Viral Video: ಹಿಂದೂ ದೇವಾಲಯದೊಳಗೆ ಮೂತ್ರ ವಿಸರ್ಜಿಸಿದ ಮುಸ್ಲಿಂ ವ್ಯಕ್ತಿ: ಭಾರೀ ಆಕ್ರೋಶ
Team Udayavani, Nov 4, 2023, 1:01 PM IST
ಪಶ್ಚಿಮ ಬಂಗಾಳ: ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ದೇವಾಲಯದೊಳಗೆ ಮೂತ್ರ ಮೂತ್ರ ವಿಸರ್ಜಿಸಿರುವ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ದೇವಾಲಯಕ್ಕೆ ನುಗ್ಗಿ ಶಿವಲಿಂಗದ ಬಳಿ ಮೂತ್ರ ವಿಸರ್ಜನೆ ಮಾಡಿದ್ದಾನೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಸಲಾರ್ ಬ್ಲಾಕ್ ವ್ಯಾಪ್ತಿಯ ಕಂದರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಕೃತ್ಯವೆಸಗಿದ ವ್ಯಕ್ತಿಯನ್ನು ಅರಾ ಶೇಖ್ ಎಂದು ಗುರುತಿಸಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಆರೋಪಿ ಅರಾ ಶೇಕ್ ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಇದೇ ಸಿಟ್ಟಿನಲ್ಲಿ ಆತ ದೇವಾಲಯದ ಒಳಗೆ ಪ್ರವೇಶ ಮಾಡಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಆತನನ್ನು ತಡೆಯುವ ಪ್ರಯತ್ನ ಮಾಡಿದ್ದರೂ ಆತ ಮಾತು ಕೇಳದೆ ಈ ಕೃತ್ಯವನ್ನುವೆಸಗಿದ್ದಾನೆ.
ಇದನ್ನೂ ಓದಿ:Gujarat: ಎಕ್ಸಾಂ ಹಾಲ್‌ನಲ್ಲಿ ಹೃದಯ ಸ್ತಂಭನ; ಕುಸಿದು ಬಿದ್ದು 15ರ ವಿದ್ಯಾರ್ಥಿನಿ ಮೃತ್ಯು
ಈ ಘಟನೆ ಯಾವಾಗ ನಡೆದಿದೆ ಎನ್ನುವುದರ ಬಗ್ಗೆ ಖಚಿತವಾದ ಮಾಹಿತಿಗಳಿಲ್ಲ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಇನ್ನೂ ದೃಢಪಟ್ಟಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
#WestBengal
A Muslim youth named Ara Sheikh(S/O- Ratan Sheikh) entered a Hindu temple, urinate at Kandar village, Under Salar Block of #Murshidabad district. The video is already viral in Facebook. Several posts claim that the Muslim youth is arrested. pic.twitter.com/Nj9oUgar5A— Hindu Voice (@HinduVoice_in) November 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.