Atal ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ… Cab ಚಾಲಕನಿಂದ ಉಳಿಯಿತು ಜೀವ
Team Udayavani, Aug 17, 2024, 11:13 AM IST
ಮುಂಬೈ: ಅಟಲ್ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆಯನ್ನು ಕ್ಯಾಬ್ ಚಾಲಕ ಮತ್ತು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಸಮಯಪಜ್ಞೆಯಿಂದ ರಕ್ಷಿಸಿದ ಘಟನೆ ಶುಕ್ರವಾರ (ಆಗಸ್ಟ್ 16) ರಂದು ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್ (56 ವರ್ಷ) ಎಂದು ಗುರುತಿಸಲಾಗಿದ್ದು, ಈಕೆ ಮುಂಬೈನ ಈಶಾನ್ಯ ಭಾಗದಲ್ಲಿರುವ ಮುಲುಂಡ್‌ನ ಉಪನಗರ ನಿವಾಸಿಯಾಗಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಸಂಜೆ ಬಾಡಿಗೆ ಕಾರು ಗೊತ್ತುಪಡಿಸಿ ಅಟಲ್ ಸೇತುವೆ ಮಧ್ಯೆ ಕಾರು ನಿಲ್ಲಿಸಿ ಸೇತುವೆಯ ತಡೆಗೋಡೆ ಹತ್ತಿದ ಮಹಿಳೆ ಹಾರಲು ಯತ್ನಿಸಿದ್ದಾರೆ ಈ ವೇಳೆ ಸಮಯಪ್ರಜ್ಞೆ ಮೆರೆದ ಕಾರು ಚಾಲಕ ಮಹಿಳೆಯ ಕೂದಲು ಹಿಡಿದು ರಕ್ಷಣೆಗೆ ಮುಂದಾಗಿದ್ದಾರೆ ಅದೇ ಸಮಯಕ್ಕೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಂಚಾರಿ ಪೊಲೀಸರು ಕೂಡಲೇ ಮಹಿಳೆಯ ರಕ್ಷಣೆಗೆ ಕೈಜೋಡಿಸಿದ್ದಾರೆ, ಕೆಲ ಹೊತ್ತು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಮೇಲಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ.
ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಕಾರು ಚಾಲಕನ ಸಮಯಪ್ರಜ್ಞೆಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರಸೆ ಬದಲಿಸಿದ ಮಹಿಳೆ:
ಇತ್ತ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಣೆ ಮಾಡಿದ ಬೆನ್ನಲ್ಲೇ ಮಹಿಳೆ ತಾನು ತನ್ನ ಮನೆಯಲ್ಲಿದ್ದ ಹಳೆಯ ದೇವರ ಫೋಟೋಗಳನ್ನು ನೀರಿಗೆ ಬಿಡಲು ಇಲ್ಲಿಗೆ ಬಂದಿದ್ದು ಹಾಗಾಗಿ ಸೇತುವೆಯ ದಂಡೆಯ ಮೇಲೆ ಕುಳಿತು ದೇವರ ಪ್ರಾರ್ಥನೆ ಮಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದೆ ಎಂದು ಹೇಳಿಕೊಂಡಿದ್ದಾರೆ.
ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಕಮಿಷನರ್ ಮೆಚ್ಚುಗೆ:
ಅಟಲ್ ಸೇತುನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ತಕ್ಷಣ ಸ್ಪಂದಿಸಿದ ಕರ್ತವ್ಯ ನಿರತ ಅಧಿಕಾರಿಗಳಾದ ಲಲಿತ್ ಶಿರಸತ್, ಕಿರಣ್ ಮಹ್ತ್ರೆ, ಯಶ್ ಸೋನಾವಾನೆ ಮತ್ತು ಮಯೂರ್ ಪಾಟೀಲ್ ಅವರ ಕಾರ್ಯ ಶ್ಲಾಘನೀಯ ಎಂದು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ‘X’ ನಲ್ಲಿನ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Vinesh Phogat: ಹೋರಾಟ ಮುಂದುವರಿಯುತ್ತದೆ..; ಕುತೂಹಲ ಮೂಡಿಸಿದ ಪೋಗಾಟ್ ಪತ್ರ
Viewers Discretion Advised
Responding promptly to an attempt to die by suicide at MTHL Atal Setu, the on-duty officials, PN Lalit Shirsat, PN Kiran Mahtre, PC Yash Sonawane & PC Mayur Patil of @Navimumpolice jumped over the railing & rescued the individual saving her life.
— पोलीस आयुक्त, बृहन्मुंबई – CP Mumbai Police (@CPMumbaiPolice) August 16, 2024
अटल सेतूवर थरारक घटना, महिलेने केला आत्महत्येचा प्रयत्न; वाहतूक पोलिसांच्या प्रसंगावधान आणि समयसुचकतेला सलाम- वाचा नेमके काय घडले#atalsetubridge https://t.co/IPSdOz3Fb7 pic.twitter.com/ehZdSIOBLr
— Maharashtra Times (@mataonline) August 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.