Priyanka Gandhi ಗೆ ಕೊಟ್ಟ ಬೊಕ್ಕೆಯಲ್ಲಿ ಹೂವೇ ಇರಲಿಲ್ಲ… ಮುಜುಗರಕ್ಕೆ ಒಳಗಾದ ನಾಯಕ
ಪುಷ್ಪಗುಚ್ಛ ಹಗರಣ ಎಂದು ವ್ಯಂಗ್ಯವಾಡಿದ ಬಿಜೆಪಿ
Team Udayavani, Nov 7, 2023, 12:54 PM IST
ಮಧ್ಯಪ್ರದೇಶ: ಮುಂಬರುವ ಪಂಚ ರಾಜ್ಯ ಚುನಾವಣೆಗೆ ಕಾಂಗ್ರೆಸ್ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ, ಇದರ ನಡುವೆ ಎರಡೂ ಪಕ್ಷಗಳು ಬಿಡುವಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದೆ ಅದರಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಧ್ಯಪ್ರದೇಶದ ಇಂದೋರ್ನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಂದರ್ಭ ಅಲ್ಲಿನ ಕಾಂಗ್ರೆಸ್ ನಾಯಕರು ಅವರನ್ನು ಅಭಿನಂದಿಸುವ ವೇಳೆ ಓರ್ವ ನಾಯಕ ಹೂವೇ ಇಲ್ಲದ ಬೊಕ್ಕೆಯೊಂದನ್ನು ವೇದಿಕೆ ಮೇಲೆ ನೀಡಿದ ಪ್ರಸಂಗ ನಡೆದಿದೆ.
ನವೆಂಬರ್ 17 ರಂದು ಚುನಾವಣೆ ನಡೆಯಲಿರುವ ಇಂದೋರ್ನಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದು ಈ ನಡುವೆ ಮಧ್ಯಪ್ರದೇಶದ ಇಂದೋರ್ನಲ್ಲಿ ಚುನಾವಣಾ ಜಾಥಾದಲ್ಲಿ ಪಾಲ್ಗೊಂಡಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ವೇದಿಕೆ ಮೇಲೆ ಬರಮಾಡಿಕೊಳ್ಳುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಪ್ರಿಯಾಂಕಾ ಗಾಂಧಿಗೆ ಹೂವಿಲ್ಲ ಖಾಲಿ ಬೊಕ್ಕೆಯನ್ನು ಕೊಟ್ಟು ಸ್ವಾಗತಿಸಿದ್ದಾರೆ, ಬೊಕ್ಕೆ ನೋಡಿದ ಪ್ರಿಯಾಂಕಾ ಇದೇನಿದು ಇದರಲ್ಲಿ ಹೂವೇ ಇಲ್ಲ ಎಂದು ಹೇಳಿದ್ದಾರೆ. ಆಗ ವೇದಿಕೆ ಮೇಲಿದ್ದ ನಾಯಕರು ಮುಜುಗರಕ್ಕೆ ಒಳಗಾದ ಪ್ರಸಂಗ ನಡೆಯಿತು.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈ ನಡುವೆ ಬಿಜೆಪಿ ನಾಯಕ ರಾಕೇಶ್ ತ್ರಿಪಾಠಿ ಟ್ವಿಟರ್ ‘ಎಕ್ಸ್’ ನಲ್ಲಿ ವಿಡಿಯೋ ಹಂಚಿಕೊಂಡಿದ್ದು ಇದು ಕಾಂಗ್ರೆಸ್ ನವರ “ಪುಷ್ಪಗುಚ್ಛ ಹಗರಣ” ಎಂದು ಗೇಲಿ ಮಾಡಿದ್ದಾರೆ.
गुलदस्ता घोटाला 😜
गुलदस्ते से गुल गायब हो गया.. दस्ता पकड़ा दिया 😂😂
मध्यप्रदेश के इंदौर में प्रियंका वाड्रा की रैली में एक कांग्रेसी गुलदस्ता देने पहुंचा लेकिन कांग्रेसी खेल हो गया।#MPElections2023 pic.twitter.com/y7Qmyldp94— राकेश त्रिपाठी Rakesh Tripathi (@rakeshbjpup) November 6, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.