ಸವದತ್ತಿಯ ಸುಂದರ ಐತಿಹಾಸಿಕ ಕೋಟೆ
Team Udayavani, May 3, 2021, 8:45 AM IST
ಸವದತ್ತಿ ಬೆಳಗಾವಿ ಜಿಲ್ಲೆಯ ಒಂದು ತಾಲೂಕು. ಇದೊಂದು ಪುಟ್ಟ ತಾಲೂಕಾದರೂ ಅನೇಕ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಒಳಗೊಂಡಿದೆ. ಮೊದಲು ಇದನ್ನು ಸೌಗಂಧಿಪುರ, ಸೌಗಂಧವತಿ, ಸುಗಂಧವರ್ತಿ ಎಂತಲೂ ಕರೆಯುತ್ತಿದ್ದರು. ಚಾಲುಕ್ಯರ ಕಾಲದಲ್ಲಿ ಈ ನಗರವು ಹೆಚ್ಚು ಶ್ರೀಮಂತ ಸ್ಥಿತಿಯಲ್ಲಿತ್ತು ಎನ್ನಲಾಗುತ್ತದೆ.
ರಟ್ಟರ ಆಳ್ವಿಕೆಯ ಅವಧಿಯಲ್ಲಿ ಇದು ಅವರ ರಾಜಧಾನಿಯಾಗಿತ್ತು. ಇಲ್ಲಿರುವ ರೇಣುಕಾ ಎಲ್ಲಮ್ಮ ದೇವಿಯ ದೇಗುಲ, ರೇಣುಕಾ ಜಲಾಶಯ ಹಾಗೂ ಸವದತ್ತಿ ಕೋಟೆಯು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸುತ್ತವೆ. ಧಾರವಾಡದಿಂದ 35 ಕಿ.ಮೀ. ಹಾಗೂ ಬೆಂಗಳೂರಿನಿಂದ 469 ಕಿ.ಮೀ. ದೂರದಲ್ಲಿದೆ. ರಸ್ತೆ ಮಾರ್ಗವು ಉತ್ತಮ ಸ್ಥಿತಿಯಲ್ಲಿರುವುದರಿಂದ ದಣಿವಿಲ್ಲದೆಯೇ ಇಲ್ಲಿಗೆ ಬರಬಹುದು.
18ನೇ ಶತಮಾನದ ಇತಿಹಾಸವನ್ನು ಹೊಂದಿರುವ ಈ ಕೋಟೆ ಒಂದು ಪುಟ್ಟ ಬೆಟ್ಟದ ಮೇಲಿದೆ. ಅಲ್ಲಿಯೇ ಒಂದು ಕಾಡಸಿದ್ಧೇಶ್ವರ ದೇಗುಲ ಇರುವುದನ್ನು ಕಾಣಬಹುದು. ಈ ಕೋಟೆಯು ದಟ್ಟ ಅರಣ್ಯ ಸಂಪತ್ತಿನಿಂದ ಸುತ್ತುವರಿದಿದೆ. ಬೆಳಗಾವಿ ಜಿಲ್ಲೆಯಿಂದ 83 ಕಿ.ಮೀ. ದೂರದಲ್ಲಿದೆ.
ಕರ್ನಾಟಕವನ್ನು ಆಳಿದ ರಾಜಮನೆತನದವರಲ್ಲಿ ರಟ್ಟರು ಒಬ್ಬರು. ಮೊದಲು ಮಾಂಡಲೀಕರಾಗಿ, ನಂತರ ಆಳುವ ಅರಸರಾಗಿ, 9 ರಿಂದ 13 ಶತಮಾನಗಳ ಕಾಲ ರಾಜ್ಯವಾಳಿದರು. ಆ ಕಾಲದಲ್ಲಿ ನಿರ್ಮಿಸಲಾದ ಕೋಟೆ, ಇಂದು ಪ್ರವಾಸ ತಾಣದಲ್ಲಿ ಒಂದಾಗಿದೆ.
ಪೂರ್ವ ದಿಕ್ಕಿಗೆ ಪ್ರಧಾನ ಬಾಗಿಲನ್ನು ಹೊಂದಿರುವ ಈ ಕೋಟೆ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿದೆ. ಒಂಬತ್ತು ತಿರುವುಗಳು ಹಾಗೂ 30 ಮೆಟ್ಟಿಲುಗಳ ಸಾಲಿವೆ. 120 ಅಡಿ ಎತ್ತರ ಇರುವ ಈ ಕೋಟೆ ಹೆಚ್ಚು ಸುಭದ್ರವಾಗಿದೆ .ಹತ್ತಿರದ ಆಕರ್ಷಣೆಮಲಪ್ರಭಾ ನದಿಯ ಅಣೆಕಟ್ಟು, ಯಲ್ಲಮ್ಮ ಗುಡ್ಡ, ರೇಣುಕಾ ಸಾಗರ, ಪುರದೇಶ್ವರ ದೇಗುಲ ಹಾಗೂ ಅಂಕೇಶ್ವರ ದೇಗುಲಗಳಿಗೂ ಭೇಟಿ ನೀಡಬಹುದು.
ಐತಿಹಾಸಿಕ ಕುರುಹುಗಳನ್ನು ಹೊಂದಿರುವ ಸವದತ್ತಿಯ ಕೋಟೆಯಲ್ಲಿ ಹಲವು ಸಿನಿಮಾಗಳ ಶೂಟಿಂಗ್ ಕೂಡ ನಡೆದಿವೆ. ಕನ್ನಡದ ಅಯ್ಯ ಸೇರಿದಂತೆ ಸಾಕಷ್ಟು ಚಿತ್ರಗಳ ಚಿತ್ರೀಕರಣದಲ್ಲಿ ಸವದತ್ತಿ ಕೋಟೆ ಕಾಣಿಸಿಕೊಂಡಿದೆ.
ವರ್ಷದಲ್ಲಿ ಎರಡ್ಮೂರು ಸಾರಿ ಇಲ್ಲಿಯ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತರು ಕೋಟೆಗೆ ಭೇಟಿ ನೀಡದೆ ತೆರಳುವುದಿಲ್ಲ. ಆದರೆ, ಕಳೆದ ಒಂದು ವರ್ಷದಿಂದ ಕೋವಿಡ್ ಕಾರಣವಾಗಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ವಿರಾಟ್ ಬಗ್ಗೆ ಆಸೀಸ್ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್ ಸಾಮ್ರಾಜ್ಯದ ಕಥೆ
AIADMK-BJP ಮರು ಮೈತ್ರಿ ಸುದ್ದಿ: ನಿರ್ಧಾರ ಬದಲಿಸುವರೇ ಪಳನಿಸ್ವಾಮಿ?
Recipe: ಚಟ್ ಪಟ್ ಅಂತ ಮಾಡಿ ಪನೀರ್ ಪಕೋಡಾ…
Coconut Oil: ತ್ವಚೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದಾಗುವ ಉಪಯೋಗಗಳ ಬಗ್ಗೆ ತಿಳಿಯಿರಿ
Box Office: ದೀಪಾವಳಿಗೆ ರಿಲೀಸ್ ಆದ 8 ಸಿನಿಮಾಗಳಲ್ಲಿ ಗೆದ್ದವರು ಯಾರು? ಸೋತವರು ಯಾರು?
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.