲ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬ್ಯಾಂಕ್ ಮ್ಯಾನೇಜರ್, ವೃದ್ದೆಯ ಬೆರಳು ಮುರಿದಿದೆ. ಇದರಿಂದ ಅವರು ಥಂಬ್ ನೀಡಲು ಆಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
“ಅವರ ಬೆರಳುಗಳು ಮುರಿದುಹೋಗಿವೆ. ಆದ್ದರಿಂದ ಅವರು ಹಣವನ್ನು ಪಡೆಯಲು ಆಗುತ್ತಿಲ್ಲ. ಸದ್ಯ ಅವರಿಗೆ ಬ್ಯಾಂಕ್ ನಿಂದಲೇ ಕ್ಯಾಶ್ ರೂಪದಲ್ಲಿ 3,000 ರೂ.ವನ್ನು ನೀಡಲಾಗಿದೆ. ನಾವು ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುತ್ತೇವೆ” ಎಂದು ಜರಿಗಾಂವ್ ಶಾಖೆಯ ಎಸ್‌ಬಿಐ ವ್ಯವಸ್ಥಾಪಕರು ತಿಳಿಸಿದ್ದಾರೆ.
ಗ್ರಾಮದ ಸರಪಂಚ್ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂಥ ಅಸಹಾಯಕ ವ್ಯಕ್ತಿಗಳ ಸಮಸ್ಯೆಯನ್ನು ಆಲಿಸಿ ನಾವು ಪಿಂಚಣಿ ಹಣವನ್ನು ತಲುಪಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.
#WATCH | A senior citizen, Surya Harijan walks many kilometers barefoot with the support of a broken chair to reach a bank to collect her pension in Odisha’s Jharigaon
SBI manager Jharigaon branch says, “Her fingers are broken, so she is facing trouble withdrawing money. We’ll… pic.twitter.com/Hf9exSd0F0
— ANI (@ANI) April 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.