Video: ಹೊಸ ಅನುಭವ: ಸೋರುತ್ತಿರುವ ವಿಮಾನದಲ್ಲೇ ಪ್ರಯಾಣಿಕರ ಪಯಣ…
Team Udayavani, Nov 30, 2023, 4:37 PM IST
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಇಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿರುವ ವಿಮಾನದೊಳಗೆ ಮಳೆ ಬರುವ ರೀತಿಯಲ್ಲಿ ನೀರು ಜಿನುಗುತ್ತಿರುವುದು ಕಾಣಬಹುದು.
ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಎಕ್ಸ್’ ನಲ್ಲಿ ಹಂಚಿಕೊಳ್ಳಲಾಗಿದೆ ಅಂದಹಾಗೆ ಇದು ಏರ್ ಇಂಡಿಯಾ ವಿಮಾನದ ವೀಡಿಯೊ ಎಂದು ಕೂಡ ಹೇಳಲಾಗಿದೆ. ಆದರೆ, ಈ ಬಗ್ಗೆ ಏರ್ ಇಂಡಿಯಾ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಮತ್ತೊಂದೆಡೆ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವೀಡಿಯೊ ಕುರಿತು ಬಳಕೆದಾರರು ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ಕೂಡ ನೀಡುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವಿಮಾನದ ಮೇಲ್ಛಾವಣಿಯಿಂದ ನೀರು ಸೋರುತ್ತಿರುವುದು ಕಂಡು ಬಂದಿದೆ. baldwhiner ಎಂಬ ಬಳಕೆದಾರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ನೀರು ಜಿನುಗುತ್ತಿರುವಾಗ ಪ್ರಯಾಣಿಕರು ಪಕ್ಕದ ಆಸನಗಳ ಮೇಲೆ ಕುಳಿತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಬಗ್ಗೆ ಬಳಕೆದಾರರು ವಿವಿಧ ರೀತಿಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಇದು ವಿಮಾನದೊಳಗಿನ ತಾಂತ್ರಿಕ ವಿಷಯವಾಗಿದೆ, ವಿಮಾನದಲ್ಲಿ ಇಂತಹ ಘಟನೆಗಳು ಸಂಭವಿಸುತ್ತಿರುತ್ತವೆ ಎಂದು ಒಬ್ಬರು ಹೇಳಿದ್ದರೆ. ಇನ್ನೊಬ್ಬ ಬಳಕೆದಾರರು ವಿಮಾನಯಾನ ಸಂಸ್ಥೆಯ ಹೆಸರು ಹಾಳು ಮಾಡಲು ಈ ತರಹದ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ʼHi Nannaʼ ಪ್ರೀ ರಿಲೀಸ್ ಇವೆಂಟ್‌ನಲ್ಲಿ ಕಾಣಿಸಿಕೊಂಡ ರಶ್ಮಿಕಾ-ದೇವರಕೊಂಡ ಮಾಲ್ಡೀವ್ಸ್ ಫೋಟೋ
Air India ….
fly with us – it’s not a trip …
it’s an immersive experience pic.twitter.com/cEVEoX0mmQ— JΛYΣƧΉ (@baldwhiner) November 29, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!
Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು
Tragedy: ದೇವಸ್ಥಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು, CCTVಯಲ್ಲಿ ಸೆರೆಯಾಯ್ತು ದೃಶ್ಯ
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.