Watch: ಭೂಕುಸಿತದ ವೇಳೆ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಇಬ್ಬರು ಮೃತ್ಯು
Team Udayavani, Jul 5, 2023, 9:51 AM IST
ಕೊಹಿಮಾ (ನಾಗಾಲ್ಯಾಂಡ್) : ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಬೃಹತ್ ಬಂಡೆಯೊಂದು ಕಾರಿನ ಮೇಲೆ ಉರುಳಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ನಾಗಾಲ್ಯಾಂಡ್ ನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ(ಜು.4 ರಂದು) ನಡೆದಿದೆ.
ಕಳೆದ ಕೆಲ ದಿನಗಳಿಂದ ಈಶಾನ್ಯ ಭಾರತದಲ್ಲಿ ಭಾರೀ ಮಳೆ ಸುರಿಯುತ್ತಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಕೆಲ ಸಮಯ ವಾಹನಗಳು ಚುಮೌಕೆಡಿಮಾದ ಪೊಲೀಸ್ ಚೆಕ್‌ಪೋಸ್ಟ್ ಬಳಿ ನಿಂತಿದೆ. ಈ ವೇಳೆ ಏಕಾಏಕಿ ಬೃಹತ್ ಬಂಡೆಯೊಂದು ಕಾರಿನ ಮೇಲೆಯ ಉರುಳಿ ಬಿದ್ದಿದೆ. ಪರಿಣಾಮ ಮೂರು ಕಾರುಗಳು ಪಲ್ಟಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದಾರೆ. ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಕಾರಿನ ಮೇಲೆ ಬಂಡೆ ಉರುಳಿ ಬಿದ್ದ ಭೀಕರ ಅಪಘಾತದ ದೃಶ್ಯ ಅಲ್ಲೇ ನಿಂತಿದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.