![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 3, 2020, 7:03 PM IST
ಬಿಸಿ ಬಿಸಿಯಾದ ಬಟರ್ ನಾನ್ ಜೊತೆಗೆ ಮಶ್ರೂಮ್ ಮಸಾಲ ಸವಿಯಲು ಚೆನ್ನಾಗಿರುತ್ತದೆ. ಹಾಗಿದ್ದರೆ ಅತೀ ಸರಳ ವಿಧಾನದಲ್ಲಿ ಬಟರ್ ನಾನ್ ಹಾಗೂ ಮಶ್ರೂಮ್ ಮಸಾಲ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.
ಬಟರ್ ನಾನ್:
ಬೇಕಾಗುವ ಸಾಮಾಗ್ರಿಗಳು:
ಮೈದಾ 1/2 ಕೆ.ಜಿ, ಹಾಲಿನ ಪುಡಿ 2 ಚಮಚ, ಅಡುಗೆ ಸೋಡಾ ಸ್ವಲ್ಪ, ಮೊಸರು 1ಕಪ್ ,ಬೆಣ್ಣೆ ,ಉಪ್ಪು ರುಚಿಗೆ ತಕ್ಕಷ್ಟು
ತಯಾರಿಸುವ ವಿಧಾನ:
ಮೈದಾ ಹಿಟ್ಟನ್ನು ಚೆನ್ನಾಗಿ ಜರಡಿ ಇಟ್ಟುಕೊಳ್ಳಿ. ನಂತರ ಒಂದು ಅಗಲವಾದ ಪಾತ್ರೆಯಲ್ಲಿ ಮೈದಾ ಹಿಟ್ಟು, ಹಾಲಿನ ಪುಡಿ, ಅಡುಗೆ ಸೋಡಾ, ಮೊಸರು, ಉಪ್ಪು ಸೇರಿಸಿ ಚೆನ್ನಾಗಿ ಕಲಸಿ ಬೇಕಿದ್ದರೆ ಸ್ವಲ್ಪ ನೀರನ್ನು ಹಾಕಿಕೊಳ್ಳಬಹುದು. ಹಿಟ್ಟನ್ನು ಚಪಾತಿ ಹಿಟ್ಟಿನಂತೆ ಕಲಸಿ ಸುಮಾರು 2-3 ಗಂಟೆಗಳ ಕಾಲ ಹಾಗೆ ಇಡಿ. ಆಮೇಲೆ ಹಿಟ್ಟನ್ನು ಉಂಡೆಗಳನ್ನಾಗಿ ಮಾಡಿಕೊಂಡು ಚಪಾತಿಯಂತೆ ಲಟ್ಟಿಸಿ ಬೆಣ್ಣೆಯಿಂದ ಕಾಯಿಸಿದರೆ ಬಿಸಿಬಿಸಿ ಮೃದುವಾದ ನಾನ್ ಸವಿಯಲು ಸಿದ್ಧ. ಮಶ್ರೂಮ್ ಮಸಾಲ ಜೊತೆಗೆ ತಿನ್ನಲು ಬಹಳ ರುಚಿಕರ.
ಮಶ್ರೂಮ್ ಮಸಾಲ:
ಬೇಕಾಗುವ ಸಾಮಾಗ್ರಿಗಳು
ಮಶ್ರೂಮ್ 1 ಕಪ್, ಈರುಳ್ಳಿ 3, ಟೊಮೇಟೊ 2, ಶುಂಠಿ-ಬೆಳ್ಳುಳ್ಳಿ ಪೇಸ್ಟ್ 1 ಚಮಚ, ಕೊತ್ತಂಬರಿ ಪುಡಿ 1 ಚಮಚ, ಅರಸಿನ ಪುಡಿ 1/2 ಚಮಚ, ಎಣ್ಣೆ 2 ಚಮಚ, ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ.
ತಯಾರಿಸುವ ವಿಧಾನ
ಒಂದು ತವಾದಲ್ಲಿ ಏಲಕ್ಕಿ,ಲವಂಗ ಹುರಿದಿಟ್ಟುಕೊಳ್ಳಿ. ನಂತರ ಟೊಮೇಟೊ, ಗೋಡಂಬಿ, ಈರುಳ್ಳಿಯನ್ನು ಪೇಸ್ಟ್ ಮಾಡಿ ಇಟ್ಟುಕೊಳ್ಳಿ. ತದನಂತರ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮತ್ತು ಟೊಮೇಟೊ , ಗೋಡಂಬಿ, ಈರುಳ್ಳಿ ಪೇಸ್ಟ್, ಮೆಣಸಿನ ಪುಡಿ, ಕೊತ್ತಂಬರಿ ಪುಡಿ, ಅರಸಿನ ಪುಡಿ ಸೇರಿಸಿ 2 ನಿಮಿಷ ಹುರಿಯಿರಿ. ನಂತರ ಮಶ್ರೂಮ್ ಮತ್ತು ಉಪ್ಪು ಸೇರಿಸಿ 15-20 ನಿಮಿಷಗಳವರೆಗೆ ಕುದಿಸಿರಿ. ನಂತರ ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಿ. ಬಟರ್ ನಾನ್ ಜೊತೆ ಸವಿಯಿರಿ.
MahaKumbh Mela: ಪುಣ್ಯಸ್ನಾನದ ಬಗ್ಗೆ ಪ್ರಶ್ನಿಸಿ ಮಲ್ಲಿಕಾರ್ಜುನ ಖರ್ಗೆ ಸಾಧಿಸಿದ್ದೇನು?
Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ
JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?
“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…
ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.