ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Team Udayavani, May 21, 2024, 1:12 PM IST
ನವದೆಹಲಿ: ಕಾರು ಅಪಘಾತಗೊಂಡು ತೀವ್ರ ಸ್ವರೂಪದ ಗಾಯಗಳಾಗಿದ್ದರೂ ಜೊತೆಯಾಗಿ ಕೂತು ಸೆಲ್ಫಿಗೆ ಪೋಸ್ ಕೊಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.
ಶನಿವಾರ(ಮೇ.18 ರಂದು)ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ ರಸ್ತೆಯಲ್ಲಿ ಐವರು ಯುವತಿಯರು ಕಾರಿನಲ್ಲಿ ಹೋಗುತ್ತಿರಬೇಕಾದರೆ ಲೋಮಾಸ್ ಡೆಲ್ ಮಿರಾಡೋರ್ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇಬ್ಬರು ಯುವತಿಯರು ಕಾರಿನಿಂದ ಹೊರಬಿದ್ದು ತೀವ್ರತರದ ಗಾಯಗಳಾಗಿದೆ. ಪಾದಚಾರಿ ಮಾರ್ಗದಲ್ಲಿ ಇಬ್ಬರು ಯುವತಿಯರು ಬಿದ್ದಿದ್ದು, ಇತರೆ ಮೂವರು ಕಾರಿನಲ್ಲಿ ಸಿಲುಕಿಕೊಂಡಿದ್ದಾರೆ.
ಆದರೆ ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವತಿಯರು ಗಾಯಗೊಂಡಿದ್ದರೂ ಅಪಘಾತವಾದ ಕಾರಿನ ಮುಂದೆ ಕುಳಿತು ಸೆಲ್ಫಿಗಾಗಿ ಪೋಸ್ ನೀಡಿದ್ದಾರೆ. ಆಂಬ್ಯುಲೆನ್ಸ್ ಬರುವವರೆಗೆ ಇಬ್ಬರು ಸೆಲ್ಫಿಗೆ ಪೋಸ್ ನೀಡಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ತಿಳಿಸಿದೆ.
ಕಾರಿನಲ್ಲಿದ್ದವರು ಮದ್ಯದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ. ಸೆಲ್ಫಿಗೆ ಪೋಸ್ ಕೊಡುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಗಾಯಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಮೆಕ್ಸಿಕನ್ ಅಧಿಕಾರಿಗಳು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಇತ್ತ ಇಂಟರ್ ನೆಟ್ ನಲ್ಲಿ ಸೆಲ್ಫಿಗೆ ಪೋಸ್ ಕೊಟ್ಟಿರುವ ಫೋಟೋ ವೈರಲ್ ಆಗಿದ್ದು, ಅನೇಕರು ಇಬ್ಬರು ಯುವತಿಯರ ವರ್ತನೆ ಕಂಡು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.